ಬ್ರೇಕಿಂಗ್ ನ್ಯೂಸ್
23-05-24 10:29 am Mangalore Correspondent ಕರಾವಳಿ
ಮಂಗಳೂರು, ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ರಾಜಕೀಯ ದುರುದ್ದೇಶ ಮತ್ತು ದ್ವೇಷ ಇಟ್ಟುಕೊಂಡು ಬಂಧಿಸುವ ಯತ್ನ ಮಾಡಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಎಫ್ಐಆರ್ ಹಾಕಲು ನಾಲ್ಕು ದಿನ ತೆಗೆದುಕೊಳ್ಳುತ್ತಾರೆ, ಅಂಥದ್ದರಲ್ಲಿ ಒಬ್ಬ ಜನಪ್ರತಿನಿಧಿಯನ್ನು ನೋಟೀಸ್ ನೀಡದೆಯೂ ಬಂಧಿಸುತ್ತಾರಂದ್ರೆ ರಾಜ್ಯದ ಜನಸಾಮಾನ್ಯರ ಸ್ಥಿತಿ ಹೇಗಿರಬಹುದು. ಈ ಘಟನೆಯನ್ನು ಇಷ್ಟಕ್ಕೇ ಬಿಡುವುದಿಲ್ಲ, ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.
ನಿನ್ನೆ ರಾತ್ರಿ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಠಾಣೆಗೆ ಹಾಜರಾದ ಸಂದರ್ಭದಲ್ಲಿ ಆಗಮಿಸಿದ್ದ ಸುನಿಲ್ ಕುಮಾರ್, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕ್ರಿಮಿನಲ್ ಚಟುವಟಿಕೆ ನಡೆಸುವವರನ್ನು ಪೊಲೀಸರು ನೇರ ಕಾರ್ಯಾಚರಣೆ ಮೂಲಕ ಬಂಧಿಸುವುದನ್ನು ನೋಡಿದ್ದೇವೆ. ಇಲ್ಲಿ ಒಬ್ಬ ಜನಪ್ರತಿನಿಧಿಯನ್ನು ಈ ರೀತಿ ಬಂಧಿಸಲು ಬಂದಿರುವುದು ರಾಜಕೀಯ ಹುನ್ನಾರ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹಾಕಿದವರನ್ನು ಬಂಧಿಸುವುದು ಬಿಡಿ, ಎಫ್ಐಆರ್ ಹಾಕುವುದಕ್ಕೂ ನಾಲ್ಕು ದಿನ ತೆಗೆದುಕೊಂಡಿದ್ದರು. ಇಲ್ಲಿ ಒಬ್ಬ ಶಾಸಕನನ್ನು ಎಫ್ಐಆರ್ ದಾಖಲಿಸಿ, ಬಂಧನ ಮಾಡಲು ಬರುತ್ತಾರಂದ್ರೆ ಸಾಮಾನ್ಯ ಜನರು ಬದುಕೋದು ಹೇಗೆ ಎಂದು ಪ್ರಶ್ನೆ ಮಾಡಿದರು.
ಹರೀಶ್ ಪೂಂಜ ಕಾನೂನಿಗೆ ಬೆಲೆ ಕೊಟ್ಟು ಠಾಣೆಗೆ ಹಾಜರಾಗಿದ್ದಾರೆ. ಸಂಜೆ ವೇಳೆ ನೋಟೀಸ್ ಕೊಟ್ಟಿದ್ದಾರೆ, ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಈ ಪ್ರಕರಣವನ್ನು ಇಷ್ಟಕ್ಕೇ ಬಿಡುವುದಿಲ್ಲ, ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ಶಾಸಕನ ಹಕ್ಕನ್ನೂ ಕಸಿದುಕೊಳ್ಳುವ ಯತ್ನ ಮಾಡಿದ್ದಾರೆ. ಈ ಕುರಿತು ಗೃಹ ಸಚಿವರನ್ನು ಭೇಟಿಯಾಗುತ್ತೇವೆ, ಗೂಂಡಾಗಿರಿ ತೋರಿದ ಪೊಲೀಸ್ ಅಧಿಕಾರಿಗಳ ಬಗ್ಗೆ ಕ್ರಮಕ್ಕೆ ಆಗ್ರಹಿಸುತ್ತೇವೆ. ಪೊಲೀಸರು ಗೂಂಡಾಗಿರಿ ನಡೆಸುವುದಕ್ಕೆ ಇರೋದಲ್ಲ. ಸಾರ್ವಜನಿಕರು, ಜನಪ್ರತಿನಿಧಿ ಜೊತೆಗೆ ಪೊಲೀಸರು ಗೌರವದಿಂದ ನಡೆದುಕೊಳ್ಳಬೇಕು. ಮುಂದಿನ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇವೆ, ಅಧಿವೇಶನ ಆಗಲು ಬಿಡುವುದಿಲ್ಲ ಎಂದು ಹೇಳಿದರು.
ಶಾಸಕರ ಮೇಲೆ ಎಫ್ಐಆರ್ ಹಾಕಿ ಆಮೂಲಕ ಕಾರ್ಯಕರ್ತರನ್ನು ಬೆದರಿಸುವುದು, ನಿಯಂತ್ರಣದಲ್ಲಿಡುವ ಹುನ್ನಾರ ಇದರ ಹಿಂದಿದೆ. ಶಾಸಕರನ್ನೂ, ಹಾಗೇ ಕಾರ್ಯಕರ್ತರನ್ನು ರಕ್ಷಣೆ ಮಾಡುತ್ತೇವೆ. ಕಾಂಗ್ರೆಸ್ ಸರಕಾರ ಅಧಿಕಾರ ಶಾಶ್ವತ ಅಲ್ಲ, ಮುಂದಿನ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡುತ್ತೇವೆ. ಶಾಸಕರು, ಕಾರ್ಯಕರ್ತರ ಜೊತೆಗೆ ಪಕ್ಷ ಇದೆ ಎಂಬುದನ್ನು ತೋರಿಸುತ್ತೇವೆ ಎಂದು ಹೇಳಿದರು.
Belthangady Harish Poonja arrest drama, sunil kumar slams Congress government over pressure over police. Those who shouted Pakistan Zindabad were arrested after four days but for an MLA Who threatened police had to face all this he added.
27-08-25 11:48 am
Bangalore Correspondent
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm