ಬ್ರೇಕಿಂಗ್ ನ್ಯೂಸ್
20-05-24 03:51 pm Mangalore Correspondent ಕರಾವಳಿ
ಮಂಗಳೂರು, ಮೇ 20: ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ ಕಳಕೊಂಡಿದ್ದಾರೆ.
ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಯುವಕ ಮೃತಪಟ್ಟಿದ್ದಾರೆ. ನಮ್ಮ ಕುಡ್ಲ - ವಿಜಾರ್ಡ್ ಕೇಬಲ್ ನೆಟ್ವರ್ಕ್ ನಲ್ಲಿ ಟೆಕ್ನೀಶಿಯನ್ ಆಗಿದ್ದ, ತೊಕ್ಕೊಟ್ಟು ಬಳಿಯ ಕಲ್ಲಾಪು ನಿವಾಸಿ ಹರೀಶ್ (43) ಸಾವನ್ನಪ್ಪಿದವರು. ಇವರು ತಮ್ಮ ಬೈಕನ್ನು ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಫುಟ್ ಪಾತಲ್ಲಿ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ, ಬಂಟ್ವಾಳ ಕಡೆಯಿಂದ ಹೆದ್ದಾರಿಯಲ್ಲಿ ಬಂದ ಡಸ್ಟರ್ ಕಾರು ನಿಯಂತ್ರಣ ತಪ್ಪಿ ಬಲಬದಿಯ ಡಿವೈಡರ್ ಗೆ ಡಿಕ್ಕಿಯಾಗಿದ್ದು, ಅಲ್ಲಿಂದ ಲೆಫ್ಟ್ ಬಂದು ನೇರವಾಗಿ ಹರೀಶ್ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದು ಫುಟ್ ಪಾತ್ ಹತ್ತಿದೆ. ಡಿವೈಡರ್ ಬಡಿದ ಜಾಗದಿಂದ 30 ಮೀಟರ್ ದೂರಕ್ಕೆ ಕಾರು ನುಗ್ಗಿ ಬಂದಿದ್ದು ಫಸ್ಟ್ ನ್ಯೂರೋ ಆಸ್ಪತ್ರೆ ಬಳಿ ಯುವಕನ ಪ್ರಾಣ ಕಸಿದಿದೆ.











ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ ಹರೀಶ್ ಅವರನ್ನು ಕೂಡಲೇ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬ್ರೇನ್ ಡೆಡ್ ಆಗಿದೆಯೆಂದು ವೈದ್ಯರು ತಿಳಿಸಿದ್ದಾರೆ. ಕಾರನ್ನು ಮಹಿಳೆಯೊಬ್ಬರು ಡ್ರೈವಿಂಗ್ ಮಾಡುತ್ತಿದ್ದು ನಿಯಂತ್ರಣ ತಪ್ಪುತ್ತಲೇ ಬ್ರೇಕ್ ಬದಲು ಎಕ್ಸ್ ಲೆಟರ್ ತುಳಿದಿದ್ದರಿಂದ ಅಮಾಯಕ ವ್ಯಕ್ತಿಯ ಪ್ರಾಣ ಹೋಗುವಂತಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಪುಡಿ ಪುಡಿಯಾಗಿದ್ದು ಚರಂಡಿಗೆ ಬಿದ್ದಿದೆ. ಹರೀಶ್ ಕೇಬಲ್ ಟೆಕ್ನೀಶಿಯನ್ ಮತ್ತು ಬಿಲ್ ಕಲೆಕ್ಷನ್ ಮಾಡುತ್ತಿದ್ದರು.
ಮೃತ ಹರೀಶ್ ಪತ್ನಿ , ಇಬ್ಬರು ಗಂಡು ಮಕ್ಕಳು, ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.
ಅಪಘಾತ ವಿಷಯ ತಿಳಿಯುತ್ತಲೇ ಹರೀಶ್ ಅವರ ಪತ್ನಿ ಸ್ಥಳಕ್ಕೆ ಬಂದಿದ್ದು ಗಂಡನ ಸಾವನ್ನು ನೋಡಲಾಗದೆ ರೋದಿಸಿದ್ದಾರೆ. ಕಾರು ಹೊಡೆದ ರಭಸಕ್ಕೆ ಇವರ ತಲೆಯ ಭಾಗವೇ ಒಡೆದು ಹೋಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಹರೀಶ್ ಅವರು ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕೇಬಲ್ ಬಿಲ್ ಕಲೆಕ್ಟ್ ಮಾಡುವುದಕ್ಕಾಗಿಯೇ ಬಂದಿದ್ದರು. ರಸ್ತೆ ಬದಿ ಬೈಕ್ ನಿಲ್ಲಿಸಿ ಕುಳಿತುಕೊಂಡಿದ್ದಾಗಲೇ ಕಾರು ಜವರಾಯನಂತೆ ಬಂದೆರಗಿದೆ.
Mangalore Accident near first neuro hospital near padil 43 year old cable operator dies on spot. The deceased has been identified as Harish from Kallapu. He had pareked his bike on the footpath and was talking on the phone while a duster car women who lost control rammed on Harish who was on the footpath of neuro hospital.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm