ಬ್ರೇಕಿಂಗ್ ನ್ಯೂಸ್
03-04-24 04:25 pm Mangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರು ಅದ್ದೂರಿ ಮೆರವಣಿಗೆಯಲ್ಲಿ ತೆರಳಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಮೊದಲಿಗೆ ಶರವು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಕುದ್ರೋಳಿಯಿಂದ ಮೆರವಣಿಗೆ ಆರಂಭಿಸಿದರು. ನಾಮಪತ್ರ ಸಲ್ಲಿಕೆಯ ಮೆರವಣಿಗೆಗೆ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಚಾಲನೆ ನೀಡಿದರು. ತೆರೆದ ವಾಹನದಲ್ಲಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ರಮಾನಾಥ ರೈ ಸೇರಿದಂತೆ ಮಂಗಳೂರಿನ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.
ಕಲ್ಲಡ್ಕದ ಗೊಂಬೆಯಾಟ, ಚೆಂಡೆ ವಾದನ, ಹುಲಿ ವೇಷ, ಕೊಂಬು, ಕಹಳೆಗಳ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಕುದ್ರೋಳಿಯಿಂದ ರಥಬೀದಿಯಾಗಿ ಹಂಪನಕಟ್ಟೆ, ಕ್ಲಾಕ್ ಟವರ್, ಸ್ಟೇಟ್ ಬ್ಯಾಂಕ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ತೆರೆದ ವಾಹನದಲ್ಲಿ ನಿಂತುಕೊಂಡೇ ಅಭ್ಯರ್ಥಿ ಪದ್ಮರಾಜ್ ಕೈಬೀಸುತ್ತಾ ಸಾಗಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ, ಲೋಕಸಭೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪುತ್ತೂರು ಶಾಸಕ ಅಶೋಕ್ ರೈ, ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಕಪ್ಪು ಚುಕ್ಕೆಯಿಂದಾಗಿ ಹೂಡಿಕೆ ಬರುತ್ತಿಲ್ಲ
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪದ್ಮರಾಜ್, ಕಳೆದ 33 ವರ್ಷಗಳಿಂದ ಈ ಜಿಲ್ಲೆಯ ಮೇಲೆ ಕೋಮು ಸೂಕ್ಷ್ಮ ಪ್ರದೇಶ ಎಂಬ ಕಪ್ಪು ಚುಕ್ಕೆ ಬಿದ್ದಿದೆ. ವಿಶಿಷ್ಟ ಸಂಸ್ಕೃತಿಯ ಜಿಲ್ಲೆಯಲ್ಲಿ ಬಿಜೆಪಿ ಆಡಳಿತದಲ್ಲಿ ಕೋಮು ಸಾಮರಸ್ಯ ಕದಡಿದ್ದು ದೊಡ್ಡ ಹಿನ್ನಡೆಯಾಗಿದೆ. ಅದನ್ನು ನಿವಾರಿಸುವುದೇ ನಮ್ಮ ಉದ್ದೇಶ. ಜಾತಿ ಧರ್ಮ ಮೀರಿದ ಬಾಂಧವ್ಯ ಮಾಯವಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಹೂಡಿಕೆ ಆಗುತ್ತಿಲ್ಲ. ಜನರು ಇದರ ಬಗ್ಗೆ ಅರಿವು ಮೂಡಿಸಿಕೊಂಡಿದ್ದು ಬದಲಾವಣೆ ಬಯಸಿದ್ದಾರೆ. ನಿರುದ್ಯೋಗ ಹೆಚ್ಚಳದಿಂದಾಗಿ ಜನರು ಕಾಂಗ್ರೆಸಿನತ್ತ ವಾಲಿದ್ದು, ಮತವಾಗಿ ಪರಿವರ್ತನೆಯಾಗಲಿದೆ.
ರಾಜ್ಯ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳಿಂದ ಗೃಹಿಣಿಯ ಮುಖದಲ್ಲಿ ನಗು ಮೂಡಿಸಿದೆ. ಬಡ ಕುಟುಂಬಗಳಿಗೆ ಶಕ್ತಿ ನೀಡಿದೆ. ನಾವು ಯಾರ ಬಗ್ಗೆಯೂ ದ್ವೇಷ ಮಾಡುವುದಿಲ್ಲ. ಟೀಕೆಯನ್ನೂ ಮಾಡುವುದಿಲ್ಲ. ವಾಸ್ತವ ಏನಿದೆಯೋ ಅದನ್ನು ಜನರ ಮುಂದಿಡುತ್ತೇನೆ. ಜಾತಿ ರಾಜಕಾರಣ ಮಾಡುವುದಿಲ್ಲ. ಜನರ ಸ್ಪಂದನೆ ಉತ್ತಮವಾಗಿದ್ದು, ಈ ಬಾರಿ ನೂರಕ್ಕೆ ನೂರು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.
Dakshina Kannada (DK) Congress MP candidate Padmaraj R filed his nomination at the DC’s office on Wednesday, April 3, for the upcoming Lok Sabha (LS) elections.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am