ಬ್ರೇಕಿಂಗ್ ನ್ಯೂಸ್
06-04-24 12:03 pm Mangalore Correspondent ಕರಾವಳಿ
ಪುತ್ತೂರು, ಎ.6: ಸುಬ್ರಹ್ಮಣ್ಯ, ಕೂಜುಮಲೆಯಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಾಚರಣೆ ನಡುವೆಯೇ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಬಳಿಯ ಚೇರು ಎಂಬಲ್ಲಿ ನಿನ್ನೆ ರಾತ್ರಿ 7 ಗಂಟೆಗೆ ಆರು ಮಂದಿಯಿದ್ದ ನಕ್ಸಲರು ಮನೆಯೊಂದಕ್ಕೆ ಭೇಟಿ ನೀಡಿದ್ದಾರೆ. ಶಸ್ತ್ರಸಜ್ಜಿತರಾಗಿದ್ದ ನಕ್ಸಲರು ಮನೆಯಲ್ಲಿ ಊಟ ಕೇಳಿ, ಅಲ್ಲಿಯೇ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಬಳಿಕ ಮನೆಯಿಂದ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ.
ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದರು. ಅದಕ್ಕೂ ಒಂದು ವಾರದ ಹಿಂದೆ ಕೂಜುಮಲೆ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡು ಆತಂಕ ಮೂಡಿಸಿದ್ದರು. ಈ ಭಾಗದಲ್ಲಿ ಎಎನ್ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆಯೇ ನಕ್ಸಲರು ಮತ್ತೆ ಪ್ರತ್ಯಕ್ಷರಾಗಿರುವುದು ಆತಂಕ ಮೂಡಿಸಿದೆ.
ಪಶ್ಚಿಮ ಘಟ್ಟ ವ್ಯಾಪ್ತಿಯ ದಕ್ಷಿಣ ಕನ್ನಡ - ಕೊಡಗು ಗಡಿಭಾಗದಲ್ಲಿ ನಕ್ಸಲರು ಆಗಿಂದಾಗ್ಗೆ ಪ್ರತ್ಯಕ್ಷರಾಗುತ್ತಿರುವುದು ಪಶ್ಚಿಮ ಘಟ್ಟದ ಅರಣ್ಯ ನಕ್ಸಲ್ ಕಾರಿಡಾರ್ ಆಗುತ್ತಿದೆಯಾ ಎನ್ನುವ ಪ್ರಶ್ನೆ ಮೂಡಿದೆ. ಮೋಸ್ಟ್ ವಾಂಡೆಟ್ ನಕ್ಸಲರಾದ ವಿಕ್ರಮ ಗೌಡ, ಮುಂಡಗಾರು ಲತಾ ತಂಡವೇ ಇಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ANF combing, naxals moment found at Kadaba in Mangalore.
10-01-26 01:17 pm
Bangalore Correspondent
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm