ಬ್ರೇಕಿಂಗ್ ನ್ಯೂಸ್
10-06-24 05:21 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಭಾರತೀಯ ಪಶು ವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್ಎಸ್ಯು ಮತ್ತು ಕೆಪಿಎಫ್ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶು ವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.
Mangalore Doctor Sushant Rai Bellippadi selected as member of Indian Veterinary Medical Council.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm