ಬ್ರೇಕಿಂಗ್ ನ್ಯೂಸ್
20-05-24 09:39 pm Mangalore Correspondent ಕರಾವಳಿ
ಬಂಟ್ವಾಳ, ಮೇ 20: ಎನ್ ಡಿಎ ಮೈತ್ರಿಕೂಟದ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ, ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಂತ ಬಹುಮತದಿಂದ ಗೆಲ್ಲಿಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಬಂಟವಾಳ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಹೆಚ್ಚು ನೋಂದಣಿ ಮಾಡಿದ ಕ್ಷೇತ್ರವಿದು, ಈ ಭಾಗದಿಂದ ಅಭ್ಯರ್ಥಿಗಳಿಗೆ ಹೆಚ್ಚಿನ ಲೀಡ್ ಕೊಡಲು ಶ್ರಮಿಸುವುದಾಗಿ ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕ ವಿಕಾಸ್ ಪುತ್ತೂರ್ ಮಾತನಾಡಿ, ಎಲ್ಲ ಮಹಾಶಕ್ತಿ ಕೇಂದ್ರದ ಪ್ರಮುಖರು ಒಟ್ಟಾಗಿ ಕೆಲಸ ಮಾಡಬೇಕಿದೆ. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಿಂತ ವಿಭಿನ್ನವಾಗಿ ಈ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಾರ್ಯಶೀಲರಾಗಬೇಕಿದೆ, ಪ್ರತಿ ಮತದಾರರನ್ನು ಮತಗಟ್ಟೆಗೆ ಕರೆತಂದು ಮೊದಲ ಪ್ರಾಶಸ್ತ್ಯದ ಮತ ಹಾಕಿಸಬೇಕು ಎಂದು ಹೇಳಿದರು.
ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ಬೇರೆಲ್ಲಾ ಚುನಾವಣೆಗಿಂತ ಪರಿಷತ್ ಚುನಾವಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮಾಡಬೇಕು, ಕಾರ್ಯಕರ್ತರು ಮತದಾರರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಬೇಕು, ಈ ಕ್ಷೇತ್ರಗಳು ಭಾವನಾತ್ಮಕವಾಗಿ ಶಕ್ತಿ ನೀಡಿವೆ, ನಮ್ಮ ಸಂಘಟನೆ ಗಟ್ಟಿಯಾಗಿದ್ದು, ಅಭ್ಯರ್ಥಿಗಳನ್ನು ಗೆಲ್ಲಿಸುವ ಅನಿವಾರ್ಯತೆ ಇದೆ, ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಸಂಘಟನೆಯ ಶಕ್ತಿಯ ಕೇಂದ್ರ ಬಿಂದುವೇ ಕಾರ್ಯಕರ್ತರು, ತಾವೇ ಅಭ್ಯರ್ಥಿ ಎಂದು ತಿಳಿದು ಮತ ಕೇಳಿ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕಂಪಲ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಂಗಳೂರು ಶಿಕ್ಷಕರ ಕ್ಷೇತ್ರದ ಸಂಚಾಲಕ ಪ್ರತಾಪಸಿಂಹ ನಾಯಕ್, ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್. ದತ್ತಾತ್ರಿ, ಶಾಸಕ ರಾಜೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸಂಧ್ಯಾ ಪೈ, ದೇವಪ್ಪ ಪೂಜಾರಿ, ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಪೂಜಾ ಪೈ, ಡಾ.ಮಂಜುಳಾ ಎಸ್. ರಾವ್, ಮಾಜಿ ಸಚಿವ ನಾಗರಾಜ್ ಶೆಟ್ಟಿ, ರಾಜ್ಯ ಪ್ರಕೋಷ್ಟದ ಕಾರ್ಯದರ್ಶಿ ಆರ್.ಸಿ.ನಾರಾಯಣ್, ಜೆಡಿಎಸ್ ಯುವ ನಾಯಕ ರಕ್ಷಿತ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. ಬಂಟವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿದರು,
Dr Dhananjaya Sarji campaigns in Bantwal for vidhan Parishad elections 2024 in Mangalore.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm