ಬ್ರೇಕಿಂಗ್ ನ್ಯೂಸ್
10-06-24 10:45 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮರಳುಗಾರಿಕೆ, ಮಟ್ಕಾ, ಇಸ್ಪೀಟ್, ಬೆಟ್ಟಿಂಗ್ ದಂಧೆ ವ್ಯಾಪಕವಾಗಿದ್ದು, ಪೊಲೀಸ್ ಕಮಿಷನರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಇಂತಹ ಅಕ್ರಮ ದಂಧೆ ಸ್ವಲ್ಪ ಮಟ್ಟಿಗೆ ಕಡಿವಾಣ ಇದ್ದರೂ, ನಗರ ವ್ಯಾಪ್ತಿಯಲ್ಲಿ ನಿಯಂತ್ರಣ ಇಲ್ಲದಂತಾಗಿದೆ. ಅಕ್ರಮ ದಂಧೆಗಳ ಕಾರಣದಿಂದಾಗಿಯೇ ಅಹಿತಕರ ಘಟನೆಗಳಾಗುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಸಮಾನ ಮನಸ್ಕ ಸಂಘಟನೆಗಳ ಪ್ರಮುಖರು ದೂರು ಹೇಳಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಮುಖಂಡರು, ಹಲವು ವಿಚಾರಗಳಲ್ಲಿ ಸಚಿವರ ಜೊತೆಗೆ ಚರ್ಚಿಸಿದ್ದಾರೆ. ಹಿಂದು ಸಂಘಟನೆಯ ಶರಣ್ ಪಂಪ್ವೆಲ್ ಮೇಲೆ ಕಠಿಣ ಸೆಕ್ಷನ್ ಗಳನ್ನು ಹಾಕದೇ ಇರುವುದರಿಂದ ಹೈಕೋರ್ಟಿನಲ್ಲಿ ಕೇಸಿಗೆ ಹಿನ್ನಡೆಯಾಗಿದೆ. ಅಲ್ಲದೆ, ರಾಜ್ಯ ಸರಕಾರದ ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲರು ಕೂಡ ಇಂತಹ ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ಬಗ್ಗೆ ಕ್ರಮ ವಹಿಸಬೇಕಲ್ಲದೆ, ಕೋಮು ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ದ್ವೇಷದ ವಾತಾವರಣ, ಅಹಿತಕರ ಘಟನೆಗಳಿಗೆ ಆಸ್ಪದ ಕೊಟ್ಟಂತಾಗುತ್ತದೆ ಎಂದು ಸಚಿವರ ಗಮನ ಸೆಳೆದಿದ್ದಾರೆ.
ಎಸ್ಪಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಗ್ರಾಮಾಂತರ ಪ್ರದೇಶದಲ್ಲಿ ಅಕ್ರಮಗಳನ್ನು ನಿಯಂತ್ರಣ ಮಾಡುತ್ತಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ, ರಮಾನಾಥ ರೈ ಹೇಳಿದರು. ಮಂಗಳೂರು ಪೊಲೀಸ್ ಕಮಿಷನರ್ ಸರಿಯಿಲ್ಲ. ಯಾವುದೇ ವಿಚಾರಕ್ಕೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಪೊರೇಟರ್ ನವೀನ್ ಡಿಸೋಜ ಹೇಳಿದರು. ದೋ ನಂಬರ್ ಅಕ್ರಮ ದಂಧೆಗಳಿಗೆಲ್ಲ ಆಸ್ಪದ ಕೊಟ್ಟಿದ್ದಾರೆ, ಏನೆಲ್ಲ ದಂಧೆಗಳಿವೆಯೋ ಅವೆಲ್ಲ ರಾಜಾರೋಷವಾಗಿ ನಡೀತಿದೆ, ಇದಕ್ಕೆಲ್ಲ ಪೊಲೀಸರೇ ಸಾಥ್ ಇದ್ದಾರೆ ಎಂದು ಮುನೀರ್ ಕಾಟಿಪಳ್ಳ ಸಚಿವರ ಗಮನಕ್ಕೆ ತಂದರು.
ಇದೇ ವೇಳೆ, ಮಾಜಿ ಸಚಿವ ರಮಾನಾಥ ರೈ ಅವರು ಅಹಿತಕರ ಘಟನೆಗಳನ್ನು ತಡೆಯಲು ಇಂತಹ ಪ್ರಕರಣಗಳಲ್ಲಿ ಸರಿಯಾದ ತನಿಖೆ ನಡೆಯದಿರುವುದೇ ಕಾರಣ. ಇದಕ್ಕಾಗಿ ಹತ್ತು ವರ್ಷಗಳಲ್ಲಿ ಆಗಿರುವ ಕೋಮು ದ್ವೇಷದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ ಮಾಡಬೇಕು. ಹಾಗಾದಲ್ಲಿ ಅಂತಹ ಪ್ರಕರಣಗಳ ಹಿಂದಿರುವ ಶಕ್ತಿಗಳು ಯಾರು ಎನ್ನುವುದು ತಿಳಿಯುತ್ತದೆ. ಹಲ್ಲೆ, ಕೊಲೆ ಪ್ರಕರಣಗಳಲ್ಲಿ ಮುಸ್ಲಿಂ ಮತ್ತು ಹಿಂದುಳಿದ ವರ್ಗದ ಯುವಕರು ಬಲಿಪಶುಗಳಾಗುತ್ತಿದ್ದಾರೆ. ಅವರನ್ನು ಛೂಬಿಡುವ ಪ್ರಮುಖರು ಕಾನೂನು ಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದರು.
ಇದಲ್ಲದೆ, ಸಮಾನ ಮನಸ್ಕ ಸಂಘಟನೆಗಳ ಪ್ರಮುಖರು, ಜಿಲ್ಲಾ ಮಟ್ಟದ ಪೊಲೀಸ್ ಮತ್ತು ಕಂದಾಯ ಇಲಾಖೆ ಸೇರಿದಂತೆ ಪ್ರಮುಖ ಅಧಿಕಾರಿಗಳು, ರಾಜ್ಯ ಸರಕಾರದ ಒಬ್ಬರು ಪ್ರಮುಖ ಅಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖ ಸಭೆ ಏರ್ಪಡಿಸಬೇಕು. ಅಧಿಕಾರಿಗಳ ಮುಂದೆಯೇ ಇಂತಹ ವಿಚಾರಗಳ ಬಗ್ಗೆ ಚರ್ಚೆ ನಡೆಸುವುದಕ್ಕೆ ಅವಕಾಶ ಸಿಗುತ್ತದೆ ಎಂದು ಮುನೀರ್ ಕಾಟಿಪಳ್ಳ ಹೇಳಿದರು. ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಒಪ್ಪಿಗೆ ಸೂಚಿಸಿದ್ದು, ಸದ್ಯದಲ್ಲೇ ಸಭೆ ನಡೆಸುವುದಾಗಿ ಹೇಳಿದ್ದಾರೆ. ಕಮ್ಯುನಿಸ್ಟ್ ಸಂಘಟನೆ ನಾಯಕರು, ದಲಿತ ಸಂಘಟನೆ ಪ್ರಮುಖರು, ಕಾಂಗ್ರೆಸ್ ನಾಯಕರು ಇದ್ದರು.
Organisations activist compliant against Mangalore police commissioner Anupam Agarwal over large illegal activites and not taking any action against those. They expressed their concerns to minister in charge Dinesh Gundu Rao
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm