ಬ್ರೇಕಿಂಗ್ ನ್ಯೂಸ್
13-05-24 10:15 pm Mangalore Correspondent ಕರಾವಳಿ
ಮಂಗಳೂರು, ಮೇ.13: ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳು ಕರಾವಳಿ ಮತ್ತು ಮಲೆನಾಡಿನ ಐದು ಜಿಲ್ಲೆಗಳನ್ನು ಪ್ರತಿನಿಧಿಸುತ್ತವೆ. ಇವೆರಡರಲ್ಲಿ ಒಂದು ಸ್ಥಾನಕ್ಕೆ ಬಿಜೆಪಿಯಿಂದ ಕರಾವಳಿಯವರನ್ನು ಪರಿಗಣಿಸುವುದು ಹಿಂದಿನಿಂದ ಬಂದಿದ್ದ ವಾಡಿಕೆ. ಈ ಬಾರಿ ಮೈತ್ರಿ ಇರುವುದರಿಂದ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಭೋಜೇಗೌಡ ಜೆಡಿಎಸ್ಸಿನಿಂದ ಸ್ಥಾನ ಉಳಿಸಿಕೊಂಡಿದ್ದರೆ, ಬಿಜೆಪಿಯಿಂದ ಪದವೀಧರ ಕ್ಷೇತ್ರಕ್ಕೆ ಶಿವಮೊಗ್ಗದವರೇ ಆದ ಧನಂಜಯ ಸರ್ಜಿಗೆ ಟಿಕೆಟ್ ಕೊಟ್ಟಿರುವುದು ಕರಾವಳಿ ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಈಗಾಗಲೇ ಪದವೀಧರ ಕ್ಷೇತ್ರದಲ್ಲಿ ಟಿಕೆಟ್ ಸಿಗದ ಮುನಿಸಿನಲ್ಲಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಪಕ್ಷದ ವಿರುದ್ಧವೇ ತೊಡೆ ತಟ್ಟಿದ್ದು ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿಯೂ ಸಂಘ ಪರಿವಾರದ ಕಡೆ ಒಲವುಳ್ಳ ಮತದಾರರು ಜೆಡಿಎಸ್ ಅಭ್ಯರ್ಥಿ ಬದಲು ಬಿಜೆಪಿಯದ್ದೇ ಅಭ್ಯರ್ಥಿ ನಿಲ್ಲಿಸಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಆದರೆ ಭೋಜೇಗೌಡ ಅಧಿಕೃತ ಅಭ್ಯರ್ಥಿಯೆಂದು ಘೋಷಣೆ ಆಗಿರುವುದರಿಂದ ಪಕ್ಷದ ಮತ್ತೊಬ್ಬ ಅಭ್ಯರ್ಥಿ ನಿಲ್ಲುವ ಅವಕಾಶ ಇಲ್ಲ. ಇದೇ ಅವಕಾಶ ಬಳಸಿಕೊಂಡು ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದವರು ಪಕ್ಷೇತರ ನಿಂತರೂ ಅಚ್ಚರಿಯಿಲ್ಲ. ಎಬಿವಿಪಿ ಮತ್ತು ಸಹಕಾರ ಭಾರತಿಯಲ್ಲಿ ಗುರುತಿಸಿಕೊಂಡಿರುವ ಹರೀಶ್ ಆಚಾರ್ಯ ಶಿಕ್ಷಕರ ಕ್ಷೇತ್ರದಲ್ಲಿ ಪಕ್ಷೇತರ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ.
ಕಾಲೇಜು ದಿನಗಳಲ್ಲಿ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹರೀಶ್ ಆಚಾರ್ಯ ಆಬಳಿಕ ಸಹಕಾರ ಭಾರತಿಯಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿದ್ದರು. ಸಹಕಾರ ಭಾರತಿ ರಾಜ್ಯ ಕಾರ್ಯದರ್ಶಿಯಾಗಿ, ಸಹಕಾರಿ ವಲಯದ ಬ್ಯಾಂಕುಗಳಲ್ಲಿ ಸಕ್ರಿಯವಾಗಿದ್ದವರು. ಆನಂತರ, ಮಂಗಳೂರು ವಿವಿಯಲ್ಲಿ ಸಿಂಡಿಕೇಟ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈ ಬಾರಿ ಮಾಜಿ ಎಂಎಲ್ಸಿ ಗಣೇಶ್ ಕಾರ್ಣಿಕ್ ಹೊರತುಪಡಿಸಿದರೆ, ಹರೀಶ್ ಆಚಾರ್ಯ ಮತ್ತು ಮಾಜಿ ಸಿಂಡಿಕೇಟ್ ಸದಸ್ಯ ರಮೇಶ್ ಕೆ. ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ, ಈ ಕ್ಷೇತ್ರ ಜೆಡಿಎಸ್ಸಿಗೆ ಬಿಟ್ಟು ಹೋಗಿರುವುದರಿಂದ ಈ ಭಾಗದ ಕಾರ್ಯಕರ್ತರು ಮತ್ತು ಪಕ್ಷದ ಒಲವುಳ್ಳ ಮತದಾರರಲ್ಲಿ ಅಸಮಾಧಾನ ಸೃಷ್ಟಿಸಿದೆ. ಹೀಗಾಗಿ ಹರೀಶ್ ಆಚಾರ್ಯ ಅವರನ್ನು ಒಂದು ವರ್ಗ ಪಕ್ಷೇತರ ಅಭ್ಯರ್ಥಿ ಆಗಿಸುವಲ್ಲಿ ಒತ್ತಡ ಹೇರಿದೆ.
ವಿಶೇಷ ಅಂದ್ರೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದವರೇ ಅಭ್ಯರ್ಥಿಗಳಾದರೂ, ಪಕ್ಷದ ಚಿಹ್ನೆಯಲ್ಲಿ ಸ್ಪರ್ಧಿಸುವುದಲ್ಲ. ಹೀಗಾಗಿ ಇಲ್ಲಿ ರಾಜಕೀಯ ಪಕ್ಷಗಳ ಪಾತ್ರ ಹೆಸರಿಗಷ್ಟೇ ಇದ್ದು, ಪ್ರಾಬಲ್ಯ ಹೆಚ್ಚಿರುವುದಿಲ್ಲ. ವೈಯಕ್ತಿಕ ವರ್ಚಸ್ಸು ಮತ್ತು ಮತದಾರರನ್ನು ತಲುಪುವ ಗುಣಗಳೇ ಇಲ್ಲಿ ಪ್ರಮುಖ. ಈಗಾಗಲೇ ಕಾಂಗ್ರೆಸಿನಲ್ಲಿ ಶಿಕ್ಷಕರ ಕ್ಷೇತ್ರದಿಂದ ಕಳೆದ ಬಾರಿ ಸ್ಪರ್ಧಿಸಿದ್ದ ಶಿವಮೊಗ್ಗದವರೇ ಆದ ಕೆ.ಕೆ ಮಂಜುನಾಥ್ ಸ್ಪರ್ಧಿಸುವುದು ಖಾತ್ರಿಯಾಗಿದೆ. ಹೀಗಾಗಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಕೊಡಗು ಕ್ಷೇತ್ರಗಳ ದೊಡ್ಡ ಸಂಖ್ಯೆಯ ಮತದಾರರನ್ನು ಆಕರ್ಷಿಸಬಲ್ಲ ಮತ್ತೊಬ್ಬ ಅಭ್ಯರ್ಥಿ ಕಣದಲ್ಲಿ ಇಲ್ಲ. ಶಿಕ್ಷಕರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಮಂಗಳೂರಿನ ಡಾ.ಹರೀಶ್ ಆಚಾರ್ಯ ಪಕ್ಷೇತರ ಅಭ್ಯರ್ಥಿಯಾಗಿ ಈ ಭಾಗದ ಮತಗಳನ್ನು ಸೆಳೆಯಲು ಯಶಸ್ವಿಯಾದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳಿಗೆ ಪೈಪೋಟಿ ನೀಡುವುದು ನಿಚ್ಚಳ ಎಂಬ ಮಾತು ಕೇಳಿಬರುತ್ತಿದೆ.
Parishad elections Karnataka, BJP Dominated Dakshina Kannada gets JDS candidate, chances of harish acharya to contest independent.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm