ಬ್ರೇಕಿಂಗ್ ನ್ಯೂಸ್
11-06-24 11:43 am Mangalore Correspondent ಕರಾವಳಿ
ಉಳ್ಳಾಲ, ಜೂ.11: ಉಳ್ಳಾಲ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರ ಪ್ರದೇಶ ಮೂಲದ ಆರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿ ಸಾವನ್ನಪ್ಪಿದ್ದು ಉಳಿದ ಐವರನ್ನ ಸ್ಥಳೀಯರು ರಕ್ಷಿಸಿದ್ದಾರೆ.
ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮಿ ರತ್ನ ಕುಮಾರಿ (57) ಸಾವನ್ನಪ್ಪಿದವರು.
ಉಳ್ಳಾಲ ಬೀಚಲ್ಲಿ ನಿನ್ನೆ ಸಂಜೆ ಪರಿಮಿ ರತ್ನ ಕುಮಾರಿ ಅವರು ಸ್ನೇಹಿತೆಯರಾದ ವೆನ್ನ ವಿಜಯ ಲಕ್ಷ್ಮಿ, ಸ್ವಾತಿ, ಸುನಂದ, ಅರುಣ ಮತ್ತು ಸುಮಾ ಅವರೊಂದಿಗೆ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ಆರು ಮಹಿಳೆಯರನ್ನು ಎಳೆದೊಯ್ದಿತ್ತು. ಸ್ಥಳೀಯರು ತಕ್ಷಣ ಆರು ಮಂದಿಯನ್ನ ಸಮುದ್ರದಿಂದ ಮೇಲಕ್ಕೆತ್ತಿದ್ದಾರೆ. ಪ್ರಜ್ಞಾಹೀನರಾಗಿದ್ದ ಪರಿಮಿ ರತ್ನ ಕುಮಾರಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹೈದರಾಬಾದ್ ನಿಂದ 6 ಮಂದಿ ಮಹಿಳೆಯರು ಜೂ.6 ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. ಅಲ್ಲಿ ಪ್ರವಾಸ ಮುಗಿಸಿದ ಬಳಿಕ ಇನೋವಾ ಕಾರಿನಲ್ಲಿ ಜೂ.7 ಕ್ಕೆ ಕೊಡಗಿಗೆ ತಲುಪಿದ್ದರು. ಜೂ.9 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ನಡೆಸಿ, ನಿನ್ನೆ ಬೆಳಗ್ಗೆ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ಸೋಮೇಶ್ವರ ಸೋಮನಾಥನ ದರ್ಶನ ಪಡೆದು ಸಂಜೆ ಉಳ್ಳಾಲ ಸಮುದ್ರ ತೀರ ವಿಹಾರಕ್ಕೆ ಬಂದಿದ್ದರು. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore 57 year old women from Andhra drowned at ullal beach, five rescued. The deceased has been identified as Rathna Kumari. They had come as family to visit Dharmasthala temple to offer prayers from Andhra Pradesh.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm