ಬ್ರೇಕಿಂಗ್ ನ್ಯೂಸ್
12-04-24 10:54 pm Mangaluru Correspondent ಕರಾವಳಿ
ಮಂಗಳೂರು, ಎ.12: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 14ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನ ಮಂತ್ರಿಗಳ ಭದ್ರತೆ ಹಾಗೂ ಸಾರ್ವಜನಿಕರ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿ ಅಂದು ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು, ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ಪಾರ್ಕಿಂಗ್ ಸ್ಥಳಗಳನ್ನು ನಿಗದಿಪಡಿಸಲಾಗಿದೆ.
ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್ಬಾಗ್ – ಬಲ್ಲಾಳ್ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
1. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
2. ಕೆ.ಎಸ್.ಅರ್.ಟಿ.ಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
4. ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಬರುವ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಿದೆ.
5. ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
6. ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
7. ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
8. ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್ ಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
9. ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
10. ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
ವಾಹನ ಸಂಚಾರದ ಪರ್ಯಾಯ ವ್ಯವಸ್ಥೆ ವಿವರ
ಉಡುಪಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಎಲ್ಲಾ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕೊಟ್ಟಾರ ಚೌಕಿ ಜಂಕ್ಷನ್ – ಕೆಪಿಟಿ ಜಂಕ್ಷನ್ – ನಂತೂರು ಜಂಕ್ಷನ್ – ಶಿವಭಾಗ್ ಜಂಕ್ಷನ್ – ಸೆಂಟ್ ಆಗ್ನೇಸ್ – ಹಾರ್ಟಿಕಲ್ಚರ್ ಜಂಕ್ಷನ್ – ಲೋವರ್ ಬೆಂದೂರು – ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
2. ಪಂಪುವೆಲ್ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್ಬ್ಯಾಂಕ್ ಕಡೆಯಿಂದ ಪಂಪ್ವಲ್ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
3. ಕಾರ್ಸ್ಟ್ರೀಟ್ – ಕುದ್ರೋಳಿ ಕಡೆಯಿಂದ ಬರುವ ಎಲ್ಲಾ ವಾಹನಗಳನ್ನು ಮಣ್ಣಗುಡ್ಡೆ, ಉರ್ವಾ ಮಾರ್ಕೆಟ್ ಮುಖಾಂತರ ಅಶೋಕನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸುವುದು.
4. ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಮುಖಾಂತರ ಕೊಟ್ಟಾರ ಕ್ರಾಸ್/ ಕುಂಟಿಕಾನದ ಕಡೆಗೆ ಸಂಚರಿಸುವುದು.
5. ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ನ ಮುಖಾಂತರ ಬಿಜೈ ಚರ್ಚ್ ಕಡೆಗೆ ಸಂಚರಿಸುವುದು.
ವಾಹನ ಪಾರ್ಕಿಂಗ್ ಮಾಡಲು ಸ್ಥಳ
1. ಕರಾವಳಿ ಮೈದಾನ
2. ಲೇಡಿಹಿಲ್ ಶಾಲಾ ಮೈದಾನ
3. ಲೇಡಿಹಿಲ್ ಚರ್ಚ್ ಮೈದಾನ
4. ಉರ್ವ ಮಾರ್ಕೆಟ್ ಮೈದಾನ
5. ಉರ್ವ ಸ್ಟೋರ್ ಮೈದಾನ
6. ಉರ್ವ ಕೆನರಾ ಶಾಲಾ ಮೈದಾನ
7. ಕೆನರಾ ಕಾಲೇಜು ಮೈದಾನ
8. ಡೊಂಗರಕೇರಿ ಕೆನರಾ ಶಾಲಾ ಮೈದಾನ
9. ಗಣಪತಿ ಶಾಲಾ ಮೈದಾನ
10. ರಾಮಕೃಷ್ಣ ಶಾಲಾ ಮೈದಾನ, ಬಂಟ್ಸ್ ಹಾಸ್ಟೇಲ್
11. ಸಿ.ವಿ ನಾಯಕ್ ಹಾಲ್ ಮೈದಾನ
12. ಟಿ.ಎಂ.ಎ ಪೈ ಹಾಲ್ ಮೈದಾನ
13. ಬಿ.ಇ.ಎಂ ಶಾಲಾ ಮೈದಾನ
14. ನೆಹರೂ ಮೈದಾನ
15. ಪುರಭವನ ಪಾರ್ಕಿಂಗ್ ಸ್ಥಳ
16. ಕದ್ರಿ ಮೈದಾನ
17. ಕೆಪಿಟಿ ಕಾಲೇಜು ಮೈದಾನ
18. ಕೆಟಿಪಿ ಬಳಿಯ ಆರ್.ಟಿ.ಓ ಮೈದಾನ
19. ಪದುವಾ ಕಾಲೇಜು ಮೈದಾನ
20. ಗೋಲ್ಡ್ ಫಿಂಚ್ ಸಿಟಿ ಮೈದಾನ, ಕೂಳೂರು
21. ಸುಲ್ತಾನ್ ಬತ್ತೇರಿ ಗ್ರೌಂಡ್ಸ್
22. ಗೋಕರ್ಣಥೇಶ್ವರ ಕಾಲೇಜು ಗ್ರೌಂಡ್
23. ಎಮ್ಮೆಕರೆ ಮೈದಾನ
24. ಮಂಗಳೂರು ವಿಶ್ವವಿದ್ಯಾನಿಲಯ ಮೈದಾನ, ಹಂಪನಕಟ್ಟೆ
25. ಮಿಲಾಗ್ರಿಸ್ ಚರ್ಚ್ ಪಾರ್ಕಿಂಗ್ ಗ್ರೌಂಡ್
26. ಮಿಲಾಗ್ರಿಸ್ ಕಾಲೇಜು ಮೈದಾನ
27. ಬಲ್ಮಠ ಶಾಂತಿ ನಿಲಯ ಮೈದಾನ
28. ಸೆಂಟ್ ಸೆಬಾಸ್ಟಿನ್ ಹಾಲ್ ಪಾಕಿಂಗ್ (ಸೆಂಟ್ ಅಗ್ನೇಸ್ ಶಾಲೆ)
PM Modi in Mangalore on April 14, Road Show Route map, traffic directions. Mahatma Gandhi Road from Narayana Guru (Lady Hill) Circle to PVS Junction and the Karnad Sadashiva Rao Road from PVS Junction to Hampanakatte Junction will be out of bounds for vehicles from 2 p.m. till the roadshow of Prime Minister Narendra Modi gets over on Sunday, April 14.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm