ಬ್ರೇಕಿಂಗ್ ನ್ಯೂಸ್
13-03-24 07:36 pm Mangaluru Correspondent ಕರಾವಳಿ
ಮಂಗಳೂರು, ಮಾ.13: ಮಾಜಿ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಆಗಿರುವ ಕ್ಯಾ. ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ.
ಈ ಬಾರಿ ಲೋಕಸಭೆ ಅಭ್ಯರ್ಥಿ ಬದಲಾವಣೆ ಆಗಲೇಬೇಕೆಂದು ಪಕ್ಷದ ಕಾರ್ಯಕರ್ತರು ಅಭಿಯಾನ ಕೈಗೊಂಡಿದ್ದರು. ಕಾರ್ಯಕರ್ತರ ಮಾತಿಗೆ ಓಗೊಟ್ಟ ಬಿಜೆಪಿ ಹೈಕಮಾಂಡ್ ಮಂಗಳೂರಿನ ಯುವ ನಾಯಕ, 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಅಂದಹಾಗೆ, ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿರುವುದು ಮಹತ್ವದ ನಡೆಯಾಗಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ.
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.
ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟರು ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು. 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜೊತೆಗೂಡಿ ಪಕ್ಷದ ಕೆಲಸ ಮಾಡಿದ್ದರು. 2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದಾರೆ.
ಪಕ್ಷದ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜೊತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜೊತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.
2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿಗ ಚರ್ಚೆ ನಡೆಯುತ್ತಿರುವಾಗಲೇ ಬೃಜೇಶ್ ಚೌಟ ಹೆಸರು ಮುನ್ನೆಲೆಗೆ ಬಂದಿತ್ತು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಬೃಜೇಶ್ ಚೌಟ ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದ್ದರೂ ಅವಿವಾಹಿತರಾಗಿಯೇ ಇದ್ದು ತನ್ನ ಸಂಪೂರ್ಣ ಜೀವನವನ್ನು ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ.
Magalore Captain Brijesh Chowta gets MP ticket from Dakshina Kannada, Nalin Kateel out. Capt Chowta who served as an officer of the 7th Battalion of 8 Gorkha Rifles had returned hometown in 2011 after opting for voluntary retirement. He has also served as the District General Secretary of Yuva Morcha and District BJP General Secretary, during this year’s Assembly election he was in-charge of party affairs in Byndoor constituency.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm