ಬ್ರೇಕಿಂಗ್ ನ್ಯೂಸ್
13-06-24 03:24 pm Mangalore Correspondent ಕರಾವಳಿ
ಉಳ್ಳಾಲ, ಜೂ.13: ಬೋಳಿಯಾರು ಚೂರಿ ಇರಿತ ಪ್ರಕರಣವು ಶಾಸಕ ಖಾದರ್ ಅವರನ್ನ ಹಣಿಯಲು ಜಂಟಿಯಾಗಿ ಬಲೆ ಹೆಣೆದ ಎರಡು ಪಕ್ಷಗಳ ನಡುವಿನ ಘಟನೆಯಾದರೂ ಕಾನೂನು ಪರ ಇರುವ ಶಾಸಕರೂ, ವಿದಾನಸಭೆಯ ಸ್ಪೀಕರ್ ಆಗಿರುವ ಯು.ಟಿ.ಖಾದರ್ ಅವರ ಮೇಲೆ ವಿನಾಕಾರಣ ಗೂಬೆ ಕೂರಿಸುವ ಕಾರ್ಯವನ್ನ ರಾಜ್ಯದಲ್ಲಿ ಅಧಿಕಾರವಿಲ್ಲದೆ ಹತಾಶರಾದ ಬಿಜೆಪಿ ಶಾಸಕರು ಮತ್ತು ಮುಖಂಡರು ನಡೆಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಅಭಿಷೇಕ್ ಉಳ್ಳಾಲ್ ಹೇಳಿದರು.
ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭ ಶಾಸಕರನ್ನು ಸೋಲಿಸಲು ಒಂದೇ ಮನೆಯವರಂತೆ ಜಂಟಿಯಾಗಿ ಬಲೆ ಹೆಣೆದವರೇ ಇಂದು ತಮ್ಮೊಳಗೆ ಕಿತ್ತಾಟ ನಡೆಸುತ್ತಾ ಇದ್ದಾರೆ. ಬಿಜೆಪಿಯವರು ಈಗ ಶಾಸಕ ಖಾದರ್ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸುತ್ತಿದ್ದಾರೆ. ಭಾರತ್ ಮಾತಾ ಕಿ ಜೈ ಘೋಷಣೆಯು ಪ್ರಚೋದನಕಾರಿ ಎಂದು ಯಾವತ್ತೂ ಕಾಂಗ್ರೆಸ್ ಹೇಳುವುದಿಲ್ಲ. ಬೋಳಿಯಾರಿನಲ್ಲಿ ನಡೆದಿರುವ ಘಟನೆಯ ನೈಜ ವಿಚಾರ, ಸತ್ಯಸಂಗತಿಯನ್ನು ಜನರಿಗೆ ಮುಟ್ಟಿಸುವ ಕಾರ್ಯವಾಗಬೇಕು. ಖಾದರ್ ಅವರು ಶಾಸಕರಲ್ಲದೆ ವಿಧಾನಸಭೆಯ ಸ್ಪೀಕರ್ ಆಗಿದ್ದಾರೆ. ರಾಜಕೀಯ ಪಕ್ಷಗಳ ವಿಚಾರದಲ್ಲಿ ತೊಡಗಿಸಲು ಬರುವುದಿಲ್ಲ. ಕಾನೂನು ವ್ಯಾಪ್ತಿಯ ಕೆಲಸ ಕಾರ್ಯಗಳನ್ನಷ್ಟೆ ಅವರು ಮಾಡಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬಿಜೆಪಿಗರು ಬೋಳಿಯಾರಿನಲ್ಲಿ ಪೊಲೀಸ್ ಇಲಾಖೆಯ ಅನುಮತಿ ಪಡೆಯದೆ ವಿಜಯೋತ್ಸವ ಆಚರಿಸಿದ್ದಾರೆ. ವಿಜಯೋತ್ಸವ ವೇಳೆ ಕಾರ್ಯಕರ್ತರು ಹೇಗೆ ವರ್ತಿಸಬೇಕೆಂದು ಪಕ್ಷದ ಮುಖಂಡರು ತಿಳಿಸಬೇಕು. ಅದನ್ನು ಬಿಟ್ಟು ಕ್ಷೇತ್ರದ ಶಾಸಕರ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ. ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಶಾಂತಿಯನ್ನು ಕೆಡಿಸಿದ ಇತಿಹಾಸವೇ ಇಲ್ಲ. ಯು.ಟಿ ಖಾದರ್ ಅವರಿಗೆ ವೈರಿಗಳಿದ್ದಾರೆ ಎಂದರೆ ಅವರು ಕಾನೂನಿಗೆ ವಿರುದ್ಧವಾಗಿ ಇರುವವರು ಎಂದರ್ಥ. ಬೋಳಿಯಾರು ಪ್ರಕರಣದಲ್ಲಿ ಸಿಸಿಟಿವಿ ಫೂಟೇಜ್ ಆಧಾರದಲ್ಲಿ ತನಿಖೆ ನಡೆಯುತ್ತಿದ್ದು, ಸತ್ಯಾಂಶ ಪೊಲೀಸ್ ಇಲಾಖೆ ಜನತೆ ಮುಂದೆ ತಂದಿದೆ. ಬಿಜೆಪಿ ನಾಯಕರ ಸಲಹೆಯ ಅಗತ್ಯವಿಲ್ಲ. ಭಾರತೀಯರನ್ನ ಪಾಕಿಸ್ತಾನದವ ಅಂದರೆ ಸುಮ್ಮನೆ ಯಾರೂ ಕೂರುವುದಿಲ್ಲ. ಇಡೀ ಘಟನೆಯನ್ನು ಶಾಸಕರ ತಲೆಗೆ ಕಟ್ಟಿಕೊಡುವುದು ಹಾಸ್ಯಾಸ್ಪದ ಎಂದರು.
ಈ ಸಂದರ್ಭ ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಂ ರವೂಫ್, ಯುವ ಕಾಂಗ್ರೆಸ್ ಅಧ್ಯಕ್ಷ ಫಿರೋಝ್ ಮಲಾರ್ ಉಪಸ್ಥಿತರಿದ್ದರು.
Mangalore Boliyar Stabbing case, Congress spokesperson Abhishek slams BJP for misusing UT Khader name. He said why did the BJP members provoke the Muslims standing near the mosque, their provocation was the reason for stabbing he added.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm