ಬ್ರೇಕಿಂಗ್ ನ್ಯೂಸ್
13-04-24 10:54 pm Mangaluru correspondent ಕರಾವಳಿ
ಮಂಗಳೂರು, ಎ.13: ಕೇರಳ ಸರಕಾರ ಗಣರಾಜ್ಯೋತ್ಸವ ಪರೇಡಿಗೆ ನಾರಾಯಣ ಗುರು ಸ್ತಬ್ಧಚಿತ್ರ ಮಾಡಿದಾಗ, ಇಲ್ಲದ ನೆಪ ಹೇಳಿ ನಿರಾಕರಣೆ ಮಾಡಲಾಗಿತ್ತು. ಆನಂತರ, ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ನಾರಾಯಣ ಗುರುಗಳ ಪಠ್ಯವನ್ನೇ ಏಳನೇ ತರಗತಿಯಿಂದ ತೆಗೆದು ಹಾಕಲಾಗಿತ್ತು. ಅದನ್ನು ಬಿಜೆಪಿ ನಾಯಕರು ಪ್ರಶ್ನೆ ಮಾಡಲಿಲ್ಲ. ಇದೀಗ ಬಿಲ್ಲವ ಸಮಾಜದ ಓಲೈಕೆಗಾಗಿ ಬಿಜೆಪಿಗೆ ಮತ್ತೆ ನಾರಾಯಣ ಗುರು ನೆನಪಾಗಿದ್ದಾರೆ. ಪ್ರಧಾನಿ ಮೋದಿಯವರ ಮೂಲಕ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಕಟಕಿಯಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ತಬ್ಧಚಿತ್ರದ ವಿಚಾರ ಬಂದಾಗ ಇಲ್ಲಿನ ಸಂಸದರು ಮುಂದಿನ ವರ್ಷವೇ ನಾವು ಸ್ತಬ್ಧಚಿತ್ರ ಮಾಡಿಸುತ್ತೇವೆ ಎಂದಿದ್ದರು. ಆದರೆ ಅದು ಈಡೇರಿಕೆ ಆಗಿಲ್ಲ. ನಾವು ಬಿಲ್ಲವ ಸಮಾಜದಿಂದ ಪ್ರತಿಭಟನೆ ನಡೆಸಿದಾಗಲೂ ಯಾವುದೇ ಬಿಜೆಪಿ ನಾಯಕರು ನಮಗೆ ಬೆಂಬಲ ನೀಡಿಲ್ಲ. ಏಳನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ನಾರಾಯಣ ಗುರುಗಳ ಪಠ್ಯ ತೆಗೆದು ಹಾಕಿದ್ದ ರೋಹಿತ್ ಚಕ್ರತೀರ್ಥ ಅವರನ್ನು ನಮ್ಮ ವಿರೋಧ ನಡುವೆಯೇ ಮಂಗಳೂರಿಗೆ ತಂದು ಸನ್ಮಾನ ಮಾಡಿದ್ದರು. ಬೆಳ್ತಂಗಡಿಯ ವೇಣೂರಿನಲ್ಲಿ ಅಜಿಲರಸರು ವಿರೋಧಿಸಿದ್ದರೂ ಪ್ರೇಕ್ಷಕರ ರೀತಿಯಲ್ಲಿ ಶಾಸಕ ಹರೀಶ್ ಪೂಂಜ, ರೋಹಿತನ್ನು ಕರೆಸಿ ಸನ್ಮಾನ ಮಾಡಿಸಿದ್ದರು. ಬಿಲ್ಲವ ಸಮಾಜಕ್ಕೆ ಅಪಮಾನ ಮಾಡಿದವರನ್ನು ಸನ್ಮಾನಿಸುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.
ಸಮುದಾಯದ ಭಾವನೆ ಜೊತೆ ಚೆಲ್ಲಾಟವಾಡಿದರೆ ಅದಕ್ಕೆ ತಕ್ಕ ಉತ್ತರವನ್ನು ಸಮಾಜ ಈ ಬಾರಿಯ ಚುನಾವಣೆಯಲ್ಲಿ ನೀಡಲಿದೆ. ಬಿಲ್ಲವ ಸಮಾಜ ಮುಗ್ಧ ಮತ್ತು ನಂಬಿಕಸ್ಥ ಸಮಾಜ. ಭಾವನಾತ್ಮಕವಾಗಿ ಚೆಲ್ಲಾಟವಾಡಬಹುದು ಎಂದು ಸ್ಥಳೀಯ ನಾಯಕರು ಭಾವಿಸಿದ್ದರೆ ಅದು ಇನ್ನು ಮುಂದೆ ಸಾಧ್ಯವಿಲ್ಲ. ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಸಮುದಾಯದ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಮಾಡುತ್ತಿದ್ದೇವೆ. ಸಮಾಜದಲ್ಲಿ ಬದಲಾವಣೆ ಎಷ್ಟರ ಮಟ್ಟಿಗೆ ಆಗಿದೆ ಎಂಬುದು ಚುನಾವಣೆ ಫಲಿತಾಂಶದಿಂದ ನಿರ್ಧಾರ ಆಗಲಿದೆ ಎಂದು ಸತ್ಯಜಿತ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ವೇದ ಕುಮಾರ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಉಪಸ್ಥಿತರಿದ್ದರು.
Satyajit Surathkal, the state president of Narayana Guru Vichara Vedike, expressed his concern over the Bharatiya Janata Party's (BJP) use of the names of Brahmashree Narayana Guru and Koti Chennaya for political gains, stating that it continues to hurt the sentiments of the Billawa community.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm