ಬ್ರೇಕಿಂಗ್ ನ್ಯೂಸ್
18-04-24 05:57 pm Mangalore Correspondent ಕರಾವಳಿ
ಮಂಗಳೂರು, ಎ.18: ನಗರದ ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ನಡೆದಿದೆ.
ರಾಮನವಮಿ ಪ್ರಯುಕ್ತ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ ಕಾರಣವಾಯಿತು.
ಕೆಲಹೊತ್ತಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು, ಪರಸ್ಪರ ವಾಗ್ವಾದ ನಡೆಸಿದ್ದಾರೆ. ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ನೀವು ಯಾರು ಹೇಳೋಕೆ ಎಂದು ಬಿಜೆಪಿಯವರು ಪ್ರಶ್ನಿಸಿದರೆ, ಇಲ್ಲಿ ಪ್ರಚಾರ ಮಾಡಲಿಕ್ಕಿಲ್ಲ, ನಾವು ಮಾಡೋದಿಲ್ಲ. ಮಂದಿರದಲ್ಲಿ ರಾಜಕೀಯ ಇಲ್ಲ ಎಂದಿದ್ದಾರೆ. ನಾವು ಒಳಗಡೆ ಪ್ರಚಾರ ಮಾಡ್ತಾ ಇಲ್ಲ. ಹೊರಗಿನಿಂದ ನಾವು ಹೋಗ್ತಾ ಇದ್ದರೆ ನೀವು ಯಾಕೆ ಅಡ್ಡಿ ಬಂದಿದ್ದು ಎಂದು ವಾಗ್ವಾದ ಮಾಡಿದ್ದಾರೆ. ಹೊಯ್ ಕೈ ಆಗುತ್ತೆ ಎನ್ನುವಾಗ ಶಾಸಕ ವೇದವ್ಯಾಸ ಕಾಮತ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಸ್ಥಳಕ್ಕಾಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, ದೂರಕ್ಕ ಕಳಿಸಿದ್ದಾರೆ.
ಉರ್ವಾ ಇನ್ಸ್ ಪೆಕ್ಟರ್ ಭಾರತೀ ಸ್ಥಳಕ್ಕೆ ಬಂದು ಸೇರಿದ್ದ ಜನರನ್ನು ಚದುರಿಸುವ ಕೆಲಸ ಮಾಡಿದ್ದಾರೆ. ಕೆಲಹೊತ್ತು ಚಿಲಿಂಬಿಯಲ್ಲಿ ಜನ ಸೇರಿದ್ದರಿಂದ ವಾಗ್ವಾದ, ಹೊಡೆದಾಟಕ್ಕೆ ಕಾರಣವಾಗುತ್ತಾ ಅನ್ನುವ ಸ್ಥಿತಿ ಉಂಟಾಗಿತ್ತು.
Congress BJP campaign turns into fight near Sai mandir Chilimbi in Mangalore. Police who arrived at the spot sent the members of both the party away.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm