ಬ್ರೇಕಿಂಗ್ ನ್ಯೂಸ್
25-04-24 11:52 am Udupi Correspondent ಕರಾವಳಿ
ಉಡುಪಿ, ಎ.25: ಬಡಗುತಿಟ್ಟಿನ ಯಕ್ಷಗಾನ ರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ ಪ್ರಖ್ಯಾತ ಭಾಗವತ, ಗಾನ ವಿಶಾರದ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ನಸುಕಿನ 4 ಗಂಟೆ ವೇಳೆಗೆ ಬೆಂಗಳೂರಿನ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತ, ಸಂಗೀತದ ಸೊಗಡಿನ ಮೂಲಕ ಹೊಸ ಯಕ್ಷಗಾನ ಪ್ರಿಯರಲ್ಲಿ ಹೊಸ ಅಭಿಮಾನಿ ಬಳಗ ಸೃಷ್ಟಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರ ಪೆರ್ಡೂರು ಮೇಳಕ್ಕೆ ಹೊಸ ಖ್ಯಾತಿ ತಂದುಕೊಟ್ಟಿದ್ದರು. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದೊಂದು ವರ್ಷದಲ್ಲಿ ಅಸೌಖ್ಯದ ಕಾರಣ ವಿಶ್ರಾಂತಿಯಲ್ಲಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಕಾಲ ಪ್ರಧಾನ ಭಾಗವತರಾಗಿದ್ದ ಅವರು ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಿರುಗಾಟ ಆರಂಭಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲಿಯೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳ ಸೇರಿಕೊಂಡು ಯಶಸ್ಸಿನ ಶಿಖರ ತಲುಪಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಮೊದಲಿಗೆ ಸಂಗೀತಾಭ್ಯಾಸ ಮಾಡಿ ಕಾರ್ಯಕ್ರಮ ನೀಡಲು ತೊಡಗಿದ್ದರು.
ಇದರ ನಡುವೆಯೇ, ಇಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಮಾಡಲು ಮುಂದಾಗಿದ್ದರು. ಬಳಿಕ ಇವರ ಸಂಗೀತ ವಿದ್ವಾನ್ ಕಂಡು ಪ್ರಾಚಾರ್ಯ ನಾರಣಪ್ಪ ಉಪ್ಪೂರರು ಯಕ್ಷಗಾನ ಹಿಮ್ಮೇಳಕ್ಕೆ ಸೇರಿಸಿದ್ದರು. ಹೊಸ ಪ್ರಸಂಗಗಳನ್ನು ರಚಿಸಿ, ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎಂಬ ಬಿರುದು ಪಡೆದಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿ ಹತ್ತು ವರ್ಷಗಳ ಕಾಲ ಧಾರೇಶ್ವರ ಯಕ್ಷ ಬಳಗದ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಬಳಿಕ ಪೆರ್ಡೂರು ಮೇಳದಲ್ಲಿಯೇ ಇದ್ದು ಹೊಸ ಪ್ರಸಂಗ ರಚನೆ, ಭಾಗವತಿಕೆ ಮೂಲಕ ಮಿಂಚು ಹರಿಸಿದ್ದರು.
ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ, ಉಡುಪಿ ಜಿಲ್ಲೆಯ ಕುಂದಾಪುರ, ಹೆಬ್ರಿ, ಬ್ರಹ್ಮಾವರ, ಬೈಂದೂರು, ಉಡುಪಿ ವ್ಯಾಪ್ತಿಯಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದರು. ಅಲ್ಲದೆ, ಕಾಳಿಂಗ ನಾವಡರ ಅಕಾಲಿಕ ಮೃತ್ಯು ಬಳಿಕ ಆ ಜಾಗವನ್ನು ಯಶಸ್ವಿಯಾಗಿ ತುಂಬಿದ್ದಲ್ಲದೆ, ತಮ್ಮದೇ ಧಾಟಿ, ತಮ್ಮದೇ ಆದ ಸ್ವರಚಿತ ಪ್ರಸಂಗಗಳ ಮೂಲಕ ಹೊಸ ಕ್ರಾಂತಿ ಎಬ್ಬಿಸಿದ್ದರು. ಈಗಿನ ಜನಮಾನಸದಲ್ಲಿ ಯಕ್ಷಗಾನ ರಂಗದಲ್ಲಿ ಇಷ್ಟೊಂದು ಹೆಸರು ಮಾಡಿದ್ದ ಭಾಗವತ ಮತ್ತು ಪ್ರಸಂಗ ಕರ್ತ ಇನ್ನೊಬ್ಬರಿಲ್ಲ.
Renowned Yakshagana Bhagavath, Subramanya Dhareshwara (67), passed away early Thursday morning, April 25, at his son's residence in Bengaluru after a brief illness.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm