ಬ್ರೇಕಿಂಗ್ ನ್ಯೂಸ್
26-04-24 11:09 am Mangalore Correspondent ಕರಾವಳಿ
ಉಳ್ಳಾಲ, ಎ.26: ವಿಧಾನಸಭೆ ಸಭಾಧ್ಯಕ್ಷ ಯು.ಟಿ .ಖಾದರ್ ಅವರು ಬೋಳಿಯಾರು ಗ್ರಾಮದ ಜಾರದಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಕುಂಪಲ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.
ಯು.ಟಿ ಖಾದರ್ ಅವರು ಪತ್ನಿ ಲೆಮೀಝ್ ಖಾದರ್, ಪುತ್ರಿ ಹವ್ವಾ ನಸೀಮ, ಆಪ್ತ ಸಹಾಯಕರಾದ ಮಹಮ್ಮದ್ ಲಿಬ್ಝೆತ್ ಜೊತೆ ಜಾರದಗುಡ್ಡೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಖಾದರ್ ಅವರು ಜೀವನದಲ್ಲಿ ಸಮಾನತೆ ಕಾಣುವುದು ಮತದಾನವೊಂದರಲ್ಲಿ ಮಾತ್ರ. ಎಷ್ಟೇ ಕಡು ಬಡವನಾದರೂ, ಆಗರ್ಭ ಶ್ರೀಮಂತನಾದರೂ ಎಲ್ಲರಿಗೂ ಒಂದೇ ಮತದಾನದ ಹಕ್ಕು ಮಾತ್ರ ಇರುತ್ತದೆ. ಈ ಸಮಾನತೆಯ ಸಾಂವಿಧಾನಿಕ ಹಕ್ಕನ್ನ ಚಲಾಯಿಸೋದು ನಮ್ಮೆಲ್ಲರ ಕರ್ತವ್ಯ. ದೇಶದ ಹಿತಕ್ಕಾಗಿ ಎಲ್ಲರೂ ಉತ್ಸಾಹದಿಂದ ಮತ ಚಲಾಯಿಸುವಂತೆ ಕರೆ ನೀಡಿದರು.



ಕುಂಪಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ಪಕ್ಷದ ಕಾರ್ಯಕರ್ತರ ಜೊತೆ ತೆರಳಿ ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಸಧೃಢ, ವಿಕಸಿತ ಭಾರತ ನಿರ್ಮಾಣಕ್ಕೆ ಮೋದಿಯೇ ಮಗದೊಮ್ಮೆ ಪ್ರದಾನಿಯಾಗಿ ಆಯ್ಕೆಯಾಗಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಅತ್ಯಧಿಕ ಮತಗಳ ಅಂತರಗಳಲ್ಲಿ ಗೆಲ್ಲಲಿದ್ದಾರೆ ಎಂದರು.



ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳಲ್ಲಿ ಬಿಜೆಪಿಯ "ನಾರಿ ಶಕ್ತಿ ಬೂತ್ ಶಕ್ತಿ ಅಭಿಯಾನ" ಅಂಗವಾಗಿ ಶುಕ್ರವಾರ ಬೆಳ್ಳಂಬೆಳಗ್ಗೆ 7 ಗಂಟೆಗೆ ಸರದಿ ಸಾಲಿನಲ್ಲಿ ನಿಂತು ಪ್ರಥಮವಾಗಿ ನವ, ನಾರಿಯರು ಉತ್ಸಾಹದಿಂದ ಮತ ಚಲಾಯಿಸಿದರು. ಉಳ್ಳಾಲ ತಾಲೂಕಿನ ಕಲ್ಲಾಪು ಪಟ್ಲ ಉರ್ದು ಶಾಲೆ, ಕುಂಪಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಿಲಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಅನೇಕ ಮತಗಟ್ಟೆಗಳಲ್ಲಿ ನವ ನಾರಿಯರು ಪ್ರಥಮವಾಗಿ ಮತ ಚಲಾಯಿಸಿದರು.
Speaker UT Khader cast vote at boliyar at Ullal in Mangalore with family, Khader along with his wife and his personal assistant Lifzi casted their vote.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm