ಬ್ರೇಕಿಂಗ್ ನ್ಯೂಸ್
10-05-24 09:22 pm Mangalore Correspondent ಕರಾವಳಿ
ಮಂಗಳೂರು, ಮೇ.10: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭಯ ಹುಟ್ಟಿಸಿದ ಬಗ್ಗೆ ಬಜ್ಪೆ ಠಾಣೆಯಲ್ಲಿ ಏರ್ ಇಂಡಿಯಾ ಸಿಬಂದಿ ದೂರು ನೀಡಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಸೆಕ್ಯೂರಿಟಿ ಕೋ- ಆಡಿನೇಟರ್ ಆಗಿರುವ ಸಿದ್ದಾರ್ಥದಾಸ್ ಈ ಬಗ್ಗೆ ಮೊಹಮ್ಮದ್ ಬಿಸಿ ಎಂಬವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೊಹಮ್ಮದ್ ಬಿ.ಸಿ. ಎಂಬವರು ಮೇ 8ರಂದು ರಾತ್ರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಮರುದಿನ ಬೆಳಗ್ಗೆ 7.30 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ದುಬೈನಿಂದ ವಿಮಾನ ಹೊರಟ ನಂತರ ಮೊಹಮ್ಮದ್ ಶೌಚಾಲಯಕ್ಕೆ ತೆರಳಿದ್ದು ನಂತರ ಹೊರಬಂದು ವಿಮಾನದ ಪ್ರಯಾಣಿಕರಲ್ಲದ ಕೃಷ್ಣ ಎಂಬವರ ಬಗ್ಗೆ ಸಿಬಂದಿ ಬಳಿ ವಿಚಾರಿಸಿದ್ದರು. ಅಸಂಬದ್ಧ ಪ್ರಶ್ನೆಗಳನ್ನು ಕೇಳಿ, ವಿಮಾನದ ಸಿಬ್ಬಂದಿ ವರ್ಗದವರಿಗೆ ತೊಂದರೆ ನೀಡಿದ್ದರು.
ವಿಮಾನದಲ್ಲಿ ಪರಿಚಾರಕ ಸಿಬ್ಬಂದಿ ಆತನ ಹತ್ತಿರವಿದ್ದರೂ ಪದೇ - ಪದೇ ಕಾಲಿಂಗ್ ಬಟನ್ ಪ್ರೆಸ್ ಮಾಡಿ ತೊಂದರೆ ಪಡಿಸಿದ್ದಾನೆ. ನಂತರ ತಾನು ವಿಮಾನದಲ್ಲಿದ್ದ ಲೈಫ್ ಜಾಕೆಟ್ ಅನ್ನು ತೆಗೆದು ಸಿಬ್ಬಂದಿಯವರ ಕೈಗೆ ನೀಡಿ, ವಿಮಾನ ಇಳಿದ ನಂತರ ಇದನ್ನು ಬಳಸುವುದಾಗಿ ತಿಳಿಸಿರುತ್ತಾನೆ. ವಿಮಾನ ಸಮುದ್ರದ ಮೇಲಿರುವಾಗ ತಾನು ವಿಮಾನದಿಂದ ಹೊರಗಿಳಿಯಬೇಕು, ಹಾರಬೇಕು ಎಂದು ಹೇಳಿ ತನ್ನ ಮತ್ತು ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿರುತ್ತಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
Dubai Mangalore flight passenger threatens crew of jumping from flight, case filed at Bajpe police station. The incident was reported on May 8th.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm