ಬ್ರೇಕಿಂಗ್ ನ್ಯೂಸ್
26-05-24 05:24 pm Udupi Correspondent ಕರಾವಳಿ
ಉಡುಪಿ, ಮೇ 26: ಉಚ್ಛಾಟನೆಯಾದದ್ದು ಮಾಧ್ಯಮದ ಮೂಲಕ ತಿಳಿಯಿತು, ಬೇಸರವಾಯಿತು. ಶಿಸ್ತು ಸಮಿತಿಯ ನೋಟಿಸ್ ಈವರೆಗೆ ನನಗೆ ತಲುಪಿಲ್ಲ. ಪಕ್ಷ ಎಂದರೆ ಜೀವ ಬಿಡುವ ಕಾರ್ಯಕರ್ತರಿಗೆ ನಿರಂತರ ನೋವಾಗುತ್ತಿದೆ. ಈ ವಜಾಕ್ಕೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ. ನಾನು ಮೋದಿಗೆ ಬೈದಿಲ್ಲ.. ರಾಜ್ಯದ ನಾಯಕರಿಗೆ ಬೈದಿಲ್ಲ. ಆದರೆ ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ.. ಹೀಗೆಂದು ಬಿಜೆಪಿ ಉಚ್ಚಾಟನೆ ಬಗ್ಗೆ ಮಾಜಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯಿಸಿದ್ದಾರೆ.
ಪಕ್ಷದ ಎಲ್ಲಾ ಹುದ್ದೆಯಿಂದ ವಜಾ ಮಾಡುವುದಾಗಿ ಹೇಳಿದ್ದಾರೆ. ನನ್ನದು ಕಾರ್ಯಕರ್ತ ಹುದ್ದೆ, ಪಕ್ಷದಲ್ಲಿ ನನಗೆ ಯಾವ ಹುದ್ದೆಯನ್ನು ಕೊಟ್ಟಿಲ್ಲ. ಬಿಜೆಪಿ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಎಂದು ಸ್ಪಷ್ಟಪಡಿಸಬೇಕು. ಟಿಕೆಟ್ ತಪ್ಪಿದಾಗ ಸ್ಥಾನಮಾನ ಕೊಡುತ್ತೇವೆ ಎಂದಿದ್ದರು. ಪಕ್ಷ ನನ್ನನ್ನು ರಾಜ್ಯ ಕಾರ್ಯಕಾರಿ ಸದಸ್ಯನನ್ನಾಗಿಯೂ ಮಾಡಿರಲಿಲ್ಲ.
ನಾನೆಂದೂ ಪಕ್ಷದ ಮುಖಂಡರಿಗೆ ಬೈದಿಲ್ಲ. ಪಕ್ಷದ ನಾಯಕರನ್ನು ಟೀಕೆ ಮಾಡಿದ ಜಗದೀಶ್ ಶೆಟ್ಟರ್ ಒಂದು ವರ್ಷದಲ್ಲಿ ವಾಪಾಸಾದರು. ಪಕ್ಷಕ್ಕೆ ವಾಪಸ್ ಆಗಿ ಲೋಕಸಭಾ ಟಿಕೆಟ್ ಪಡೆದುಕೊಂಡರು. ಇದು ಶಾಶ್ವತ ವಜಾ ಅಲ್ಲ, ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ. ಒಬ್ಬ ಬಿಜೆಪಿ ಕಾರ್ಯಕರ್ತನನ್ನು ವಜಾ ಮಾಡಲು ಸಾಧ್ಯವಿಲ್ಲ ಎಂದರು.
ಬಿಜೆಪಿ ಶಿಸ್ತು ಸಮಿತಿಗೆ ನನ್ನ ಹಲವು ಪ್ರಶ್ನೆ ಇದೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಏನು ಶಿಸ್ತು ಕ್ರಮ ಕೈಗೊಂಡಿದ್ದೀರಿ ? ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರನ್ನ ವಜಾ ಮಾಡಿದ್ದೀರಾ? ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ? ಅಗೋಚರವಾಗಿ ಬಿಜೆಪಿ ವಿರುದ್ಧ ಕೆಲಸ ಮಾಡುವವರ ಮೇಲೆ ಯಾವ ಕ್ರಮ ಆಗಿದೆ.
ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದರು. ಪಕ್ಷದ ದೃಷ್ಟಿಯಿಂದ ಜಿಲ್ಲಾಧ್ಯಕ್ಷರು, ಶಾಸಕರು, ಸುನಿಲ್ ಕುಮಾರ್ ಮಾಡುವುದು ಸರಿ ಇದೆ. ಆದರೆ ಪಕ್ಷದಿಂದ ವಜಾ ಮಾಡುವ ಸಮಾನ ನ್ಯಾಯ ಜಾರಿಗೆ ತನ್ನಿ. ಬಹಿರಂಗ ಹೇಳಿಕೆ ಕೊಡುವ ಭ್ರಷ್ಟಾಚಾರ ಆರೋಪ ಮಾಡುವ ನಾಯಕರ ಮೇಲೆ ನಿಮ್ಮ ಕ್ರಮ ಏನು? ಪಕ್ಷದ ಅಧಿಕೃತ ಅಭ್ಯರ್ಥಿಗಳ ಸೋಲಿಸಲು ಯಾರಿಗೆ ಎಷ್ಟು ಹಣ ಹೋಗಿದೆ, ಯಾರು ಕೆಲಸ ಮಾಡಿದ್ದಾರೆ ಎಂದು ಹೇಳ್ತೀರಾ. ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳೇ ಆರೋಪ ಮಾಡುತ್ತಿದ್ದಾರೆ. ವಿಪ್ ಉಲ್ಲಂಘನೆ ಮಾಡಿದವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ?
ನಾನೊಬ್ಬ ಪಾಪದವ, ಬಡಪಾಯಿ ಮಾತ್ರ ನಿಮಗೆ ವಜಾ ಮಾಡಲು ಸಿಕ್ಕಿದ್ದಾ? ನಾನು ವಿಚಲಿತನಾಗಿಲ್ಲ. ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ. ಜಗದೀಶ್ ಶೆಟ್ಟರ್ ಅವರ ಪ್ರಕರಣವೇ ನನಗೆ ಮಾದರಿ. ಕರಾವಳಿ ಬಿಜೆಪಿ ಕಾರ್ಯಕರ್ತರಿಗೆ ಶಿಸ್ತು ಜಾಸ್ತಿ, ಶಿಕ್ಷೆಯೂ ಜಾಸ್ತಿ. ಉಡುಪಿಯಲ್ಲಿ ನಾಲ್ವರು ಸಿಟ್ಟಿಂಗ್ ಎಂಎಲ್ಎಗಳನ್ನು ಬದಲಿಸಲಾಯಿತು. ಇದನ್ನ ಶಿವಮೊಗ್ಗದಲ್ಲಿ, ಬೆಂಗಳೂರಿನಲ್ಲಿ, ಬಾಗಲಕೋಟೆ, ಹುಬ್ಬಳ್ಳಿಯಲ್ಲಿ ಮಾಡಕ್ಕಾಗುತ್ತಾ? ಉಡುಪಿಯಲ್ಲಿ ಪಾಪದ ಕಾರ್ಯಕರ್ತರು ಸಂಘ, ಪಕ್ಷ ಅಂತ ಕೆಲಸ ಮಾಡುತ್ತಾರೆ.
ಕರಾವಳಿ ವಿಚಾರದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತದೆ. ಕರಾವಳಿಗೆ ಮೀಸಲಿಟ್ಟ ಸ್ಥಾನವನ್ನು ಶಿವಮೊಗ್ಗಕ್ಕೆ ಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ಮತದಾರರು, ಕಾರ್ಯಕರ್ತರು ಸರಿಯಾದ ಉತ್ತರ ಕೊಡುತ್ತಾರೆ ಎಂದು ಹೇಳಿದರು.
MLA Raghupathi Bhat expelled from BJP for 6 years, slams BJP party over decession. says did the party expel the two mlas who cross votes during Raj sabha elections 2024.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm