ಬ್ರೇಕಿಂಗ್ ನ್ಯೂಸ್
10-06-24 11:04 am Mangalore Correspondent ಕರಾವಳಿ
ಉಳ್ಳಾಲ, ಜೂ. 10: ನಿನ್ನೆ ರಾತ್ರಿಯಿಡೀ ಸುರಿಯುತ್ತಿದ್ದ ಜಡಿ ಮಳೆಯ ನಡುವೆಯೂ ತೊಕ್ಕೊಟ್ಟು ಸಮೀಪದ ಕಲ್ಲಾಪು ಗ್ಲೋಬಲ್ ಮಾರ್ಕೆಟಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಸುಮಾರು 24 ಹಣ್ಣಿನ ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಹಣ್ಣುಗಳು ಸುಟ್ಟು ಕರಕಲಾಗಿವೆ.
ಗ್ಲೋಬಲ್ ಮಾರ್ಕೆಟ್ನಲ್ಲಿ ಇಂದು ನಸುಕಿನ 3 ಗಂಟೆಯ ವೇಳೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮಾರ್ಕೆಟ್ ಒಳಗಿನ ಸುಮಾರು 24 ಹಣ್ಣಿನ ಸ್ಟಾಲ್ ಗಳಿಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಸ್ಟಾಲ್ ಗಳಲ್ಲಿ ದಾಸ್ತಾನು ಇರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹಣ್ಣುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಹಣ್ಣುಗಳಲ್ಲದೆ ಬೆಲೆ ಬಾಳುವ ಸೊತ್ತುಗಳು ಸುಟ್ಟು ಕರಕಲಾಗಿದ್ದು ವ್ಯಾಪಾರಿಗಳಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ, ಉಳ್ಳಾಲ ನಗರಸಭಾ ಅಧಿಕಾರಿಗಳು,ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Global market in ullal on fire, 24 fruit shops gutted in fire at ullal in Mangalore. Amid heavy rains the fire has erupted, making huge loss for fruit vendors.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm