ಬ್ರೇಕಿಂಗ್ ನ್ಯೂಸ್
27-03-24 10:53 pm Mangalore Correspondent ಕರಾವಳಿ
ಮಂಗಳೂರು, ಮಾ.27: ಮಂಗಳೂರು ವಿಶ್ವವಿದ್ಯಾನಿಲಯದ ಸೇವೆಯಲ್ಲಿದ್ದು ಈಗ ವಯೋನಿವೃತ್ತಿಯನ್ನು ಹೊಂದಿರುವ ಅನೇಕ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳು ನಿವೃತ್ತಿಯ ನಂತರದಲ್ಲಿ ದೊರೆಯುವ ಆರ್ಥಿಕ ಸೌಲಭ್ಯಗಳು ದೊರೆಯದೇ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ. ಕೂಡಲೇ ಅವರಿಗೆ ಸಿಗಬೇಕಾದ ನಿವೃತ್ತಿ ಸೌಲಭ್ಯಗಳನ್ನು ನೀಡಲು ರಾಜ್ಯ ಸರ್ಕಾರ ಮುತುವರ್ಜಿ ವಹಿಸಬೇಕು ಎಂದು ಮಂಗಳೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಹರೀಶ್ ಆಚಾರ್ಯ ಆಗ್ರಹಿಸಿದ್ದಾರೆ.
ಆಗಸ್ಟ್ 2021ರಿಂದ ಇದುವರೆಗೆ ಸುಮಾರು 15 ಪ್ರಾಧ್ಯಾಪಕರು ಮತ್ತು ಸುಮಾರು 26 ಬೋಧಕೇತರ ಸಿಬ್ಬಂದಿಗಳು ವಯೋ ನಿವೃತ್ತಿಯನ್ನು ಹೊಂದಿದ್ದಾರೆ, ಇದುವರೆಗೆ ಅವರುಗಳಿಗೆ ನಿವೃತ್ತಿ ನಂತರದಲ್ಲಿ ದೊರಕುವ ಗಳಿಕೆ ರಜೆ ನಗದೀಕರಣ ಮತ್ತು ಸಂಚಿತ ನಿಧಿಯ ಸೌಲಭ್ಯಗಳು ದೊರೆಯದೆ ಇದ್ದು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸಿಬ್ಬಂದಿ ಸೇವಾ ನಿಯಮದಡಿಯಲ್ಲಿ ಗಳಿಕೆ ರಜಾ ನಗದೀಕರಣ ಮತ್ತು ಸಂಚಯ ನಿಧಿಯ ಆರ್ಥಿಕ ಸೌಲಭ್ಯಗಳನ್ನು ನಿವೃತ್ತಿ ನಂತರದಲ್ಲಿ ತಕ್ಷಣವೇ ಪಡೆಯುವುದು ಪ್ರತಿಯೋರ್ವ ಸಿಬ್ಬಂದಿಯ ಮೂಲಭೂತ ಹಕ್ಕು. ಆದರೆ ಮಂಗಳೂರು ಮಂಗಳೂರು ವಿಶ್ವವಿದ್ಯಾನಿಲಯವು ಕಳೆದ ಮೂರು ವರ್ಷಗಳಿಂದ ನಿವೃತ್ತಿ ಹೊಂದಿದ ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳ ಆರ್ಥಿಕ ಸೌಲಭ್ಯಗಳನ್ನು ಇತ್ಯರ್ಥ ಪಡಿಸದೇ ಬಾಕಿ ಉಳಿಸಿಕೊಂಡಿದೆ. ಇದರಿಂದ ಅಂತಹ ಸಿಬ್ಬಂದಿಗಳ ಬದುಕು ಅತಂತ್ರಗೊಂದಿದೆ. ಆದುದರಿಂದ ರಾಜ್ಯ ಸರಕಾರವು ತಕ್ಷಣವೇ ಮಧ್ಯ ಪ್ರವೇಶಿಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಸಿಬ್ಬಂದಿಗಳ ಗಳಿಕೆ ರಜಾ ನಗದೀಕರಣ, ಸಂಚಿತ ನಿಧಿ, ಭವಿಷ್ಯ ನಿಧಿ ಸೇರಿದಂತೆ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಅದರದ್ದೇ ಆದ ನಿಯಮಾವಳಿಯಂತೆ ವಿನಿಯೋಗಿಸಬೇಕಾದ್ದು ಉದ್ಯೋಗದಾತನ ಕರ್ತವ್ಯವಾಗಿದೆ. ಇಲ್ಲಿ ವಿಶ್ವವಿದ್ಯಾನಿಲಯವು ಸಿಬ್ಬಂದಿಗಳ ನಿಧಿಯನ್ನು ಸಮರ್ಪಕವಾಗಿ ವಿನಿಯೋಗಿಸದೇ ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಕೇಳಿಬರುತ್ತಿವೆ. ಆದುದರಿಂದ ರಾಜ್ಯ ಸರಕಾರ ಈ ಪ್ರಕರಣವನ್ನು ವಿಶ್ವವಿದ್ಯಾನಿಲಯದ ಮಟ್ಟದಲ್ಲಿ ಮಾತ್ರವೇ ನೋಡುವುದು ಸೂಕ್ತವಲ್ಲ. ವಿವಿಗಳು ರಾಜ್ಯ ಸರಕಾರದ ಅಧೀನ ಸಂಸ್ಥೆಗಳಾಗಿದ್ದು ಉದ್ಯೋಗದಾತನಾಗಿ ವಿವಿಗಳಿಗೆ ಇರುವಷ್ಟೇ ಜವಾಬ್ದಾರಿಯು ರಾಜ್ಯ ಸರಕಾರಕ್ಕಿದೆ.
ವಿಶ್ವವಿದ್ಯಾನಿಲಯದ ಮಟ್ಟದಲ್ಲಿ ಯಾವುದೇ ಹಣಕಾಸಿನ ದುರುಪಯೋಗ ಅಥವಾ ಕರ್ತವ್ಯ ಲೋಪಗಳಾಗಿದ್ದಲ್ಲಿ ರಾಜ್ಯ ಸರಕಾರವು ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ಹಾಗೆಯೇ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಸಲ್ಲತಕ್ಕ ಆರ್ಥಿಕ ಸೌಲಭ್ಯಗಳನ್ನು ತಕ್ಷಣವೇ ಒದಗಿಸಲು ರಾಜ್ಯ ಸರಕಾರವು ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹರೀಶ್ ಆಚಾರ್ಯ ಆಗ್ರಹಿಸಿದ್ದಾರೆ.
Many professors and staff of Mangalore University, who are in service and are now retired, have been forced to wander from office to office due to lack of financial facilities available after retirement. Harish Acharya, a former syndicate member of Mangalore University, demanded that the state government should take immediate steps to provide them with the retirement benefits they deserve.
29-08-25 05:59 pm
HK News Desk
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 03:48 pm
Mangalore Correspondent
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm