ಬ್ರೇಕಿಂಗ್ ನ್ಯೂಸ್
15-04-24 07:38 pm Mangalore Correspondent ಕರಾವಳಿ
ಮಂಗಳೂರು, ಎ.15: ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಕರ್ನಾಟಕದ ಕರಾವಳಿ ಭಾಗದ ಜನರ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ಸಿದ್ಧಾಂತ ಮತ್ತು ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ಹಲವು ವರ್ಷಗಳಿಂದ ಆಶೀರ್ವದಿಸಿದ್ದಾರೆ ಎಂದು ತಮ್ಮ X ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳು ಪ್ರಯೋಜನಕಾರಿಯಾಗಿದೆ. ಕಳೆದ ದಶಕದಲ್ಲಿ ಅಭಿವೃದ್ಧಿಗೆ ಬಂದರು ಅಭಿವೃದ್ಧಿ, ಮೀನುಗಾರಿಕೆ ಮತ್ತು ಮಹಿಳಾ ಮೀನುಗಾರರ ಸಬಲೀಕರಣ, ಇಂಧನ, ಆರೋಗ್ಯ ಮತ್ತು ಇತರೆ ವಲಯಗಳನ್ನು ಕೇಂದ್ರೀಕರಿಸಿ ಕೆಲಸ ಮಾಡಲಾಗಿದೆ. ಬಿಜೆಪಿಯ ಪ್ರಣಾಳಿಕೆ ʻಸಂಕಲ್ಪ ಪತ್ರʼದಲ್ಲಿ ಹೇಳಿರುವಂತೆ ಮಂಗಳೂರು ಅಭಿವೃದ್ಧಿಗಾಗಿ ನಗರಾಭಿವೃದ್ಧಿ ಮೂಲಕ “ಸುಗಮ ಜೀವನ” ಕಲ್ಪಿಸಲಾಗುವುದು. ಮೀನುಗಾರಿಕೆಯಂತಹ ಕ್ಷೇತ್ರಗಳಲ್ಲಿ ನಿರೂಪಿಸಲಾದ ದೃಷ್ಟಿಕೋನ ಕರಾವಳಿ ಆರ್ಥಿಕತೆಯನ್ನು ಪರಿವರ್ತಿಸುತ್ತದೆ ಎಂಬುದು ನನ್ನ ನಂಬಿಕೆ.
ಇತ್ತೀಚೆಗೆ ನಾನು ಉದ್ಘಾಟಿಸಿದ ಮತ್ತು ಶಿಲಾನ್ಯಾಸ ನೆರವೇರಿಸಿದ ಕೆಲಸಗಳಿಂದ ಇಲ್ಲಿನ ಜನರ ಜೀವನಮಟ್ಟ ಸುಧಾರಣೆಗೆ ಪುಷ್ಟಿ ದೊರೆಯಲಿದೆ. ಕೊಚ್ಚಿ – ಮಂಗಳೂರು ಪೈಪ್ ಲೈನ್ ಯೋಜನೆಯು ಸಹ ಇದರಲ್ಲಿ ಸೇರಿದೆ. ಮುಂಬರುವ ದಿನಗಳಲ್ಲಿ ಇಲ್ಲಿನ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಂದರು ವಲಯಕ್ಕೆ ಸಂಬಂಧಿಸಿದಂತೆ ಮೂಲ ಸೌಕರ್ಯವನ್ನು ಆಧುನೀಕರಣಗೊಳಿಸಲಾಗುವುದು ಎಂದು ಹೇಳಿದ್ದಾರೆ.
ನಮ್ಮ ಮೂರನೇ ಅವಧಿಯಲ್ಲಿ ಭವಿಷ್ಯದ ಶಿಕ್ಷಣಕ್ಕೆ ಸಂಬಂಧಿಸಿದ ಅಂಶಗಳನ್ನು ಸುಧಾರಿಸುವಲ್ಲಿ ಮತ್ತು ಈ ಪ್ರದೇಶದಲ್ಲಿ ಇನ್ನೂ ಉತ್ತಮವಾದ ರೀತಿಯಲ್ಲಿ ಆರೋಗ್ಯ ವಲಯದ ರಕ್ಷಣೆಗೆ ಇನ್ನೂ ಹೆಚ್ಚಿನ ಕೆಲಸ ಮಾಡಬೇಕಾಗಿದೆ. ನಾವು ನೀಲಿ ಕ್ರಾಂತಿಯಲ್ಲಿ ಕೆಲಸ ಮಾಡಲು ಬಯಸುತ್ತಿದ್ದು, ಇದರಿಂದ ಮೀನುಗಾರರಿಗೆ ಉತ್ತೇಜನ ಸಿಗಲಿದೆ. ಇದೇ ರೀತಿ ನಾವು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವುದರಿಂದ ಕರ್ನಾಟಕದ ಈ ಭಾಗವನ್ನು ಹೆಚ್ಚಿನ ಜನ ನೋಡಲು ಸಹಕಾರಿಯಾಗಲಿದೆ.
ಮತಬ್ಯಾಂಕ್ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್ ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ ಎಂದು ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ… pic.twitter.com/K6tC8B6nbN
— Narendra Modi (@narendramodi) April 14, 2024
ಮತಬ್ಯಾಂಕ್ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್ ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ. pic.twitter.com/BTh43xxp0t
— Narendra Modi (@narendramodi) April 14, 2024
Modi in Mangalore, Modi tweets about his visit and people of Mangalore on Twitter
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am