ಬ್ರೇಕಿಂಗ್ ನ್ಯೂಸ್
31-03-24 12:53 pm Mangaluru Correspondent ಕರಾವಳಿ
ಪುತ್ತೂರು, ಮಾ.31: ಅಕ್ರಮವಾಗಿ ದನ ಸಾಗಿಸುತ್ತಿದ್ದ ಕಾರು ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಮರ್ಧಾಳ ಜಂಕ್ಷನ್ನಲ್ಲಿ ಶನಿವಾರ ಸಂಜೆ ನಡೆದಿದೆ, ಹಿಂದು ಸಂಘಟನೆಗಳ ಕಾರ್ಯಕರ್ತರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ್ದು ಪೊಲೀಸರಿಗೆ ಆರೋಪಿಗಳನ್ನು ಬಂಧಿಸಲು ಗಡುವು ವಿಧಿಸಿದ್ದಾರೆ.
ಮರ್ಧಾಳ ನೆಕ್ಕಿತ್ತಡ್ಕ ನಿವಾಸಿ ವಿಠಲ ರೈ ಮೃತ ವ್ಯಕ್ತಿ. ಮರ್ದಾಳ ಪೇಟೆಯಲ್ಲಿ ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 800 ಕಾರನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದು ಆರೋಪಿಗಳು ಮರ್ಧಾಳದ ರಶೀದ್ ಎಂಬವರ ಮನೆಯ ಮುಂದೆ ಕಾರು ನಿಲ್ಲಿಸಿ, ಕಾರಿನಲ್ಲಿದ್ದ ಎರಡು ದನಗಳನ್ನು ಪಕ್ಕದ ತೋಟದಲ್ಲಿ ಕಟ್ಟಿ ಹಾಕಿ ಪರಾರಿಯಾಗಿದ್ದಾರೆ.
ಕಾರಿನ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಹಿಂದು ಸಂಘಟನೆ ಕಾರ್ಯಕರ್ತರು ಆರೋಪಿ ಬಂಧನಕ್ಕೆ ಒತ್ತಾಯಿಸಿ ಮತ್ತು ಘಟನೆಯನ್ನು ಖಂಡಿಸಿ ರಾಜ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಬಳಿಕ ಕಡಬ ಆಸ್ಪತ್ರೆ ಮುಂಭಾಗದಲ್ಲಿಯೂ ಆಕ್ರೋಶ ವ್ಯಕ್ತಪಡಿಸಿದರು. ಕಡಬ ಸರಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಕುಳಿತು ರಾತ್ರಿ ಧರಣಿ ನಡೆಸಿದ್ದು, ರಾತ್ರಿಯಾಗುತ್ತಿದ್ದಂತೆ ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಗಮಿಸಿದ್ದು ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಮಧ್ಯರಾತ್ರಿ ಸ್ಥಳಕ್ಕೆ ಆಗಮಿಸಿದ ಎಸ್ಪಿ ರಿಷ್ಯಂತ್ ಸಿಂಗ್, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಪ್ರತಿಭಟನೆ ನಿರತರು ಭಾನುವಾರದ ಒಳಗೆ ಆರೋಪಿಯನ್ನು ಬಂಧಿಸುವಂತೆ ಗಡುವು ವಿಧಿಸಿದ್ದಾರೆ.
In Kadaba, Sangh Parivar workers blocked the highway late on Saturday night, demanding the arrest of the accused in a fatal car collision. The car was allegedly being used for illegal transportation of cattle. The incident resulted in the death of Vithala Rai, a resident of Acchila Patte, who was hit by a car while crossing the road. The accused fled the scene, but two persons have been arrested in connection with the accident.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am