ಬ್ರೇಕಿಂಗ್ ನ್ಯೂಸ್
14-05-24 10:08 pm Mangalore Correspondent ಕರಾವಳಿ
ಮಂಗಳೂರು, ಮೇ.14: ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳನ್ನು ರಾಷ್ಟ್ರೀಯ ಪಕ್ಷಗಳು ಸಂಪೂರ್ಣ ಕಡೆಗಣಿಸಿವೆ. ಅಭ್ಯರ್ಥಿ ಆಯ್ಕೆಯಲ್ಲಿ ಈ ಭಾಗದವರಿಗೆ ಪ್ರಾತಿನಿಧ್ಯ ನೀಡದೆ ನಿರ್ಲಕ್ಷ್ಯ ಮಾಡಿವೆ. ಹೀಗಾಗಿ ಕರಾವಳಿ ಭಾಗದ ಶಿಕ್ಷಕರ ಧ್ವನಿಯಾಗಲು ಬಯಸುತ್ತೇನೆ. ಶಿಕ್ಷಕರ ಸ್ವಾಭಿಮಾನದ ಪ್ರತೀಕವಾಗಿ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಮಂಗಳೂರು ವಿ.ವಿ. ಮಾಜಿ ಸಿಂಡಿಕೇಟ್ ಸದಸ್ಯ, ಸಹಕಾರ ಭಾರತಿ ಮುಖಂಡ ಎಸ್.ಆರ್. ಹರೀಶ್ ಆಚಾರ್ಯ ಹೇಳಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರು ತಮ್ಮ ವೃತ್ತಿ ಸಂಬಂಧವಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವುಗಳನ್ನು ಸರಕಾರದ ಮುಂದಿಡಲು, ಶಿಕ್ಷಕರ ಪರವಾಗಿ ಪರಿಷತ್ತಿನಲ್ಲಿ ಧ್ವನಿಯೆತ್ತಲು ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಮೇ 15ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು.
ಎಬಿವಿಪಿ ಮತ್ತು ಸಹಕಾರ ಭಾರತಿಯಲ್ಲಿ ಸುದೀರ್ಘ ಅವಧಿಯಲ್ಲಿ ಕೆಲಸ ಮಾಡುತ್ತ ಬಂದಿದ್ದೇನೆ. ಹಾಗಂತ, ಯಾವುದೇ ಪಕ್ಷದ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುತ್ತಿಲ್ಲ. ಬದಲಾಗಿ ಯಾವುದೇ ಪಕ್ಷದ ಸಹಕಾರ ಬಯಸದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು. ನಿಮ್ಮ ಸ್ಪರ್ಧೆಯಿಂದ ಪಕ್ಷದಲ್ಲಿ ತೊಡಕಾಗಲ್ಲವೇ ಎಂಬ ಪ್ರಶ್ನೆಗೆ, ನನ್ನ ಸ್ಪರ್ಧೆಯ ಕುರಿತು ಬಿಜೆಪಿ ಹಿರಿಯ ಮುಖಂಡರ ಬಳಿ ಹಿಂದೆಯೇ ಹೇಳಿದ್ದೇನೆ. ಕೆಲವು ತಿಂಗಳ ಹಿಂದೆಯೇ ಕ್ಷೇತ್ರ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದೇನೆ. ಶಿಕ್ಷಕರು ನೇರವಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಅತಿಥಿ ಉಪನ್ಯಾಸಕರ ಸಮಸ್ಯೆ, ಸವಾಲುಗಳನ್ನು ಅರಿತಿದ್ದೇನೆ. ಕರಾವಳಿ ಮತ್ತು ಕೊಡಗು ಜಿಲ್ಲೆಯ ಶಿಕ್ಷಕರು ನನ್ನ ಪರವಾಗಿ ಮತ ಚಲಾಯಿಸುತ್ತಾರೆಂಬ ಭರವಸೆ ಇದೆ ಎಂದರು.
ಶಿಕ್ಷಣ ಕ್ಷೇತ್ರದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಆಳುವ ಸರ್ಕಾರದಿಂದ ಕಡೆಗಣನೆ ಆಗುತ್ತಿದ್ದು ಸಮಸ್ಯೆಗಳ ಸರಮಾಲೆಯಿಂದಾಗಿ ಗೊಂದಲದ ಗೂಡಾಗಿದೆ. ನಾವು ಆಯ್ಕೆ ಮಾಡಿದ ಪ್ರತಿನಿಧಿಗಳು ನಮ್ಮ ಕೈಗೆಟುಕವಂತಿರಬೇಕು. ಸಮಸ್ಯೆಗಳಿಗೆ ಧ್ವನಿಯಾಗುವ ಆಸಕ್ತಿ ಹೊಂದಿರಬೇಕು ಎನ್ನುವ ಭಾವನೆ ಶಿಕ್ಷಕರಲ್ಲಿದೆ. ಹಾಗಾಗಿ, ಈ ಬಾರಿ ಬದಲಾವಣೆ ಕೂಗು ಕೇಳಿಬರುತ್ತಿದೆ. ಶಿಕ್ಷಕ ವೃಂದ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿರುವುದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ತಿಳಿದುಕೊಂಡಿದ್ದೇನೆ.
ಕಳೆದ 20 ವರ್ಷಗಳಿಂದ ಈ ಭಾಗದಲ್ಲಿ ವಿದ್ಯಾರ್ಥಿ ಮುಖಂಡನಾಗಿ ಕೆಲಸ ಮಾಡಿದ್ದೇನೆ. ಅಧ್ಯಾಪಕರ ಸಂಘಟನೆಗಳ ಜೊತೆಗೂ ನಿರಂತರ ಸಂಪರ್ಕ ಇಟ್ಟುಕೊಂಡಿದ್ದೇನೆ. ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯನಾಗಿಯೂ ಸೇವೆ ಸಲ್ಲಿಸಿ, ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕ ಸಮುದಾಯದ ಹಲವಾರು ಸಮಸ್ಯೆಗಳಿಗೆ ಧ್ವನಿಯಾಗಿದ್ದೇನೆ. ಶಿಕ್ಷಕ ಸಮುದಾಯದ ಪರವಾಗಿ ಸಮರ್ಥ ರೀತಿಯ ಧ್ವನಿಯಾಗಲು ಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಡಾ.ರಾಜಮೋಹನ್ ರಾವ್, ಜ್ಯೋತಿ ರೈ, ನಿತೀಶ್ ಸಾಲ್ಯಾನ್, ಜಿತಿನ್ ಜಿಜೋ ಉಪಸ್ಥಿತರಿದ್ದರು.
Vidhan Parisad election, competing as a symbol of teacher's self esteem says Harish Acharya in Mangalore
27-08-25 03:17 pm
HK News Desk
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm