ಬ್ರೇಕಿಂಗ್ ನ್ಯೂಸ್
28-05-24 10:25 pm Mangalore Correspondent ಕರಾವಳಿ
ಮಂಗಳೂರು, ಮೇ 28: ಬಸ್ಸೆಂದರೆ ವಾಹನಗಳಲ್ಲಿ ದೊಡ್ಡಣ್ಣ, ಹಾಗಾಗಿ ಸಣ್ಣ ವಾಹನಗಳಿಗೆ ತೊಂದರೆಯಾಗದ ರೀತಿಯಲ್ಲಿ ಕಾರ್ಯ ನಿರ್ವಹಿಸಿರಿ. ನ್ಯಾಯ ಸಂಹಿತೆಯಲ್ಲಿ ಮುಂದಿನ ತಿಂಗಳಿನಿಂದ ಬದಲಾವಣೆಗಳು ಆಗಲಿದೆ. ಸಂಚಾರ ನಿಯಮ ಉಲ್ಲಂಘನೆಗಳ ಶಿಕ್ಷೆಯ ಪ್ರಮಾಣ ಮತ್ತು ದಂಡದ ಪ್ರಮಾಣ ಹೆಚ್ಚಾಗಲಿದೆ ಎಂದು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಬಿ.ಪಿ. ದಿನೇಶ್ ಕುಮಾರ್ ಹೇಳಿದರು.
ದ.ಕ ಬಸ್ ಮಾಲಕರ ಸಂಘ, ಕೆನರಾ ಬಸ್ಸು ಮಾಲಕರ ಸಂಘ ಹಾಗೂ ಸೈಂಟ್ ಅಲೋಶಿಯಸ್ ಕಾಲೇಜು(ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸಂಯುಕ್ತ ಆಶ್ರಯದಲ್ಲಿ ಬಸ್ಸು ಚಾಲಕರ - ನಿರ್ವಾಹಕರ ಮಾಹಿತಿ ಕಾರ್ಯಗಾರ 2024ಕ್ಕೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮಥಾಯಸ್ ಸಭಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು.
ಮಂಗಳೂರು ನಗರದ ರಸ್ತೆಯನ್ನು ಅಪಘಾತ ರಹಿತ ರಸ್ತೆ ಮಾಡಲು ಇಲಾಖೆ ಪಣ ತೊಟ್ಟಿದೆ. ಅದರ ಭಾಗವಾಗಿ ಕಾರ್ಯಾಗಾರ ನಡೆಸಲು ಸೂಚಿಸಲಾಗಿದೆ. 80 ವರ್ಷಗಳ ಇತಿಹಾಸದ ಖಾಸಗಿ ಬಸ್ಸಿನ ವ್ಯವಸ್ಥೆ ಮಂಗಳೂರಿನಲ್ಲಿದೆ. ರಸ್ತೆಗಳು ಹಾಗೇ ಇದ್ದರೂ ವಾಹನಗಳ ಸಂಖ್ಯೆ ದುಪ್ಪಟ್ಟಾಗಿವೆ. ಬಸ್ ಚಾಲಕರು ನಿಯಮಗಳ ಪಾಲನೆ ಮಾಡುವಲ್ಲಿ ಹಿಂದೇಟು ಹಾಕುವುದರಿಂದ ಕಾರ್ಯಾಗಾರ ಅನಿವಾರ್ಯವಾಗಿದೆ. ಪೊಲೀಸರು ದಂಡ ವಿಧಿಸಿದರೂ ನಿಯಮ ಉಲ್ಲಂಘನೆ ನಿಂತಿಲ್ಲ. ತಾಳ್ಮೆ ಅನ್ನುವುದು ಚಾಲಕರಲ್ಲಿ ಇಲ್ಲದಾಗಿದೆ. ನಗರ ಸುರಕ್ಷಿತವಾಗಿದೆ ಅನ್ನುವ ಮನೋಭಾವ ಜನರಲ್ಲಿ ಮೂಡಲು ಕಾರ್ಯಾಗಾರದಲ್ಲಿ ಸಿಗುವ ಮಾಹಿತಿಯನ್ನು ಕರ್ತವ್ಯದಲ್ಲಿ ಅಳವಡಿಸಿಕೊಳ್ಳಿ. ನ್ಯಾಯ ಸಂಹಿತೆಯಲ್ಲಿ ಬದಲಾವಣೆಗಳಾಗಿದ್ದು, ಐಪಿಸಿ ಬದಲಾಗಿ ಬಿಎನ್ ಎಸ್ ನ್ಯಾಯಸಂಹಿತೆ ಮುಂದಿನ ತಿಂಗಳಿನಿಂದ ಜಾರಿಗೆ ಬರಲಿದ್ದು, ಶಿಕ್ಷೆಯ ಪ್ರಮಾಣ ಹೆಚ್ಚಲಿದೆ.
ನಿರ್ಲಕ್ಷ್ಯದ ಚಾಲನೆ ಐಪಿಸಿ 279 ಬದಲಾಗಿ ಬಿಎನ್ ಎಸ್ ಕಾಯಿದೆಯಡಿ 281 ಇರಲಿದ್ದು, 6 ತಿಂಗಳ ಕಾರಾಗೃಹ 5,000 ದಂಡ ಬದಲು 3 ವರ್ಷ ಕಾರಾಗೃಹದಿಂದ 10,000 ದಂಡಕ್ಕೆ ಏರಿಕೆ, ಸಾಮಾನ್ಯ ಗಾಯ 337 ಐಪಿಸಿ ಬದಲಾಗಿ ಬಿಎನ್ ಎಸ್ 125 A, 125B, ಮರಣ ಸಂಭವಿಸಿದಾಗ 304 A ಬದಲು 106 BNS, ಎರಡು ವರ್ಷಗಳಿದ್ದ ಶಿಕ್ಷೆಯ ಪ್ರಮಾಣ 5 ವರ್ಷಕ್ಕೆ ಏರಿಕೆ, ಅಪಘಾತದ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸದೇ ಇದ್ದಲ್ಲಿ 134, 134A, 134B, ಅಪಘಾತದ ಮಾಹಿತಿ ಪೊಲೀಸ್ ಠಾಣೆಗೆ ನೀಡದೇ ಇರುವುದು, ಹಿಟ್ ಆಂಡ್ ರನ್ ಪ್ರಕರಣಗಳಿಗೆ 106(2) ಬಿಎನ್ ಎಸ್ ಕಾಯಿದೆಗಳಡಿ ಪ್ರಕರಣಗಳು ದಾಖಲಾಗಲಿದೆ.
ರೇಸಿಂಗ್, ಮದ್ಯಸೇವಿಸಿ ಚಾಲನೆ, ಮೊಬೈಲ್ ಫೋನ್ ಬಳಕೆ, ಓವರ್ ಟೇಕ್, ರೆಡ್ ಲೈಟ್ ಉಲ್ಲಂಘನೆ, ಒನ್ ವೇ ಚಾಲನೆ, ರೇಸಿಂಗ್ ಪ್ರಕರಣಗಳಲ್ಲಿ ಚಾಲಕನ ಚಾಲನಾ ಪರವಾನಗಿ ರದ್ದುಪಡಿಸುವ ಕ್ರಮ ಕೈಗೊಳಲಾಗುವುದು. ಮುಂದೆ ಎಲ್ಲಾ ರಸ್ತೆಗಳಲ್ಲಿ ಸಿಸಿಟಿವಿ ಅಳವಡಿಕೆ ಆಗುವುದರಿಂದ ಹೆಲ್ಮೆಟ್, ಮೊಬೈಲ್ ಬಳಕೆ, ಸೀಟ್ ಬೆಲ್ಟ್ ಹಾಕದಿರುವುದನ್ನು ಪತ್ತೆಹಚ್ಚಲಾಗುವುದು. ಬಸ್ಸುಗಳ ನಿರ್ವಾಹಕರು ಟಿಕೇಟು ನೀಡದೆ ನಿಮ್ಮ ಮೇಲಿನ ವಿಶ್ವಾಸ ಕಳೆದುಕೊಳ್ಳಬೇಡಿ. ಕರ್ಕಷ ಹಾನ್೯ಗಳ ಕುರಿತು ಜಾಗೃತಿ ವಹಿಸಿದ್ದರೂ, ಮುಂಬೈ, ಬೆಂಗಳೂರು ದೂರದೂರಿಗೆ ತೆರಳುವ ಬಸ್ಸುಗಳ ಹಾನ್೯ ಕುರಿತು ವ್ಯಾಪಕ ದೂರುಗಳು ಬರುತ್ತಿವೆ. ಸ್ವಶಿಸ್ತು ಕಾಪಾಡುವ ಮೂಲಕ ಸಾರ್ವಜನಿಕರ ಜವಾಬ್ದಾರಿಯನ್ನು ನಿರ್ವಹಿಸಿ ಬಸ್ ನಿಲ್ದಾಣಕ್ಕೇ ಬಸ್ಸುಗಳ ಕೊಂಡೊಯ್ಯಿರಿ. ಮೀಸಲು ಸೀಟುಗಳಲ್ಲಿ ಅವರಿಗೇ ಅವಕಾಶ ಕಲ್ಪಿಸಿರಿ. ಸಂಘ ಹೊರಡಿಸಿರುವ ಭಿತ್ತಿಪತ್ರದಲ್ಲಿ ಅವಶ್ಯಕ ಮಾಹಿತಿಗಳಿದ್ದು, ಎಲ್ಲರೂ ಪಾಲಿಸಿರಿ ಎಂದರು.
ಮಂಗಳೂರು ನಗರಕ್ಕೆ ದಿನದಲ್ಲಿ ಹೊರರಾಜ್ಯ, ಹೊರಜಿಲ್ಲೆ, ಜಿಲ್ಲೆ ಸೇರಿ 2,000 ದಷ್ಟು ಕೆ ಎಸ್ ಆರ್ ಟಿಸಿ ಹಾಗೂ ಖಾಸಗಿ ಬಸ್ಸುಗಳು ಸಂಚರಿಸುತ್ತಿವೆ. ಎರಡು ಲಕ್ಷದಷ್ಟು ಪ್ರಯಾಣಿಕರು ಬಸ್ಸುಗಳನ್ನು ಅವಲಂಬಿಸುತ್ತಾರೆ. ಅಷ್ಟೂ ಜನರ ಸುರಕ್ಷತೆ ಚಾಲಕರ ಮೇಲಿದೆ. ನಗರದ ಖಾಸಗಿ ಬಸ್ ಗಳಲ್ಲಿ ಕ್ಯಾಮರಾ ಅಳವಡಿಸಿರುವುದರಿಂದ ಧ್ವನಿ ಸಹಿತ ಚಿತ್ರ ರೆಕಾಡ್೯ ಆಗುವುದನ್ನು ಆಪ್ ಮೂಲಕ ಸಾರಿಗೆ ಇಲಾಖೆಯ 15 ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಜಿಪಿಎಸ್, ಸಿಸಿಟಿವಿ ಕುರಿತ ಟ್ರ್ಯಾಕಿಂಗ್ ಡಿವೈಸ್ ಇಲಾಖೆಯಡಿ ಕಾರ್ಯಾಚರಿಸಲಿದೆ. ಇದರಿಂದ ಸಾರಿಗೆ ಇಲಾಖೆಗಳ ಉಲ್ಲಂಘನೆಯ ದಂಡ ನೇರ ಮನೆ ಬಾಗಿಲಿಗೆ ಬರಲಿದೆ. ದಿನಕ್ಕೆ 300 ರಷ್ಟು ಎಲ್ಲಾ ತರಹದ ವಾಹನಗಳು ನೋಂದಣಿಯಾಗುತ್ತಿದೆ. ಸಾರಿಗೆ ಇಲಾಖೆಯ ತರಬೇತಿ ಕೇಂದ್ರದಲ್ಲಿ ಸಿಬಂದಿಗೆ ತರಬೇತಿ ನೀಡಲು ಇಲಾಖೆ ಸಿದ್ಧವಿದ್ದು, ಸಂಘದ ಮೂಲಕ ಸಿಬ್ಬಂದಿಯನ್ನು ಕಳುಹಿಸಿರಿ' ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲ್ನಾಡ್ ಹೇಳಿದರು.
ಸೈಂಟ್ ಅಲೋಶಿಯಸ್ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಆಲ್ವಿನ್ ಡೇಸ, ಸಹಾಯಕ ಪೊಲೀಸ್ ಆಯುಕ್ತ ನಜ್ಞಾ ಫಾರೂಕಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲ್ನಾಡ್ , ಉಪನ್ಯಾಸಕ, ರಾಷ್ಟ್ರಮಟ್ಟದ ತರಬೇತುದಾರ ರಾಜೇಂದ್ರ ಭಟ್ , ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ಜೀವಂಧರ್ ಅಧಿಕಾರಿ ಉಪಸ್ಥಿತರಿದ್ದರು. ಅಧ್ಯಕ್ಷ ಅಝೀಝ್ ಪರ್ತಿಪಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್ ವಂದಿಸಿದರು. ಆರ್.ಜೆ ಅಭಿಷೇಕ್ ಶೆಟ್ಟಿ ನಿರೂಪಿಸಿದರು.
ಕೊಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು. ಸಂಚಾರಿ ಠಾಣೆಯ ಠಾಣಾಧಿಕಾರಿಗಳಾದ ಆನಂದ್, ಉರಗಪ್ಪ, ದೀಪಕ್, ಕೃಷ್ಣಾನಂದ ನಾಯಕ್ ಭಾಗವಹಿಸಿದ್ದರು.
Strict action against those violating traffic rules from June 1st says DCP Dinesh kumar in Mangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am