ಬ್ರೇಕಿಂಗ್ ನ್ಯೂಸ್
31-03-24 04:17 pm Mangaluru Correspondent ಕರಾವಳಿ
ಬಂಟ್ವಾಳ, ಮಾ.31: ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಶವ ಮನೆಯ ಪಕ್ಕದ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ, ವಾಮದಪದವು ನಿವಾಸಿ ಪದ್ಮನಾಭ ಸಾಮಂತ (30) ಮೃತ ಯುವಕ. ಸರಕಾರಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ಪದ್ಮನಾಭ ಸಾಮಂತ ಯುವಕನೊಬ್ಬನಲ್ಲಿ 1.5 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿರುವ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ಪದ್ಮನಾಭನನ್ನು ಕರೆ ಮಾಡಿ, ವಿಚಾರಣೆಗೆ ಬರುವಂತೆ ತಿಳಿಸಿದ್ದರು.
ಎರಡು ದಿನಗಳಿಂದ ಯಾರಿಗೂ ಸಿಗದೇ, ಫೋನನ್ನೂ ಸ್ವೀಕರಿಸದೇ ಇದ್ದ ಪದ್ಮನಾಭನ ಬಗ್ಗೆ ಹುಡುಕಾಟ ನಡೆಸಲಾಗಿತ್ತು. ಭಾನುವಾರ ಬೆಳಗ್ಗೆ ಆತನ ಮನೆಯಿದ್ದ ಪಕ್ಕದ ಗುಡ್ಡದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೇಲ್ನೋಟಕ್ಕೆ ಪದ್ಮನಾಭ ಆತ್ಮಹತ್ಯೆ ಮಾಡಿಕೊಂಡ ರೀತಿಯಿದೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಶವ ಕೊಳೆತಿದೆ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ಪೋಸ್ಟ್ ಮಾರ್ಟಂ ನಡೆಸಲು ವೈದ್ಯರಿಗೆ ಒಪ್ಪಿಸಿದ್ದಾರೆ. ಸ್ಥಳೀಯರು ಕೊಲೆಗೈದ ಬಗ್ಗೆಯೂ ಶಂಕೆ ವ್ಯಕ್ತಪಡಿಸಿದ್ದಾರೆ.
ಪದ್ಮನಾಭ ಸಾಮಂತ ಅವರು ಫೇಸ್ಬುಕ್ ಜಾಲತಾಣದಲ್ಲಿ ತುಂಬ ಏಕ್ಟಿವ್ ಆಗಿದ್ದರು. ಬಿಜೆಪಿ ಬಗ್ಗೆ, ಭ್ರಷ್ಟಾಚಾರದ ಬಗ್ಗೆ ಪೋಸ್ಟ್ ಗಳನ್ನು ಹಾಕುತ್ತಿದ್ದರು. ಹೀಗಾಗಿ ಪದ್ಮನಾಭ ಸಾವಿನ ಬಗ್ಗೆ ಶಂಕಿಸಿ ಕಾಂಗ್ರೆಸ್ ಕಾರ್ಯಕರ್ತರು ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ.
Read; ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕಾಂಗ್ರೆಸ್ ಮುಖಂಡ ; ಪುಂಜಾಲಕಟ್ಟೆ ಠಾಣೆಗೆ ದೂರು
Congress worker facing fraud charges commits suicide. The body of a young man, facing fraud charges, was discovered hanging in Wamadapadav, suspected to be a suicide. However, comments on social media have raised doubts about the possibility of murder.The deceased, identified as Padmanabh Samantha, hailed from Timarada in Vamadapadav.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm