ಬ್ರೇಕಿಂಗ್ ನ್ಯೂಸ್
21-04-24 08:17 pm Mangalore Correspondent ಕರಾವಳಿ
ಮಂಗಳೂರು, ಎ.21: ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದು, ಬ್ರಿಜೇಶ್ ಚೌಟ ಸೇನಾ ಹಿನ್ನೆಲೆ ಹೊಂದಿರುವ ಅಭ್ಯರ್ಥಿ ಎನ್ನುವ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಭಾರತೀಯ ಸೇನೆಯಲ್ಲಿ ಪ್ರತಿ ದಾಳಿ ಕಾರ್ಯಾಚರಣೆಗೆ ಹೆಸರಾಗಿರುವ ಗೋರ್ಖಾ ರೆಜಿಮೆಂಟಿನಲ್ಲಿ ನೀವು ಸೇವೆಗೈದಿದ್ದೀರಿ ಎನ್ನುವುದು ಶ್ಲಾಘನೀಯ. ಅಲ್ಲದೆ, ಮಂಗಳೂರು ಲಿಟ್ ಫೆಸ್ಟ್ ಆಯೋಜಿಸುವ ಮೂಲಕ ನೀವು ಸಾಹಿತ್ಯ, ಸಂಸ್ಕೃತಿ ಕುರಿತ ಬದ್ಧತೆಯನ್ನು ತೋರಿಸಿದ್ದೀರಿ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ನೀವು ತೊಡಗಿಸಿಕೊಳ್ಳುತ್ತೀರಿ ಎಂದು ಖಚಿತವಾಗಿ ಹೇಳಬಲ್ಲೆ ಎಂದು ಮೋದಿ ಪತ್ರದಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಜನರ ಆಶೀರ್ವಾದ ಪಡೆದು ನೀವು ಪಾರ್ಲಿಮೆಂಟಿಗೆ ಬರುತ್ತೀರಿ ಅನ್ನುವ ಸಂಪೂರ್ಣ ನಂಬಿಕೆ ನನಗಿದೆ. ನಿಮ್ಮಂತಹ ಸದಸ್ಯರು ನನ್ನ ಜೊತೆಗಿರುವುದು ದೊಡ್ಡ ಆಸ್ತಿ ಎಂದುಕೊಳ್ಳುತ್ತೇನೆ. ದೇಶ ಮತ್ತು ನಿಮ್ಮ ಜಿಲ್ಲೆಯ ಕಲ್ಯಾಣದ ವಿಚಾರದಲ್ಲಿ ನಮ್ಮ ತಂಡವು ಸದಾ ಬದ್ಧತೆ ಹೊಂದಿರುತ್ತದೆ. ಈ ಪತ್ರದ ಮೂಲಕ, ನಿಮ್ಮ ಜಿಲ್ಲೆಯ ಜನರಿಗೆ ತಿಳಿಯಪಡಿಸುವುದು ಏನೆಂದರೆ, ಈ ಬಾರಿಯ ಚುನಾವಣೆ ಸಾಮಾನ್ಯ ರೀತಿಯದ್ದಲ್ಲ. ದೇಶದ ಜನತೆ ಅದರಲ್ಲೂ ಹಿರಿಯ ನಾಗರಿಕರು ಕಳೆದ ಐದಾರು ದಶಕಗಳಲ್ಲಿ ಅನುಭವಿಸಿದ ಕಷ್ಟಗಳೇನು ಎಂಬುದನ್ನು ತಿಳಿದುಕೊಂಡಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ಹಿಂದಿನ ಕಷ್ಟಗಳು ಕಳೆದು ದೇಶದ ಪ್ರತಿ ನಾಗರಿಕನ ಜೀವನ ಮಟ್ಟ ಸುಧಾರಣೆಯಾಗುತ್ತಿದೆ. ದೇಶದಲ್ಲಿ ಆಗಬೇಕಾದ ಕೆಲಸ ಇನ್ನೂ ಇದ್ದು, ಈ ಬಾರಿಯ ಚುನಾವಣೆ ನಮ್ಮ ಗುರಿ ಸಾಧಿಸುವಲ್ಲಿ ಮಹತ್ತರ ಘಟ್ಟವಾಗಿದೆ.
ಈ ಬಾರಿಯ ಚುನಾವಣೆ ದೇಶದ ಭವಿಷ್ಯ ಉಜ್ವಲವಾಗಿಸುವಲ್ಲಿ ಜನರಿಗೆ ಸಿಕ್ಕಿರುವ ಅವಕಾಶ ಎಂದುಕೊಳ್ಳುತ್ತೇನೆ. ಬಿಜೆಪಿಗೆ ಕೊಡುವ ಪ್ರತಿ ಮತವೂ ಸ್ಥಿರ ಸರಕಾರ ರೂಪಿಸುವಲ್ಲಿ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿಸುವಲ್ಲಿ ಮಹತ್ತರ ಕೊಡುಗೆ ನೀಡಲಿದೆ. ಈ ಮಹತ್ತರ ಗುರಿ ಸಾಧಿಸುವಲ್ಲಿ ದೇಶದ ಜನತೆ ಸ್ವಯಂಪ್ರೇರಿತವಾಗಿ ನಮ್ಮ ಜೊತೆಗೆ ಬೆಂಬಲವಾಗಿ ನಿಲ್ಲಲಿದ್ದಾರೆ ಮತ್ತು ಈ ಚುನಾವಣೆ ಮೂಲಕ ದೇಶವನ್ನು ಸಮೃದ್ಧವಾಗಿಸುವಲ್ಲಿ ಕೊಡುಗೆ ನೀಡಲಿದ್ದಾರೆ. ಬೇಸಿಗೆ ಸಮಯದಲ್ಲಿ ಚುನಾವಣೆ ಆಗುತ್ತಿರುವುದರಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆಂಬುದನ್ನು ತಿಳಿದಿದ್ದೇನೆ. ಆದರೆ ಈ ಬಾರಿಯ ಚುನಾವಣೆ ದೇಶದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಬಿಸಿಲೇರುವ ಮೊದಲೇ ಬೆಳಗ್ಗೆ ಬೇಗನೇ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಲೋಕಸಭಾ ಕ್ಷೇತ್ರದಲ್ಲಿ ಪ್ರತಿ ಬೂತ್ ಗೆಲ್ಲುವುದಕ್ಕಾಗಿ ನಮ್ಮ ಕಾರ್ಯಕರ್ತರು ಮತದಾರರಿಗೆ ಮತ ಹಾಕುವಂತೆ ಪ್ರೇರಣೆ ನೀಡುವುದು ಮುಖ್ಯವಾಗಿದೆ. ಪ್ರತಿ ಬೂತಿನಲ್ಲಿ ಅತಿ ಹೆಚ್ಚು ಮತ ಹಾಕಿಸಿ, ಬೂತ್ ಗೆದ್ದರೆ ಲೋಕಸಭೆ ಕ್ಷೇತ್ರವನ್ನು ಗೆಲ್ಲುವುದಕ್ಕೆ ಕೊಡುಗೆ ಕೊಟ್ಟಂತಾಗುತ್ತದೆ. ಇದೇ ವೇಳೆ, ಇತರ ಜನರಂತೆ ಪಕ್ಷದ ಕಾರ್ಯಕರ್ತರು ಕೂಡ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇಟ್ಟುಕೊಳ್ಳಬೇಕಾಗಿದೆ. ದೇಶದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ಪ್ರತಿ ಕ್ಷಣದಲ್ಲೂ ಬದ್ದತೆ ಹೊಂದಿದ್ದೇನೆಂದು ಪ್ರತಿ ಮತದಾರನಿಗೂ ತಿಳಿಸಲು ಇಚ್ಚಿಸುತ್ತೇನೆ ಎಂದು ಪ್ರಧಾನಿ ಮೋದಿ, ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
Pm Modi sends letter of appreciation to BJP MP candidate Brijesh Chowta in Mangalore. Talks about his Experience in the army, says party is happy to have a man who has served the nation.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am