ಬ್ರೇಕಿಂಗ್ ನ್ಯೂಸ್
17-04-24 02:16 pm Mangalore Correspondent ಕರಾವಳಿ
ಮಂಗಳೂರು, ಎ.17: ಕಾರು ಡಿಕ್ಕಿಯಾಗಿ ಬೈಕ್ ಸವಾರ, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್ ನಲ್ಲಿ ನಡೆದಿದೆ.
ಬೆಳ್ತಂಗಡಿ ಮೂಲದ, ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸಾವಿಯೊ ಮಹೇಶ್ (21) ಮೃತರು. ಅವರ ಜೊತೆಗಿದ್ದ ಸಹ ಸವಾರ, ಬೆಳ್ತಂಗಡಿ ಲಾಯ್ಲ ನಿವಾಸಿ ಪ್ರಣಮ್ ಶೆಟ್ಟಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಿಬ್ಬರೂ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದರು.

ಸೋಮವಾರ ಸಂಜೆ ಹೊರಗಡೆ ಟ್ಯೂಶನ್ ಮುಗಿಸಿ ಬೈಕಿನಲ್ಲಿ ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಸಹ್ಯಾದ್ರಿ ಕಾಲೇಜಿನತ್ತ ಬರುತ್ತಿದ್ದರು. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಎದುರಿನ ರಸ್ತೆಯಿಂದ ಗೇಟಿನತ್ತ ತಿರುವು ಪಡೆಯುತ್ತಿದ್ದಾಗ ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಆಡಿ ಕಾರು ವೇಗವಾಗಿ ಬಂದು ಬೈಕಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಇಬ್ಬರೂ ಗಂಭೀರ ಗಾಯಗೊಂಡಿದ್ದಾರೆ. ಮಹೇಶ್ ಅವರ ಮುಖ ಮತ್ತು ತಲೆಯ ಹಿಂಭಾಗಕ್ಕೆ ತೀವ್ರ ಗಾಯಗೊಂಡಿದ್ದು ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಹೇಶ್ ಸಾವನ್ನಪ್ಪಿದ್ದರು.
ಗಾಯಾಳುಗಳನ್ನು ಆಟೋ ಚಾಲಕ ನಾಸಿರ್ ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ನಾಸಿರ್ ದೂರಿನನ್ವಯ ಕಾರು ಚಾಲಕ ಶ್ಯಾಮ್ ಸುಧೀರ್ ವಿರುದ್ಧ ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಿಂದ ಬಿಸಿ ರೋಡ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಅವೈಜ್ಞಾನಿಕ ರೀತಿಯಲ್ಲಿದ್ದು ರಸ್ತೆ ವಿಭಜಕದ ನಡುವೆ ಜಾಗ ಇಲ್ಲ. ಯು ಟರ್ನ್ ಪಡೆಯುವಲ್ಲಿ ಎಲ್ಲ ಕಡೆಯೂ ಸಮಸ್ಯೆ ಇದ್ದು ಅಪಘಾತಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಅರ್ಕುಳದಲ್ಲಿ ಇದೇ ರೀತಿ ಹಲವಾರು ಅಪಘಾತಗಳಾಗಿದ್ದು ನಡುವೆ ನಿಲ್ಲುವುದಕ್ಕೂ ಜಾಗ ಇಲ್ಲದೆ ದ್ವಿಚಕ್ರ ವಾಹನ ಸವಾರರು ಬಲಿಯಾಗುತ್ತಿದ್ದಾರೆ.
Mangalore accident at Adyar, 21 year old engineering student dies after audi car rams bike. He was a engineering student of Shyadri college. The deceased has been identified as Savio Mahesh from Belthangady.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am