ಬ್ರೇಕಿಂಗ್ ನ್ಯೂಸ್
08-06-24 11:44 am Mangalore Correspondent ಕರಾವಳಿ
ಮಂಗಳೂರು, ಜೂನ್ 8: ನಾಮ ಫಲಕಗಳಲ್ಲಿ ಕನ್ನಡ ಬಳಸದ ಅಂಗಡಿ ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವುಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ಭಾಷಾ ನೀತಿಯಂತೆ ನಗರದಲ್ಲಿನ ಎಲ್ಲಾ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ವ್ಯವಹಾರಗಳ ಉದ್ದಿಮೆಗಳು, ಸಂಸ್ಥೆಗಳು, ಟ್ರಸ್ಟ್ , ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆ, ಲ್ಯಾಬೊರೇಟರಿ, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್ ಗಳು ಮತ್ತಿತರ ಎಲ್ಲ ಸಂಘ, ಸಂಸ್ಥೆ, ಅಂಗಡಿಗಳ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆಲವೊಂದು ಉದ್ದಿಮೆದಾರರು ಪಾಲಿಕೆ ಆದೇಶವನ್ನು ಉಲ್ಲಂಘಿಸಿ ಅಂಗ್ಲ ಭಾಷೆಯಲ್ಲಿ ನಾಮಫಲಕ ಅಳವಡಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆ, ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಗಿಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ.
The Commissioner of Mangaluru City Corporation has warned commercial establishments in the city that do not display nameboards written in Kannada, stating that they would have to face action as strict as cancellation of their licences.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm