ಬ್ರೇಕಿಂಗ್ ನ್ಯೂಸ್
08-05-24 10:37 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ.8: ಬಡವರ ಬಂಧು, ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ವಿಚಾರ ತಿಳಿಯುತ್ತಲೇ ಬೆಳ್ತಂಗಡಿಯಲ್ಲಿ ಗಾಢ ಶೋಕ ಮಡುಗಟ್ಟಿದೆ. ಜನರು ಬೀದಿ ಬೀದಿಯಲ್ಲಿ ನಿಂತು ಬಂಗೇರ ಅವರ ಗುಣಗಾನ ಮಾಡುತ್ತಿದ್ದಾರೆ. ಇನ್ನೊಂದೆಡೆ, ಅವರ ಅಂತಿಮ ಕಾರ್ಯ ನ ಭೂತೋ ಎನ್ನುವಂತೆ ಮಾಡಬೇಕು ಎನ್ನುವ ನೆಲೆಯಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಬಡವ, ಬಲ್ಲಿದ, ಜಾತಿ ಭೇದ ಇಲ್ಲದೆ ಬಂಗೇರ ಅವರ ಅಭಿಮಾನಿಗಳಿದ್ದು ಬೆಂಗಳೂರಿನಿಂದ ರಾತ್ರಿ ಶವ ಕರೆತರುವಾಗಲೇ ಬೆಳ್ತಂಗಡಿ ತಾಲೂಕು ಪ್ರವೇಶ ಆಗುತ್ತಲೇ ಮೆರವಣಿಗೆಯಲ್ಲಿ ಎದುರುಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರಿನಿಂದ ಚಾರ್ಮಾಡಿ ಮೂಲಕ ಪಾರ್ಥಿವ ಶರೀರ ಬರಲಿದ್ದು ನಸುಕಿನ 3 ಗಂಟೆಗೆ ಚಾರ್ಮಾಡಿಯಿಂದಲೇ ಕಾಲ್ನಡಿಗೆ ಮೆರವಣಿಗೆಯಲ್ಲಿ ತರಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಒಟ್ಟು ಕಾರ್ಯಕ್ರಮದ ಬಗ್ಗೆ ಬಂಗೇರ ಅಭಿಮಾನಿ ಸಮಿತಿ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಪಾರ್ಥಿವ ಶರೀರವನ್ನು ನೇರವಾಗಿ ಮನೆಗೆ ತಂದು ಅಂತಿಮ ವಿಧಿ ಪೂರೈಸಿ ಬೆಳಗ್ಗೆ 10.30 ಗಂಟೆಗೆ ಹಳೇಕೋಟೆ ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ ಪಾರ್ಥಿವ ಶರೀರವನ್ನು ತಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಪರಾಹ್ನ ಬೆಳ್ತಂಗಡಿ ನಗರದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆಯನ್ನು ಮೆರವಣಿಗೆ ಮೂಲಕ ನಡೆಸಿ, ಅಗಲಿದ ನಾಯಕನಿಗೆ ಗೌರವ ಸಲ್ಲಿಸಲಾಗುತ್ತದೆ. ನಂತರ ಅಂತ್ಯ ಸಂಸ್ಕಾರ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹಳೇಕೋಟೆಯ ಮನೆಯ ಸಮೀಪ ನಡೆಸಲಾಗುವುದು. ಮೃತರ ಗೌರವಾರ್ಥ ಬೆಳ್ತಂಗಡಿ ಪೇಟೆಯ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತ ಬಂದ್ ಮಾಡಿ ವಸಂತ ಬಂಗೇರರಿಗೆ ಗೌರವ ಸಲ್ಲಿಸಬೇಕು ಎಂದು ಅಭಿಮಾನಿಗಳ ಸಮಿತಿ ವಿನಂತಿಸಿದೆ.
ಮೃತರ ಅಂತಿಮ ದರ್ಶನಕ್ಕೆ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಸೇರಿದಂತೆ ಸಚಿವರು, ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವಜನಿಕರು, ಅವರ ಅಭಿಮಾನಿಗಳು, ವಿವಿಧ ಕ್ಷೇತ್ರದ ಗಣ್ಯರಿಗೆ ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಸಂತ ಬಂಗೇರ ಅಭಿಮಾನಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Mangalore Vasantha Bangera death, last rites in Belthangady. K. Vasantha Bangera, a prominent Congress leader known for his influence in Dakshina Kannada district, breathed his last at a private hospital in Bengaluru today, May 8, around 4 pm.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am