ಬ್ರೇಕಿಂಗ್ ನ್ಯೂಸ್
04-04-24 10:17 pm Mangalore Correspondent ಕರಾವಳಿ
ಮಂಗಳೂರು, ಎ.4: ಬರದ ವಿಚಾರದಲ್ಲಿ ಕರ್ನಾಟಕಕ್ಕೆ ಒಂದು ರೂ. ಕೊಡದ ಕೇಂದ್ರ ಸರ್ಕಾರ ಈಗ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಸುಳ್ಳು ಹೇಳುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರಪರಿಹಾರದ ವಿಚಾರದಲ್ಲಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವರು, ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಅನಿವಾರ್ಯವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಅಮಿತ್ ಶಾ ಅವರು ತಾವು ಆಡಿದ ಮಾತುಗಳನ್ನೇ ಸುಪ್ರೀಂ ಕೋರ್ಟ್ ಮುಂದೆ ಅಫಿಡವಿಟ್ ರೂಪದಲ್ಲಿ ಸಲ್ಲಿಸಲಿ ಎಂದು ಸವಾಲು ಹಾಕಿದರು.
ಕೇಂದ್ರದ ತೆರಿಗೆ ಪಾಲಿನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಆಗಿರುವ ಅನ್ಯಾಯವನ್ನು ಅಂಕಿ ಅಂಶಗಳ ಸಮೇತ ಬಿಚ್ಚಿಟ್ಟರು. ಕೇಂದ್ರ ಸರ್ಕಾರ ಉತ್ತರ ಪ್ರದೇಶ ಒಂದು ರಾಜ್ಯಕ್ಕೆ ನೀಡುತ್ತಿರುವ ತೆರಿಗೆ ಪಾಲು, ಇಡೀ ದಕ್ಷಿಣ ಭಾರತದ ಐದು ರಾಜ್ಯಗಳಿಗೆ ಹೊಲಿಸಿ ಲೆಕ್ಕ ಹಾಕಿದರೂ ಸಮನಾಗಿಲ್ಲ. ಉತ್ತರ ಪ್ರದೇಶದ ಒಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಪ್ರತಿ ವರ್ಷ 2,18,216 ಕೋಟಿ ತೆರಿಗೆ ಪಾಲು ವಿತರಿಸುತ್ತಿದೆ. ಆದರೆ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಐದು ರಾಜ್ಯಗಳು ಒಟ್ಟಿಗೆ ಸೇರಿಸಿ ಲೆಕ್ಕ ಹಾಕಿದಾಗ ಕೇಂದ್ರದಿಂದ ಪಡೆಯುತ್ತಿರುವ ತೆರಿಗೆ ಪಾಲು 1,92,725 ಕೋಟಿ ಮಾತ್ರ. 5 ರಾಜ್ಯಗಳ ದಕ್ಷಿಣ ಭಾರತ ಉತ್ತರ ಪ್ರದೇಶ ಒಂದು ರಾಜ್ಯ ಪಡೆಯುವಷ್ಟು ತೆರಿಗೆ ಪಾಲನ್ನ ಹೊಂದಿಲ್ಲವೇ? ದಕ್ಷಿಣ ಭಾರತದ ರಾಜ್ಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ಧೋರಣೆ ಇದರಲ್ಲಿ ಎದ್ದು ಕಾಣುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕಳೆದ 10 ವರ್ಷಗಳಲ್ಲಿ ಕರ್ನಾಟಕ ಒಂದೇ ರಾಜ್ಯ ಕೇಂದ್ರ ಸರ್ಕಾರಕ್ಕೆ 12 ಲಕ್ಷ ಕೋಟಿ ತೆರಿಗೆ ಪಾವತಿಸಿದೆ. ಆದರೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಕೊಟ್ಟಿರುವ ತೆರಿಗೆ ಪಾಲು ಕೇವಲ 2.95 ಲಕ್ಷ ಕೋಟಿ ಮಾತ್ರ. ದೇಶಕ್ಕೆ ಅತಿ ಹೆಚ್ಚು ಜಿಎಸ್ ಟಿ ಕಟ್ಟುವ ಎರಡನೇ ರಾಜ್ಯ ಕರ್ನಾಟಕದಲ್ಲಿ ಪ್ರತಿಯೊಬ್ಬ ಕನ್ನಡಿಗ ಸರಾಸರಿ 13,428 ರೂ. ಜಿಎಸ್ ಟಿ ಕಟ್ಟುತ್ತಾನೆ. ಆದರೆ ಉತ್ತರ ಪ್ರದೇಶದಲ್ಲಿ ಪ್ರತಿಯೊಬ್ಬರು ಸರಾಸರಿ 2793 ರೂ. ಮಾತ್ರ ಜಿಎಸ್ ಟಿ ಕಟ್ಟುತ್ತಾರೆ. ಹೆಚ್ಚು ತೆರಿಗೆ ಕಟ್ಟುವ ಕನ್ನಡಿಗನಿಗೆ ಕೇಂದ್ರ ಬಿಜೆಪಿ ಸರ್ಕಾರ ಕೊಟ್ಟಿದ್ದು ಏನೂ ಇಲ್ಲ ಎಂದು ಸಚಿವ ಗುಂಡೂರಾವ್ ವಿವರಿಸಿದರು.
ದೇಶದಲ್ಲಿಯೇ ಐಟಿ ರಫ್ತು ಮಾಡುವಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿದೆ. ಶೇ. 41ರಷ್ಟು ಐಟಿ ರಫ್ತಿನ ಮೂಲಕ 602 ಬಿಲಿಯನ್ ಡಾಲರ್ ವ್ಯವಹಾರವನ್ನ ಕರ್ನಾಟಕ ಒಂದೇ ರಾಜ್ಯ ನಡೆಸುತ್ತಿದೆ. ದೇಶದ ಆದಾಯಕ್ಕೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸಹಕಾರಿಯಾಗಿರುವ ಕರ್ನಾಟಕವನ್ನ ಕೇಂದ್ರ ಬಿಜೆಪಿ ಕಡೆಗಣಿಸಿದೆ. ನಾವು ಕಟ್ಟುವ ತೆರಿಗೆ ನಮಗೆ ಕೊಡಲ್ಲ. ಬರದಿಂದ ಜನರು ತತ್ತರಿಸಿರುವಾಗ ಅದರಲ್ಲೂ ಅನ್ಯಾಯ. ಕರ್ನಾಟಕದವರು ಭಾರತೀಯರಲ್ಲವೇ.. ದೇಶದ ಬಗ್ಗೆ ಮಾತನಾಡುವ ಬಿಜೆಪಿ, ದಕ್ಷಿಣ ಭಾರತ ಸೇರಿದಂತೆ ಕನ್ನಡಿಗರನ್ನು ಕಡೆಗಣಿಸಿರುವುದಕ್ಕೆ ಲೋಕಸಭಾ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭೆಯಲ್ಲಿ ಕರಾವಳಿ ಭಾಗದಲ್ಲಿ ಈ ಬಾರಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ. 33 ವರ್ಷಗಳಿಂದ ದಕ್ಷಿಣ ಕನ್ನಡದ ಜನರು ಬಿಜೆಪಿಯನ್ನ ನೋಡಿದ್ದಾರೆ. ಈಗ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ನಿಂದ ಪದ್ಮರಾಜ್ ಪೂಜಾರಿ ಒಳ್ಳೆಯ ಅಭ್ಯರ್ಥಿಯಾಗಿದ್ದು, ಜನರು ಕೂಡ ಈ ಬಾರಿ ಕಾಂಗ್ರೆಸ್ ಬೆಂಬಲಿಸುವ ಇಚ್ಚೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Continuing the tirade against Union Home Minister Amit Shah’s recent statement accusing the Karnataka government of delay in submitting memorandum for drought relief, Health and Family Welfare Minister Dinesh Gundu Rao said on Thursday that Mr. Shah should place this statement in the form of an affidavit before the Supreme Court in the petition filed by Karnataka.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am