ಬ್ರೇಕಿಂಗ್ ನ್ಯೂಸ್
30-05-24 03:05 pm Mangalore Correspondent ಕರಾವಳಿ
ಮಂಗಳೂರು, ಮೇ 30: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅನೇಕ ಶಿಕ್ಷಕರು ಮತ ಹಾಕಲು ಸಾಧ್ಯವಾಗದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸದಸ್ಯತ್ವ ನವೀಕರಣದ ಹೆಸರಲ್ಲಿ ಶಿಕ್ಷಕರ ಗಮನಕ್ಕೆ ಬಾರದೆ ಮತದಾನದ ಹಕ್ಕಿಗೆ ಕತ್ತರಿ ಹಾಕಲಾಗಿದೆ. ಇದನ್ನು ಚುನಾವಣೆ ಆಯೋಗದ ತಪ್ಪು ಎಂದು ಹೇಳುವುದಿಲ್ಲ. ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರ ಇರುವುದು ಸ್ಪಷ್ಟ. ಅನೇಕ ಮಂದಿ ಶಿಕ್ಷಕರು ಈ ಬಗ್ಗೆ ನಮ್ಮಲ್ಲಿ ದೂರು ನೀಡಿದ್ದಾರೆ. ಅನೇಕ ಮಂದಿ ಹೊಸದಾಗಿ ಆರ್ಜಿ ಹಾಕಿದ್ದರೂ ಚುನಾವಣಾ ಆಯೋಗ ಅದನ್ನು ಗಮನಿಸಿಲ್ಲ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಸ್ಪರ್ಧಿಸಿರುವ ಕುಂದಾಪುರದ ಭಾಸ್ಕರ್ ಶೆಟ್ಟಿ ಹೇಳಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರು ಮಾತ್ರ ಶಿಕ್ಷಕರ ಕ್ಷೇತ್ರ ಎಂದಾಗಿದ್ದು ಈ ಕ್ಷೇತ್ರವನ್ನು ಆಳುವವರು ಮಾತ್ರ ಬೇರೆಯೇ ಆಗಿದ್ದಾರೆ. ಈ ಕಾರಣಕ್ಕಾಗಿ ಓರ್ವ ಶಿಕ್ಷಕನಾಗಿ ಈ ಕ್ಷೇತ್ರದ ಆಳ ಅರಿವು ಬಲ್ಲ ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಸದಸ್ಯತ್ವಕ್ಕಾಗಿ ಅರ್ಜಿ ಹಾಕಿದವರನ್ನೂ ಮತದಾರ ಪಟ್ಟಿಗೆ ಸೇರ್ಪಡೆ ಮಾಡದಿರುವ ಬಗ್ಗೆ ಚುನಾವಣೆ ಆಯೋಗದ ಮುಖ್ಯಸ್ಥರಿಗೆ ದೂರು ನೀಡಿದ್ದೇನೆ. ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಹೈಕೋರ್ಟಿಗೂ ದೂರು ಸಲ್ಲಿಸಿದ್ದೇನೆ. ನೈರುತ್ಯ ಕ್ಷೇತ್ರದ ಚುನಾವಣೆ ಪ್ರಕ್ರಿಯೆಯನ್ನು ನಿಲ್ಲಿಸಿ ಮತದಾನದಿಂದ ವಂಚಿತರಾಗಿರುವ ಶಿಕ್ಷಕರಿಗೆ ತಕ್ಷಣವೇ ಅವಕಾಶ ನೀಡಬೇಕು. ನಂತರ ಚುನಾವಣೆ ಪ್ರಕ್ರಿಯೆಯನ್ನು ಶುರು ಮಾಡಬೇಕು. ಯಾವುದೇ ಶಿಕ್ಷಕರು ತಮ್ಮ ಸಮಸ್ಯೆ ಹೇಳಿಕೊಳ್ಳಬೇಕಿದ್ದಲ್ಲಿ 7022862057 ನಂಬರಿಗೆ ಕರೆ ಮಾಡಿ ಎಂದು ಮನವಿ ಮಾಡಿದರು.
ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿದ್ದವರೇ ಪರಿಷತ್ತಿನಲ್ಲಿ ಸದಸ್ಯರಾಗಬೇಕು. ರಾಜಕೀಯ ಕ್ಷೇತ್ರದಲ್ಲಿದ್ದವರಿಗೆ ಅವಕಾಶ ನೀಡಬಾರದು. ಶಿಕ್ಷಕರಿಗೆ ಪರ್ಮನೆಂಟ್ ಆಗಿ ಎಪಿಕ್ ಕಾರ್ಡ್ ಕೊಡಬೇಕು. ನಿವೃತ್ತರಾದವರೂ ಮತ ಹಾಕುವ ಅವಕಾಶ ಇರಬೇಕು. ಪ್ರತಿ ಬಾರಿ ಮತದಾರ ಪಟ್ಟಿಗೆ ನೋಂದಣಿ ಮಾಡುವ ಪ್ರಕ್ರಿಯೆ ತೆಗೆದು ಹಾಕಬೇಕು. ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯನ್ನು 5-10 ಶೇಕಡಾ ಪ್ರತಿನಿಧಿಗಳು ಚುನಾಯಿಸುವ ಪ್ರಕ್ರಿಯೆ ಕೊನೆಗೊಳ್ಳಬೇಕು. ಶಿಕ್ಷಕನಾಗಿ ಶಿಕ್ಷಣ ಕ್ಷೇತ್ರದಲ್ಲಿ ಬೇರೆ ಬೇರೆ ಕಡೆ ಕೆಲಸ ಮಾಡಿ ಇಲ್ಲಿನ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದೇನೆ. ಶಿಕ್ಷಕರು ನನ್ನ ಹಿನ್ನೆಲೆ ನೋಡಿ ಆಯ್ಕೆ ಮಾಡುವ ವಿಶ್ವಾಸದಲ್ಲಿದ್ದೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಸಂತರಾಜ್ ಶೆಟ್ಟಿ, ವಕೀಲ ಮಂಜುನಾಥ್, ಸುಬ್ಬಣ್ಣ ಶೆಟ್ಟಿ, ಉದ್ಯಮಿ ರತ್ನಾಕರ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ರಮೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
Mangalore Vidhan Parishad elections candidate from kundapura Harish Shetty disappointed over politics inside. Many teachers are facing the situation of not being able to vote in this election in South West teachers field. In the name of renewal of membership, teachers' right to vote has been cut unnoticed. This is not the fault of the Election Commission. It is clear that there is a conspiracy of unseen hands behind this. Many teachers
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am