ಬ್ರೇಕಿಂಗ್ ನ್ಯೂಸ್
29-04-24 11:05 am Mangalore Correspondent ಕರಾವಳಿ
ಉಳ್ಳಾಲ,ಎ. 29: ಎರಡು ಪುಟ್ಟ ಮಕ್ಕಳ ತಂದೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಸ್ವಸಹಾಯ ಸಂಘದ ನಲ್ವತ್ತು ಸಾವಿರ ರೂಪಾಯಿ ಬಾಕಿ ಹಣದ ವಿಚಾರದಲ್ಲಿ ಆತ್ಮಹತ್ಯೆ ನಡೆದಿರುವುದಾಗಿ ಆರೋಪ ಕೇಳಿ ಬಂದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡಿಸಿದ್ದರೆಂದು ಆರೋಪ ಇದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಬರೀ ನಲ್ವತ್ತು ಸಾವಿರ ರೂಪಾಯಿ ವಿಚಾರದಲ್ಲಿ ಆತ್ಮಹತ್ಯೆಗೈದರೆ ಕೋಟಿ ಸಾಲ ವೀರರ ಕತೆಯೇನಾಗಬೇಕು, ಸಾವಿಗೆ ಇನ್ಯಾವುದೋ ಕಾರಣವಿರಬಹುದೆಂದು ಯೋಗೀಶ್ ಆಪ್ತರು ಹೇಳಿದ್ದಾರೆ. ಆರ್ ಬಿಐ ನ ನಿಯಮ ಉಲ್ಲಂಘಿಸಿ ಜನಸಾಮಾನ್ಯರಿಂದ ಚಕ್ರ ಬಡ್ಡಿ ಪೀಕಿಸುತ್ತಿರುವ ಸ್ವಸಹಾಯ ಸಂಘಗಳಿಗೂ ಲಗಾಮು ಹಾಕುವ ಕಾರ್ಯ ನಡೆಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಯೋಗೀಶ್ ಪತ್ನಿ ಆತ್ಮಹತ್ಯೆಗೆ ಯತ್ನ
ಯೋಗೀಶ್ ಸಾವನ್ನಪ್ಪಿದ್ದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.
Mangalore 44 year old man in kumpala commits suicide in the toilet. The deceased has been identified as Yogish. Some finance matter has lead him to take this extreme step.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am