ಬ್ರೇಕಿಂಗ್ ನ್ಯೂಸ್
09-06-24 09:16 pm Mangalore Correspondent ಕರಾವಳಿ
ಮಂಗಳೂರು, ಜೂನ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ್ದು, ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಮಾಚಲ ಪ್ರದೇಶ ಮೂಲದ ಜೆಪಿ ನಡ್ಡಾ 2019ರ ಜೂನ್ 19ರಂದು ಬಿಜೆಪಿ ಅಧ್ಯಕ್ಷರಾಗಿದ್ದರು. ಅಮಿತ್ ಷಾ ಬಳಿಕ ಪಕ್ಷದ ಚುಕ್ಕಾಣಿ ಹಿಡಿದಿದ್ದ ಅವರು ರಾಷ್ಟ್ರೀಯ ನೆಲೆಯಲ್ಲಿ ಆಕರ್ಷಣೆ ಮೂಡಿಸಿದ್ದರು. 2014ರಲ್ಲಿ ಮೋದಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ನಡ್ಡಾ ಕರ್ತವ್ಯ ನಿರ್ವಹಿಸಿದ್ದರು.
ಈ ಬಾರಿ ಮೋದಿ ಸಂಪುಟದಲ್ಲಿ ಹಿಮಾಚಲ ಪ್ರದೇಶದ ಅನುರಾಗ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿಲ್ಲ. ಅವರ ಬದಲಿಗೆ, ಜೆಪಿ ನಡ್ಡಾಗೆ ಅವಕಾಶ ನೀಡಿದ್ದು, ಅನುರಾಗ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ. ಜೆಪಿ ನಡ್ಡಾ ಅವಧಿ ಇದೇ ಜೂನ್ ತಿಂಗಳಿಗೆ ಅಂತ್ಯಗೊಳ್ಳುವುದರಿಂದ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತು ಕೇಳಿಬಂದಿತ್ತು. ಅದಕ್ಕೂ ಮೊದಲೇ ಪಕ್ಷದ ಹುದ್ದೆಗೆ ರಾಜಿನಾಮೆ ಕೊಟ್ಟು ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಜೆಪಿ ನಡ್ಡಾ ಸ್ಥಾನ ತೆರವಾಗಿದ್ದರಿಂದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆ ಎದ್ದಿದೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ಸಂಸದರಾಗಿ ವಿದಿಶಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೇರಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಾರಿ ಕೇಂದ್ರ ಸಚಿವರಾಗಿ ಚೌಹಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
BJP chief JP Nadda is back in Prime Minister Narendra Modi's cabinet, which has taken charge for a historic third term. Along with PM Modi, seventy-one ministers took oath at the Rashtrapati Bhavan today.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm