ಬ್ರೇಕಿಂಗ್ ನ್ಯೂಸ್
25-04-24 09:50 pm Mangalore Correspondent ಕರಾವಳಿ
ಮಂಗಳೂರು.ಏ.25: ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಿಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ 17- ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುರುವಾರ ಅಚ್ಚುಕಟ್ಟಾಗಿ ನೆರವೇರಿದ್ದು, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿ, ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಯು ಕಾಲೇಜಿನಲ್ಲಿ ನಡೆಯಿತು. ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಮೂಡಬಿದ್ರೆಯ ಮಹಾವೀರ ಜೈನ್ ಕಾಲೇಜಿನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಮಂಗಳೂರಿನ ಕೊಡಿಯಾಲಬೈಲಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಮಂಗಳೂರಿನ ಕೆನರಾ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ನಡೆಯಿತು.
ಮಂಗಳೂರು ಕ್ಷೇತ್ರದ ಮಸ್ಟರಿಂಗ್ ಕಾರ್ಯ ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದಲ್ಲಿ ನಡೆಯಿತು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು.
ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 9 ಗಂಟೆಯ ಹೊತ್ತಿಗೆ ಮಸ್ಟರಿಂಗ್ ಕಾರ್ಯ ಜರುಗುವ ಶಾಲೆ, ಕಾಲೇಜುಗಳ ಆವರಣದಲ್ಲಿ ಸೇರತೊಡಗಿದರು. ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್ ಗಾಗಿ ನಿಯೋಜಿತಗೊಂಡಿರುವ ಪೊಲೀಸರು, ಸಿಆರ್ಪಿಎಫ್ ಯೋಧರು, ಗೃಹರಕ್ಷಕ ದಳದವರು ಕೂಡ ಆಗಮಿಸಿದ್ದರು. ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ, ಪೊಲೀಸರು, ಯೋಧರನ್ನು ಕರೆದುಕೊಂಡು ಹೋಗಲು ಬಸ್ ಗಳು ಹಾಗೂ ವಿವಿಧ ವಾಹನಗಳು ಶಾಲಾ ಕಾಲೇಜುಗಳ ಆವರಣದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು. ಆಯಾ ವಿಧಾನಸಭಾ ಕ್ಷೇತ್ರಗಳ ಗ್ರಾಮಗಳಲ್ಲಿನ ಮತಗಟ್ಟೆಗಳತ್ತ ತೆರಳುವಂತಹ ಮಾರ್ಗಗಳನ್ನು ಗುರುತಿಸಿ, ಬಸ್ ಹಾಗೂ ವಾಹನಗಳನ್ನ ನಿಯೋಜಿಸಲಾಗಿತ್ತು.
ಶಾಲಾ ಕಾಲೇಜು ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆ ವಿವರ ಹಾಗೂ ಬಸ್ಗಳ ವಿವರವನ್ನು ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್ ವಿತರಿಸಲು ಕೌಂಟರ್ಗಳನ್ನು ಸ್ಥಾಪಿಸಲಾಗಿತ್ತು.
Mangalore all set for loksabha elections 2024, DC and election commision officers visit electoral booths.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am