ಬ್ರೇಕಿಂಗ್ ನ್ಯೂಸ್
30-03-24 10:13 pm Mangalore Correspondent ಕರಾವಳಿ
ಮಂಗಳೂರು, ಮಾ.30: ನಳಿನ್ ಕುಮಾರ್ ಕಟೀಲ್ ಅಭಿವೃದ್ದಿ ವಿಚಾರದಲ್ಲಿ ದೇಶದಲ್ಲಿಯೇ ನಂಬರ್ ವನ್ ಸಂಸದ ಎಂಬ ರೀತಿ ಬಿಂಬಿಸಿಕೊಳ್ಳುತ್ತಿದ್ದರು. ಹಾಗಿದ್ದರೆ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಯಾಕೆ ಸಿಕ್ಕಿಲ್ಲ? ನಳಿನ್ ಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಆಗಿಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಅಭಯಚಂದ್ರ ಜೈನ್ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಳಿನ್ ಸಂಸದರಾಗಿ ಅಭಿವೃದ್ಧಿ ಕೆಲಸವನ್ನೇ ಮಾಡಿಲ್ಲ. ಹಾಗಿದ್ದರೂ, ನಂಬರ್ ವನ್ ಸಂಸದ ಎಂದು ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದ್ದರು. ಹಿಂದೆ ಕಾಂಗ್ರೆಸ್ ಸಂಸದರಿದ್ದ ಕಾಲದಲ್ಲಿ ಮಾತ್ರ ಕಣ್ಣಿಗೆ ಕಾಣುವಂತಹ ಅಭಿವೃದ್ಧಿ ಕೆಲಸಗಳು ನಡೆದಿವೆ. ಕಾಂಗ್ರೆಸ್ ಕಾಲದಲ್ಲಿ ಆರಂಭವಾಗಿದ್ದ ಕೆಲವು ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಕೂಡ ಬಿಜೆಪಿಯವರಿಂದ ಸಾಧ್ಯವಾಗಿಲ್ಲ. ಬಿಜೆಪಿ ಕೇವಲ ಅಪಪ್ರಚಾರ, ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಚುನಾವಣೆ ಗೆಲ್ಲುತ್ತಿದೆ. ಜನಸಾಮಾನ್ಯರಿಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ಇದು ಈಗ ಜನರಿಗೆ ಅರ್ಥವಾಗುತ್ತಿದೆ. ಈ ಬಾರಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಬೆಲೆ ಹೆಚ್ಚಳ, ಜಿಎಸ್ ಟಿ ಮೊದಲಾದವುಗಳಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದರೆ ಪ್ರಧಾನಿ ಮೋದಿ, ಬಿಜೆಪಿಯವರು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಯುವಕರು ಮೋದಿಯ ಭಾಷಣಕ್ಕೆ ಮರುಳಾಗುತ್ತಿದ್ದಾರೆ. ಅವರಿಗೆ ಕಾಂಗ್ರೆಸ್ ದೇಶಕ್ಕೆ ನೀಡಿದ ಕೊಡುಗೆಯನ್ನು ತಿಳಿಸಬೇಕಾಗಿದೆ.
ದೇಶಕ್ಕಾಗಿ ಮೋದಿಗೆ ಮತ ಎನ್ನುತ್ತಿದ್ದಾರೆ. ಹಾಗಾದರೆ ನಮ್ಮ ದೇಶ ಈಗ ಸ್ವತಂತ್ರವಾಗಿಲ್ಲವೆ ? ನಾವು ಇಷ್ಟರವರೆಗೆ ಊಟ ಮಾಡುತ್ತಿರಲಿಲ್ಲವೆ? ರಕ್ಷಣೆ ಇರಲಿಲ್ಲವೆ ? ದೇಶದಲ್ಲಿ ಬಡತನ ನಿರ್ಮೂಲನೆ ಮಾಡಿದ್ದು ಕಾಂಗ್ರೆಸ್ ಎಂದು ಹೇಳಿದ ಅಭಯಚಂದ್ರ, ಮಂಗಳೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಮಾಣಿಕ, ಸರಳ ವ್ಯಕ್ತಿತ್ವದ ಪದ್ಮರಾಜ್ ಅವರನ್ನು ಕಣಕ್ಕಿಳಿಸಿದ್ದು ಅವರ ಗೆಲುವು ಖಚಿತ. ಬಿಜೆಪಿ ಸುಳ್ಳನ್ನೇ ಬಂಡವಾಳ ಮಾಡಿಕೊಂಡಿದೆ. ಹಿಂದುತ್ವದ ಕೋಟೆ ಬೇಧಿಸಿ ಜಯ ಸಾಧಿಸುತ್ತೇವೆ. ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತರುತ್ತೇವೆ ಎಂದು ಹೇಳಿದರು.
ಮೊಯಿಲಿಯವರಿಗೆ ಈ ಬಾರಿ ಟಿಕೆಟ್ ಸಿಗದಿರುವ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ವಯಸ್ಸಿನ ಕಾರಣಕ್ಕೆ ಮೊಯಿಲಿಯವರಿಗೆ ಟಿಕೆಟ್ ಸಿಕ್ಕಿಲ್ಲ. ಅವರಲ್ಲಿ ಜಾತಿ, ಹಣ ಬಲವೂ ಇಲ್ಲ. ಆದರೆ ಅವರಲ್ಲಿ ಇನ್ನೂ ಕೂಡ ಕೆಲಸ ಮಾಡುವ ಶಕ್ತಿ, ಹುಮ್ಮಸ್ಸು ಇದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಶುಭೋದಯ ಆಳ್ವ, ನೀರಜ್ ಪಾಲ್, ಪ್ರಧಾನ ಕಾರ್ಯದರ್ಶಿಗಳಾದ ಟಿ.ಕೆ.ಸುಧೀರ್, ವಿಕಾಸ್ ಶೆಟ್ಟಿ, ಕಾರ್ಯದರ್ಶಿ ನಝೀರ್ ಬಜಾಲ್ ಉಪಸ್ಥಿತರಿದ್ದರು.
Mangalore Former Congress MLA Abhayachandra Jain mocks at Nalin Kateel. How can no one MP Nalin missed his ticket for elections.
29-08-25 05:59 pm
HK News Desk
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 03:48 pm
Mangalore Correspondent
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm