ಬ್ರೇಕಿಂಗ್ ನ್ಯೂಸ್
06-06-24 05:03 pm Mangalore Correspondent ಕರಾವಳಿ
ಮಂಗಳೂರು, ಜೂನ್.6: ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಎರಡನೇ ಸುತ್ತಿನ ಮುಕ್ತಾಯದ ವೇಳೆಗೆ ಜೆಡಿಎಸ್ನ ಎಸ್.ಎಲ್. ಭೋಜೇಗೌಡ 3,069 ಮತಗಳಿಂದ ಮುನ್ನಡೆ ಗಳಿಸಿದ್ದಾರೆ. ಆಮೂಲಕ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಭೋಜೇಗೌಡ ಗೆಲ್ಲುವುದು ಖಚಿತವಾಗಿದೆ.
ಮೈಸೂರು ವಿಭಾಗೀಯ ಕಚೇರಿಯಲ್ಲಿ ಮತ ಎಣಿಕೆ ನಡೆಯುತ್ತಿದ್ದು ಎರಡು ಸುತ್ತಿನ ಮತ ಎಣಿಕೆಯ ಮುಕ್ತಾಯದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ 6,645 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ 3,576 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ, ಮಂಗಳೂರಿನ ಹರೀಶ್ ಆಚಾರ್ಯ 1,681 ಮತಗಳನ್ನು ಗಳಿಸಿದ್ದಾರೆ.
ಈವರೆಗೆ ಒಟ್ಟು 14,000 ಮತಗಳನ್ನು ಎಣಿಕೆ ಮಾಡಲಾಗಿದ್ದು, ಅದರಲ್ಲಿ 560 ಮತಗಳು ತಿರಸ್ಕೃತಗೊಂಡಿವೆ ಎಂದು ಚುನಾವಣಾಧಿಕಾರಿ ಜಿ.ಸಿ. ಪ್ರಕಾಶ್ ತಿಳಿಸಿದ್ದಾರೆ.
ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 23402 ಮತದಾರರಿದ್ದು ಈ ಪೈಕಿ 19320 ಮತದಾರರು ಮತ ಚಲಾವಣೆ ಮಾಡಿದ್ದರು. ಒಟ್ಟಾರೆಯಾಗಿ 82.56% ರಷ್ಟು ಮತದಾನ ದಾಖಲಾಗಿತ್ತು. ಎರಡು ಸುತ್ತಿನಲ್ಲಿ ಭೋಜೇಗೌಡ ಅತಿ ಹೆಚ್ಚು ಮತ ಗಳಿಸಿರುವುದರಿಂದ ಬಹುತೇಕ ಅವರೇ ಗೆಲುವು ದಾಖಲಿಸಲಿದ್ದಾರೆ. ಯಾವುದೇ ಅಭ್ಯರ್ಥಿ ನಿಕಟ ಸ್ಪರ್ಧೆ ಒಡ್ಡಿದಲ್ಲಿ ಮಾತ್ರ ಎರಡನೇ ಪ್ರಾಶಸ್ತ್ಯದ ಮತಗಳು ಗಣನೆಗೆ ಬರುತ್ತದೆ. ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಪೈಪೋಟಿ ನೀಡುವಷ್ಟು ಮತ ಪಡೆಯುವುದಕ್ಕೂ ವಿಫಲರಾಗಿದ್ದಾರೆ.
ಪದವೀಧರ ಕ್ಷೇತ್ರದ ಮತ ಎಣಿಕೆ ಮಧ್ಯಾಹ್ನ 3 ಗಂಟೆಯ ನಂತರ ನಡೆದಿದ್ದು ಹೀಗಾಗಿ ಫಲಿತಾಂಶ ಬರುವಾಗಲೂ ವಿಳಂಬವಾಗುವ ಸಾಧ್ಯತೆಯಿದೆ. ನೈರುತ್ಯ ವಿಧಾನ ಪರಿಷತ್ ಕ್ಷೇತ್ರ ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ, ಉಡುಪಿ ಮತ್ತು ದಾವಣಗೆರೆ ಜಿಲ್ಲೆಯ ಎರಡು ತಾಲೂಕುಗಳನ್ನು ಒಳಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರದ ಮತದಾರರ ಸಂಖ್ಯೆ 85089 ಮತದಾರರಿದ್ದು ಈ ಪೈಕಿ 66529 ಮಂದಿ ಮತ ಚಲಾವಣೆ ಮಾಡಿದ್ದರು. ಒಟ್ಟು 78.19% ರಷ್ಟು ಮತದಾನ ಆಗಿತ್ತು. 10 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು ಬಿಜೆಪಿಯ ಡಾ. ಧನಂಜಯ ಸರ್ಜಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ನಡುವೆ ನೇರ ಸ್ಪರ್ಧೆ ಇದೆ. ಬಿಜೆಪಿ ಟಿಕೆಟ್ ಸಿಗದ ಕಾರಣ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರಿಂದ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.
Karnataka vidhan parishad election, Bhojegowda leading with majority votes.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm