ಬ್ರೇಕಿಂಗ್ ನ್ಯೂಸ್
25-04-24 10:01 pm Mangalore Correspondent ಕರಾವಳಿ
ಮಂಗಳೂರು, ಎ.25: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1876 ಮತಗಟ್ಟೆಗಳಿದ್ದು, ಈ ಪೈಕಿ 18 ಮತಗಟ್ಟೆ ನಕ್ಸಲ್ ಪೀಡಿತ ಪ್ರದೇಶ ವ್ಯಾಪ್ತಿಯಲ್ಲಿದೆ. ಈ ಭಾಗದಲ್ಲಿ ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಕಾರ್ಯಾಚರಣೆ ಚುರುಕು ಮಾಡಲಾಗಿದೆ.
ಇತ್ತೀಚೆಗೆ ಒಂದು ತಿಂಗಳ ಅಂತರದಲ್ಲಿ ನಾಲ್ಕು ಬಾರಿ ನಕ್ಸಲರು ಕಾಣಿಸಿಕೊಂಡಿದ್ದು ಭಾರೀ ಆತಂಕಕ್ಕೆ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಆಸುಪಾಸು ಮತ್ತು ಕೊಡಗಿನ ಗಡಿಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಆಬಳಿಕ ಎಎನ್ಎಫ್ ಕೂಂಬಿಂಗ್ ಆಗಿದ್ದರೂ, ನಕ್ಸಲರ ಪತ್ತೆ ಆಗಿರಲಿಲ್ಲ. ಇತ್ತೀಚೆಗೆ ಸೇನೆಯಲ್ಲಿ ಕರ್ತವ್ಯದಲ್ಲಿರುವ ಯುವಕನ ಮನೆಗೆ ಬಂದಿದ್ದ ನಕ್ಸಲರು ಅಲ್ಲಿ ಊಟ ಮಾಡಿ ತೆರಳಿದ್ದು ಚರ್ಚೆಗೆ ಕಾರಣವಾಗಿತ್ತು.
ನಕ್ಸಲರ ಚಲನವಲನ ಇರುವುದು ಖಚಿತವಾಗಿದ್ದರಿಂದ ಚುನಾವಣೆಗೆ ತೊಂದರೆ ಆಗಬಾರದು ಎಂದು ಪೊಲೀಸರು ಮತ್ತು ನಕ್ಸಲ್ ನಿಗ್ರಹ ಪಡೆಯವರು ಮುಂಜಾಗ್ರತೆ ವಹಿಸಿದ್ದಾರೆ. ಹೆಚ್ಚುವರಿ ಪೊಲೀಸರು ಮತ್ತು ಸಿಆರ್ ಪಿಎಫ್ ಪಡೆಯನ್ನು ಈ ಭಾಗದಲ್ಲಿ ನಿಯೋಜನೆ ಮಾಡಲಾಗಿದೆ. ಇತ್ತೀಚೆಗೆ ಕೇರಳದ ವಯನಾಡಿನಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು ಎನ್ನುವ ಮಾಹಿತಿ ಆಧರಿಸಿ ಅಲ್ಲಿಯೂ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ. ಅಲ್ಲಿನ ಕಾಡಂಚಿನ ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವಂತೆ ಕರಪತ್ರ ಹಂಚಿದ್ದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 172 ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿದ್ದು, ಅಲ್ಲಿಯೂ ಹೆಚ್ಚುಪರಿ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಇದಲ್ಲದೆ, 900 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಸಿದ್ದು, ನೇರ ವೆಬ್ ಕಾಸ್ಟಿಂಗ್ ನಿಗಾ ವಹಿಸಲು ವ್ಯವಸ್ಥೆ ಮಾಡಲಾಗಿದೆ. ಚುನಾವಣೆ ಕರ್ತವ್ಯಕ್ಕಾಗಿ ಸಿಆರ್ ಪಿಎಫ್ ಮತ್ತು ಸಿಎಪಿಎಫ್ ಪಡೆಯನ್ನು ಜಿಲ್ಲೆಗೆ ಕರೆಸಲಾಗಿದೆ.
There are a total of 1876 polling booths in the Dakshina Kannada Lok Sabha constituency, out of which 18 polling booths are in Naxal affected areas. Coombing operations have been intensified in this area by the anti-Naxal forces.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am