ಬ್ರೇಕಿಂಗ್ ನ್ಯೂಸ್
06-05-24 01:30 pm Mangalore Correspondent ಕರಾವಳಿ
ಮಂಗಳೂರು, ಮೇ 6: ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕಲಾವಿದರ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ(69) ಅಲ್ಫಕಾಲದ ಅನಾರೋಗ್ಯದಿಂದ ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ನಿಧನರಾದರು.
ಸಣ್ಣ ಕತೆ ಮತ್ತು ಲಲಿತ ಪ್ರಬಂಧ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ ಛಾಪು ಮೂಡಿಸಿರುವ ರೊನಾಲ್ಡ್ ಸಿಕ್ವೇರಾ ’ಶಿಕೇರಾಮ್, ಸುರತ್ಕಲ್’ ಕಾವ್ಯನಾಮದಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಸಾಹಿತ್ಯ ರಚನೆಯಲ್ಲಿ ತೊಡಗಿದ್ದರು. ಅವರ ’ಗರ್ಜೆಕ್ ಪಡತ್’ ಕಥಾಸಂಗ್ರಹಕ್ಕೆ ಮಣಿಪಾಲದ ಡಾ.ಟಿ.ಎಂ.ಎ. ಫೌಂಡೇಶನ್ ವತಿಯಿಂದ ವರ್ಷದ ಉತ್ತಮ ಕೃತಿ ಎಂಬ ಪ್ರಶಂಸಾ ಪುರಸ್ಕಾರ ಲಭಿಸಿತ್ತು. ಕೊಂಕಣಿ ಸಾಹಿತಿ ಮತ್ತು ಕಲಾವಿದರ ಸಂಘಟನೆಯ ಅಧ್ಯಕ್ಷರಾಗಿ ಕೊಂಕಣಿ ಸಾಹಿತಿ ಮತ್ತು ಕಲಾವಿದರ ಹಕ್ಕು ಮತ್ತು ಕ್ಷೇಮಾಭಿವೃದ್ದಿಗಾಗಿ ಅವಿರತ ಶ್ರಮಿಸುತ್ತಿದ್ದರು. ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು, ಅಳಿಯ ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್, ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ, ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಪ್ರವರ್ತಕ ಮೈಕಲ್ ಡಿಸೋಜ, ಕವಿತಾ ಟ್ರಸ್ಟ್ ಅಧ್ಯಕ್ಷ ಕಿಶು ಬಾರ್ಕೂರ್, ಆರ್ಸೊ ಸಂಪಾದಕ ವಿಲ್ಸನ್ ಕಟೀಲ್, ಕವಿ, ಚಿಂತಕ್ ಟೈಟಸ್ ನೊರೊನ್ಹಾ, ಪತ್ರಕರ್ತ ಎಚ್.ಎಮ್. ಪೆರ್ನಾಲ್ ಮುಂತಾದ ಗಣ್ಯರು ರೊನಾಲ್ಡ್ ಸಿಕ್ವೇರಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
Renowned Konkani writer and KWAA president Ronald Sequeira, known as ‘Sikeram Surathkal’, breathed his last on Monday May 6. He was 70. Sequeira, who had been under medical care, breathed his last in the early hours of the morning, Sequeira, a prominent figure in Konkani literature, served as the president of the Konkani Writers' and Artists' Association (KWAA) and leaves behind a legacy of profound contributions to the cultural landscape.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm