ಬ್ರೇಕಿಂಗ್ ನ್ಯೂಸ್
22-04-24 09:34 pm Mangalore Correspondent ಕರಾವಳಿ
ಮಂಗಳೂರು, ಎ.22: ರಾಜ್ಯ ಸರ್ಕಾರ ನೇಹಾ ಹತ್ಯೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಮೂರು ತಿಂಗಳೊಳಗೆ ತನಿಖೆ ಮುಗಿದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದು ರಾಜ್ಯ ಸರ್ಕಾರ ನೀಡುವ ಭರವಸೆ ಎಂದು ಎಐಸಿಸಿ ಸೆಕ್ರೆಟರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೇಹಾ ಪ್ರಕರಣಕ್ಕೆ ನ್ಯಾಯ ಒದಗಿಸುವುದೇ ಮುಖ್ಯ ಹೊರತು
ರಾಜಕೀಯಗೊಳಿಸುವುದಲ್ಲ. ನೇಹಾ ಪ್ರಕರಣವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ. ನೇಹಾ ಕುಟುಂಬದ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಈ ಹಿಂದೆ ಉತ್ತರ ಕನ್ನಡದ ಪರೇಶ್ ಮೇಸ್ತಾ ಹತ್ಯೆ ಪ್ರಕರಣ ನೆನಪಿರಬಹುದು. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರೇಶ್ ಮೇಸ್ತಾ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡಿತ್ತು. ಮೋದಿಯಿಂದ ಹಿಡಿದು ರಾಜ್ಯದ ಎಲ್ಲಾ ನಾಯಕರು ಚುನಾವಣೆಯಲ್ಲಿ ಮೇಸ್ತಾ ವಿಚಾರ ಬಳಸಿದ್ರು. ಆ ಪ್ರಕರಣವನ್ನು ಸಿಬಿಐಗೆ ನೀಡಿದ್ದೇ ಕಾಂಗ್ರೆಸ್. ಪ್ರಕರಣದಲ್ಲಿ ತನಿಖೆ ನಡೆದು ಬೆಳಕಿಗೆ ಬಂದ ವಿಚಾರ ಎಲ್ಲರಿಗೂ ಗೊತ್ತಿದೆ. ಮೇಸ್ತಾ ವಿಚಾರದಲ್ಲಿ ಬಿಜೆಪಿ ಮುಖ ಭಂಗ ಅನುಭವಿಸಿತ್ತು ಎಂದರು.
ಎನ್.ಡಿ.ಆರ್.ಎಫ್ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮೋಸ ಆಗಿದೆ. ಅಮಿತ್ ಶಾ ಕರ್ನಾಟಕಕ್ಕೆ ಮತ್ತೆ ಬರ್ತಾ ಇದ್ದಾರೆ. ಕಾಂಗ್ರೆಸ್ ಅಮಿತ್ ಶಾ ಅವರಿಗೆ ಎಚ್ಚರಿಕೆ ನೀಡುತ್ತಿದೆ. ರಾಜ್ಯಕ್ಕೆ ಬರುವ ಮೊದಲು ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು. ಇಂದು ಸಂಜೆಯೊಳಗಡೆ ಹಣ ಬಿಡಬೇಕು. ಹಣ ಬಿಡುಗಡೆ ಮಾಡಿದ ಬಳಿಕವೇ ರಾಜ್ಯಕ್ಕೆ ಕಾಲಿಡಬೇಕು ಎಂದು ಖಡಕ್ಕಾಗಿ ಹೇಳಿದರು.
ಕೇಂದ್ರ ಸರಕಾರ ಕನ್ನಡಿಗರಿಗೆ , ರಾಜ್ಯದ ರೈತರಿಗೆ ಅನ್ಯಾಯ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗಾದ ಸೋಲಿಗೆ ಸೇಡು ತೀರಿಸಿಕೊಳ್ಳಲಾಗಿದೆ. ಬರ ಪರಿಹಾರ ನೀಡದೇ ಕರ್ನಾಟಕದ ಜನರಲ್ಲಿ ಸೇಡು ತೀರಿಸಿಕೊಳ್ಳುತ್ತಿದೆ. ಪ್ರಧಾನಿ ಮೋದಿ, ಅಮಿತ್ ಶಾ ಸೇಡು ತೀರಿಸಿ ಕೊಳ್ಳುತ್ತಿದ್ದಾರೆ. ಬರ ಪರಿಹಾರ ನೀಡದೇ ರಾಜ್ಯದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಕರ್ನಾಟಕದಿಂದ ಆಯ್ಕೆಯಾದ ವಿತ್ತ ಸಚಿವರು ಕರ್ನಾಕದ ಜನರಿಗೆ ಅನ್ಯಾಯ ಮಾಡಿದ್ದಾರೆ. ಕನ್ನಡಿಗ ಜನರಿಗೆ ಸುಳ್ಳು ಹೇಳಿ ವಂಚಿಸುತ್ತಿದ್ದಾರೆ ಎಂದು ಸುರ್ಜೇವಾಲಾ ಆರೋಪಿಸಿದರು.
ಸ್ಟೀಲ್ ಚೊಂಬು ಹಿಡಿದು ಬಿಜೆಪಿ ನಾಯಕರನ್ನು ಛೇಡಿಸಿದ ಸುರ್ಜೇವಾಲಾ, ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದು ಚೊಂಬು ಮಾತ್ರ. ಬೇರೇನೂ ನೀಡಿಲ್ಲ. ಜನರೂ ಅವರಿಗೆ ಚೊಂಬು ನೀಡಬೇಕಾಗಿದೆ ಎಂದರು.
Mangalore Surjewala slams Modi and BJP for causing injustice to state of Karnataka. AICC general secretary and Karnataka state in-charge Ranadeep Singh Surjewala said, "Prime Minister Narendra Modi and BJP are committing gross injustice to the state and its farmers.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm