ಬ್ರೇಕಿಂಗ್ ನ್ಯೂಸ್
14-06-24 12:50 pm Mangalore Correspondent ಕರಾವಳಿ
ಮಂಗಳೂರು, ಜೂನ್ 14: ಮೂರು ವರ್ಷಗಳ ಹಿಂದೆ ಆರಂಭಗೊಂಡ ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ವಿಸ್ತರಣೆಗೊಳ್ಳುತ್ತಿದೆ.
ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ 2021ರ ಫೆಬ್ರವರಿ 19ರಂದು ನೋಂದಣಿಗೊಂಡಿದ್ದು ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಅಲ್ಲದೆ ಮಂಗಳೂರಿನ ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ. ಸಂಸ್ಥೆಯ ಶಾಖೆಗಳನ್ನು ಗುತ್ತಿಗಾರು, ಪುತ್ತೂರು ಹಾಗೂ ಸುಳ್ಯ ತಾಲೂಕಿನಲ್ಲೂ ಆರಂಭಿಸಿದ್ದು ಇದೇ ಜೂನ್ ತಿಂಗಳಲ್ಲಿ ಶುಭಾರಂಭಗೊಳ್ಳಲಿದೆ.

ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ಮತ್ತಷ್ಟು ವಿಸ್ತರಣೆ ಮಾಡುತ್ತಿದ್ದು ಉಡುಪಿ, ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಸಂಸ್ಥೆಯು ಠೇವಣಿ ಮೇಲೆ ಗರಿಷ್ಠ 12.50% ದಷ್ಟು ಬಡ್ಡಿ ದರ ನೀಡುತ್ತಿದ್ದು ಸಾಲದ ಮೇಲೆ 18.50% ಬಡ್ಡಿ ದರ ವಿಧಿಸುತ್ತದೆ. 2023-2024ನೇ ಸಾಲಿನಲ್ಲಿ 10 ಕೋಟಿ ರೂಪಾಯಿಗಳ ವ್ಯವಹಾರ ನಡೆಸಿದ್ದು ಪ್ರಸಕ್ತ 2024-2025 ಆರ್ಥಿಕ ಸಾಲಿನಲ್ಲಿ 30 ಕೋಟಿ ರೂಪಾಯಿ ವ್ಯವಹಾರ ನಡೆಸುವ ಗುರಿಯನ್ನು ಹೊಂದಿದೆ. ಸಂಸ್ಥೆಯಲ್ಲಿ 60ಕ್ಕೂ ಮಿಕ್ಕಿ ಉದ್ಯೋಗಿಗಳನ್ನು ಹೊಂದಿದೆ. ಬ್ಯಾಂಕೇತರ ಹಣಹಾಸು ಸೇವೆಯ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಸಂಸ್ಥೆ ಆರಂಭಿಸಲಾಗಿದ್ದು ಮಂಗಳೂರಿನಲ್ಲಿ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಸೇವೆಯುಳ್ಳ ನೂತನ ಕಾರ್ಪೊರೇಟ್ ಕಚೇರಿಯನ್ನು 1.50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಿದೆ.
ಇತ್ತೀಚೆಗೆ ದಕ್ಷಿಣ ಕನ್ನಡ ಮ್ಯುಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ಸಂಸ್ಥೆಯ ಕಡಬ ಶಾಖೆಯ ಕಚೇರಿ ಪ್ರಮುಖರನ್ನು ಆಯ್ಕೆ ಮಾಡಲಾಗಿದೆ. ಕಡಬ ಶಾಖೆಯ ಶಾಖಾಧ್ಯಕ್ಷರಾಗಿ ಎಸ್. ಸತೀಶ್ ನಾಯಕ್, ಉಪಾಧ್ಯಕ್ಷರಾಗಿ ಕೆ. ಆಡಮ್, ಶಾಖಾ ಕಾರ್ಯದರ್ಶಿಯಾಗಿ ಕೃಷ್ಣಪ್ಪ ಮಡಿವಾಳ, ಶಾಖಾ ಖಜಾಂಚಿಯಾಗಿ ಕಿರಣ್ ಬಂಗೇರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada Mutual Benefit Nidhi Limited expands across the coastal district; new branch at Kadaba. Nidhi Company advances from a root word which traditionally means “treasure”. Recently, in the Indian financial sector, a Nidhi Company refers to any mutual benefit society notified under the Central / Union Government as a Nidhi Company.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm