ಬ್ರೇಕಿಂಗ್ ನ್ಯೂಸ್
27-04-24 11:06 pm Mangalore Correspondent ಕರಾವಳಿ
ಮಂಗಳೂರು, ಎ.27: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಮನೆ ಬೆಳಗುವ ಜತೆಗೆ, ಕುಟುಂಬಗಳಲ್ಲಿ ಆತ್ಮಸ್ಥೈರ್ಯ ತುಂಬಿದೆ. ಇದು ನಮ್ಮ ಗೆಲುವಿಗೆ ಮುಖ್ಯ ಕಾರಣವಾಗಲಿದೆ ಎಂದು ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿ, ನೈಜ ವಿಚಾರವನ್ನು ಜನತೆಯ ಮುಂದಿಟ್ಟು ಪ್ರಚಾರ ಕಾರ್ಯ ನಡೆಸಿದ್ದೇವೆ. ಪಕ್ಷದ ನಾಯಕರು, ಕಾರ್ಯಕರ್ತರು ಕುಟುಂಬವಾಗಿ ಚುನಾವಣೆ ಎದುರಿಸಿದ್ದೇವೆ. ಪ್ರತಿಯೊಬ್ಬರೂ ನನ್ನ ಜತೆ ಸಹಕರಿಸಿದ್ದು, ಎದುರಾಳಿಗಳ ದ್ವೇಷಕ್ಕೆ ಪ್ರತಿಯಾಗಿ ಪ್ರೀತಿಯಿಂದ ಮತದಾರರ ಮನವೊಲಿಸುವ ಕಾರ್ಯ ಮಾಡಿದ್ದೇವೆ. ಪಕ್ಷದ ಪ್ರಚಾರ ಕಾರ್ಯದಲ್ಲಿ ಸಹಕರಿಸಿದ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಬಿಜೆಪಿಯವರು ಒಂದೂವರೆ ಲಕ್ಷದಿಂದ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ, ಯಾರೂ ಸೋಲಲು ಸಿದ್ಧ ಇರುವುದಿಲ್ಲ. ಗೆಲ್ಲುವುದಕ್ಕಾಗಿಯೇ ಸ್ಪರ್ಧೆ ಮಾಡಿರುವುದು. ಆದರೆ ಬಿಜೆಪಿಯವರು ನಾಲ್ಕು ಲಕ್ಷ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು. ನಾವು ಇಷ್ಟು ಅಂತರದಲ್ಲಿ ಗೆಲ್ಲುತ್ತೇವೆ ಎಂದು ಈ ಹಿಂದೆ ಎಲ್ಲಿಯೂ ಹೇಳಿಲ್ಲ. ಜೂ. 4ರವರೆಗೆ ಎಲ್ಲರೂ ಸಂತೋಷದಿಂದ ಫಲಿತಾಂಶವನ್ನು ಎದುರು ನೋಡೋಣ ಎಂದರು.
ಕಾಂಗ್ರೆಸ್ ಈ ಹಿಂದೆಯಾಗಲಿ ಈ ಬಾರಿಯಾಗಲಿ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರಗಳು ಈ ಬಾರಿ ಚರ್ಚೆಯಾಗಿವೆ. ನಾನು ಯಾವತ್ತೂ ಜಾತಿ ಹೆಸರಿನಲ್ಲಿ ಮತ ಕೇಳಿಲ್ಲ. ಬದಲಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಶಕ್ತಿಯಾಗಿ ಕಾಂಗ್ರೆಸ್ ಗೆಲುವಿಗೆ ಸಹಕರಿಸುವಂತೆ ಮತದಾರರನ್ನು ಮನವಿ ಮಾಡಿದ್ದೇನೆ. ಅದಕ್ಕವರು ಸ್ಪಂದಿಸಿರುವ ವಿಶ್ವಾಸವಿದೆ ಎಂದವರು ಹೇಳಿದರು. ಗೋಷ್ಟಿಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ ಜೈನ್, ಶಶಿಧರ ಹೆಗ್ಡೆ, ಶುಭೋದಯ ಆಳ್ವ, ಮುಹಮ್ಮದ್ ಉಪಸ್ಥಿತರಿದ್ದರು.
The Congress party's guarantee house has been lit up and the families have been instilled with confidence. This will be the main reason for our victory," said Padmaraj Ramayya, congress candidate from Dakshina Kannada.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am