ಬ್ರೇಕಿಂಗ್ ನ್ಯೂಸ್
27-05-24 01:28 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 27: ಪೆನ್ ಡ್ರೈವ್ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದೆ. ಸೋಮವಾರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ರೇವಣ್ಣ ಭೇಟಿ ನೀಡಿದರು.
ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರವಿವಾರ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ರೇವಣ್ಣ ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.
ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ಎಚ್.ಡಿ ರೇವಣ್ಣ ಇದೀಗ ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ.



ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿಯ ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಜೊತೆ ರೇವಣ್ಣ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ ದೇವರ ಬಗ್ಗೆ ನಂಬಿಕೆಯಿದೆ.
ಪ್ರಕರಣ ಕೋರ್ಟ್ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಇನ್ನು ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರುವ ಬಗ್ಗೆಯೂ ಗೊತ್ತಿಲ್ಲ. ಉಳಿದ ಯಾವುದರ ಬಗ್ಗೆಯೂ ಸದ್ಯ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ತೆರಳಿದ್ದಾರೆ.
Revanna visits Dharmasthala temple in Mangalore offers prayers for prajwal. Said will leave everything into the hands of God. I belive in both law and God he added.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am