ಬ್ರೇಕಿಂಗ್ ನ್ಯೂಸ್
04-05-24 09:50 pm Mangalore Correspondent ಕರಾವಳಿ
ಮಂಗಳೂರು, ಮೇ.4: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶನಿವಾರ ಈ ಬೇಸಿಗೆಯ ಅತಿ ಉಷ್ಣತೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಮತ್ತು ಕಡಬದಲ್ಲಿ ಅತಿ ಹೆಚ್ಚು ಉಷ್ಣತೆ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್, ಮಂಗಳೂರಿನಲ್ಲಿ 36.4 ಡಿಗ್ರಿ, ಕಡಬದಲ್ಲಿ 37.9 ಡಿಗ್ರಿ, ಉಪ್ಪಿನಂಗಡಿಯಲ್ಲಿ 37.5 ಡಿಗ್ರಿ, ಬೆಳ್ತಂಗಡಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ 38.9 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ಕಂಡುಬಂದಿದೆ. ಕಾರ್ಕಳದಲ್ಲಿ 36.6 ಡಿಗ್ರಿ, ಬ್ರಹ್ಮಾವರ 33.2 ಡಿಗ್ರಿ, ಕೋಟ 36.3, ಉಡುಪಿ 35.2, ಕುಂದಾಪುರ 34.9, ಬೈಂದೂರು 33.9, ಕಾಪು ಭಾಗದಲ್ಲಿ 36.5 ಡಿಗ್ರಿ ತಾಪಮಾನ ದಾಖಲಾಗಿದೆ. ಇದೇ ವೇಳೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರಕೋಡು ಎಂಬಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದ್ದು, ಕರಾವಳಿಯಲ್ಲಿ ಶನಿವಾರ ದಾಖಲಾದ ಅತಿ ಹೆಚ್ಚು ಉಷ್ಣತೆಯಾಗಿದೆ.
ಅತಿ ಹೆಚ್ಚು ತಾಪಮಾನದ ಕಾರಣ ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಸೈಕ್ಲೋನ್ ಮಾದರಿಯ ವಾತಾವರಣ ಕಂಡುಬಂದಿದ್ದು, ಇದರ ಪರಿಣಾಮವಾಗಿ ಕರ್ನಾಟಕ ರಾಜ್ಯದ ಹಲವೆಡೆ ಮೇ 6ರಿಂದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 6 ಮತ್ತು 7ರಂದು ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ ಭಾಗದಲ್ಲಿ ಸಿಡಿಲು ಮಿಂಚು ಸಹಿತ ಮಳೆಯಾಗಲಿದೆ.
Coastal Dakshina Kannada and Udupi districts recorded the highest temperature of this summer on Saturday. Meteorological department has informed about highest temperature recorded in Uppinangadi and Kadaba of Puttur taluk of Dakshina Kannada district.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm