ಬ್ರೇಕಿಂಗ್ ನ್ಯೂಸ್
28-05-24 10:31 pm Udupi Correspondent ಕರಾವಳಿ
ಉಡುಪಿ, ಮೇ 28: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಪಟ್ಟು ಸಡಿಲಿಸದೇ ಸುಪ್ರೀಂ ಕೋರ್ಟ್ ವರೆಗೂ ಹೋಗಿದ್ದ ಉಡುಪಿಯ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ, ಟ್ವಿಟರ್ ನಲ್ಲಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಪ್ರಶ್ನೆ ಮಾಡಿ ಅಣಕಿಸಿದ್ದಾರೆ.
ಟ್ವಿಟ್ಟರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಆಲಿಯಾ ಅಸ್ಸಾದಿ, ಅಂದು ಹಿಜಾಬ್ ಕಾರಣಕ್ಕಾಗಿ ನನ್ನನ್ನು ಕಾಲೇಜಿನಿಂದ ಹೊರದಬ್ಬಿದ್ರಿ. ಆ ಕಾರಣಕ್ಕಾಗಿ ನೀವು ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದ್ದೀರಿ. ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವುದನ್ನು ನೋಡುತ್ತಿದ್ದೇನೆ. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ ಎಂದು ಮಾಜಿ ಶಾಸಕ ರಘುಪತಿ ಭಟ್ ಅವರ ಕಾಲೆಳೆಯುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ದೇವರು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಆದರೆ, ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿನಿಗೆ ಅಂದಿನ ಸ್ಥಳೀಯ ಶಾಸಕ ರಘುಪತಿ ಭಟ್ ಅವರು ವಿರೋಧಿಸಿ ಅವಕಾಶ ಕೊಡದೇ ಪರೀಕ್ಷೆ ಬರೆಯುವುದರಿಂದ ಉಚ್ಛಾಟನೆ ಮಾಡಿದ್ದರು. ಇದಕ್ಕೆ ಎರಡು ವರ್ಷಗಳ ಬಳಿಕ ವಿದ್ಯಾರ್ಥಿನಿ ಅಲಿಯಾ ಅಸಾದಿ ‘ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ ಇತ್ತು. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ ಎಂದು ತಿರುಗೇಟು ಕೊಟ್ಟಿದ್ದಾರೆ.
ಉಡುಪಿ ಶಾಸಕರಾಗಿದ್ದ ರಘುಪತಿ ಭಟ್ ಅವರಿಗೆ 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ, ಯಶಪಾಲ್ ಸುವರ್ಣ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿತ್ತು. ಆನಂತರ, ವಿಧಾನ ಷರಿಷತ್ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದರು. ಆದರೆ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಬೇರೆಯವರ ಪಾಲಾಗಿದೆ. ಇದರಿಂದ ಸಿಟ್ಟಿಗೆದ್ದ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ
— Aliya Assadi (@Aliyassadi) May 28, 2024
ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ. @RaghupathiBhat (2/n)
Aliya Assadi, leader of the Udupi hijab protest, has taken a jab at expelled BJP former MLA Raghupati Bhat on ‘X’ (Twitter). "God will do what He wishes," she said. "With only 60 days remaining for the annual exams, you expelled me from college solely for wearing a hijab. Haven’t you achieved a great feat for your party?"
21-05-25 05:42 pm
Bangalore Correspondent
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
Accident in Vijaypura, 5 Killed, VRL volvo bu...
21-05-25 11:33 am
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 07:17 pm
Mangalore Correspondent
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm