ಬ್ರೇಕಿಂಗ್ ನ್ಯೂಸ್
20-04-24 04:45 pm Mangalore Correspondent ಕರಾವಳಿ
ಬಂಟ್ವಾಳ, ಎ.20: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಬಿಲ್ಲವ ಸಮುದಾಯಕ್ಕೆ ಸೇರಿದ ಕವಿತಾ ಸನಿಲ್ ಬಿಜೆಪಿ ಸೇರಿದ್ದಾರೆ.
ಬಂಟ್ವಾಳದ ಬಿಸಿ ರೋಡ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕವಿತಾ ಸನಿಲ್ ಮತ್ತು ಬಂಟ್ವಾಳದ ತಾಲೂಕು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಸಮಾವೇಶದಲ್ಲಿ ಮಾತನಾಡಿದ ಕವಿತಾ ಸನಿಲ್, ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದು ಇಲ್ಲಿ ಬಂದಿದ್ದೇನೆ. ಒಳ್ಳೆಯದಾಗೋದಿದ್ದರೆ ಹೋಗು ಅಂತ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತ ಇದೆ, ಏನೋ ಆಸೆ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಅಂತ ಅಂದ್ಕೊಳ್ಳಬೇಡಿ. ಬಿಜೆಪಿಗೆ ಅಧಿಕಾರ ಇಲ್ಲ. ಪ್ರಧಾನಿ ಮೋದಿಯವರ ಆಡಳಿತ ನೋಡಿ ಬಿಜೆಪಿ ಸೇರುತ್ತಿದ್ದೇನೆ. ರಾಜ್ಯದಲ್ಲಿ ಏನಾಗುತ್ತಿದೆ ಅಂತ ನೋಡುತ್ತಿದ್ದೇವೆ.
ನಿನ್ನೆ ನೇಹಾ ಎಂಬ ವಿದ್ಯಾರ್ಥಿನಿಯನ್ನು ಹಾಡಹಗಲೇ ಕೊಲೆ ಮಾಡಿದ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕ್ಷುಲ್ಲಕವಾಗಿ ಮಾತನಾಡಿದ್ದಾರೆ. ನಮ್ಮ ಜೀವಕ್ಕೆ ಬೆಲೆ ಇಲ್ಲವೇ ಎಂದು ಇವರಲ್ಲಿ ಕೇಳಬೇಕಾಗಿದೆ. ಕಳೆದ ಕೆಲವು ತಿಂಗಳಲ್ಲಿ ಕೊಲೆ ಸರಣಿಯೇ ಆಗಿಹೋಗಿದೆ. ಇದು ಇವರ ಆಡಳಿತ ಸ್ಥಿತಿ. ಅಯೋಧ್ಯೆಯಲ್ಲಿ ರಾಮ ಮಂದಿರ ಆಗಿರೋದು ನಮ್ಮೆಲ್ಲರ ಭಾಗ್ಯ. ಈ ಸಲದ ಚುನಾವಣೆ ಮೋದಿಗಾಗಿ ಕೊಡುವ ಮತ ಅಲ್ಲ. ರಾಮನಿಗಾಗಿ ಕೊಡುವ ಮತ. ಈ ಬಾರಿ ಅತಿ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ನಾವು ಗೆಲ್ಲಿಸಬೇಕಾಗಿದೆ ಎಂದರು.
Kavitha Sanil Ex Mayor of Mangalore joins BJP party in the presence of BJP state president Yediyurappa Vijayendra at Bantwal.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm