ಬ್ರೇಕಿಂಗ್ ನ್ಯೂಸ್
17-06-24 03:01 pm Mangalore Correspondent ಕರಾವಳಿ
ಉಳ್ಳಾಲ, ಜೂ.17: ಜೀವನದಲ್ಲಿ ಎಷ್ಟೇ ಬಿಡುವಿಲ್ಲದಿದ್ದರೂ ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಮಾತ್ರ ಪೋಷಕರು ಸಮಯ ಮೀಸಲಿಡಬೇಕು. ತಮ್ಮ ಮಕ್ಕಳ ಕಲಿಕೆಯ ಕುರಿತಾಗಿ ಶಾಲಾ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಬೇಕೆಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಸಲಹೆ ನೀಡಿದರು.
ಆದಿತ್ಯವಾರ ಕುಂಪಲ ವ್ಯಾಸನಗರದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಾಣಗೊಂಡ ನೂತನ ಮಹಾದ್ವಾರವನ್ನು ಅವರು ಉದ್ಘಾಟಿಸಿದರು. ಬಳಿಕ ದೇವಸ್ಥಾನದಲ್ಲಿ ನಡೆದ ದೃಢ ಕಲಶ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ, ಶಾಲಾ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯಾರೊಬ್ಬ ಶಾಸಕ, ಸಂಸದ, ಜನಪ್ರತಿನಿಧಿಗಳಾಗಲಿ ನಿಮ್ಮ ಮನೆಯ ಸಮಸ್ಯೆಗಳನ್ನ ಬಗೆಹರಿಸಲು ಸಾಧ್ಯವಿಲ್ಲ. ನಿಮ್ಮ ಮನೆಯ ಮಕ್ಕಳು ಕಲಿತು ಸುಶಿಕ್ಷಿತರಾಗಿ ಉದ್ಯೋಗ ಪಡೆದಾಗಲೇ ನಿಮ್ಮ ಮನೆಯ ಸಮಸ್ಯೆಗಳೆಲ್ಲ ಬಗೆಹರಿಯಲು ಸಾಧ್ಯ. ಬಡತನದಲ್ಲಿ ಹುಟ್ಟಬಹುದು, ಬಡತನದಲ್ಲೇ ಸಾಯಬೇಕೆಂದು ಯಾರೂ ಹೇಳಿಲ್ಲ. ಹಾಗಾಗಿ ನಿಮ್ಮ ಮನೆಯ ಮಕ್ಕಳ ಶಿಕ್ಷಣಕ್ಕಾಗಿ ವಿಶೇಷವಾದ ಸಮಯವನ್ನ ಮೀಸಲಿಡಿ. ಧಾರ್ಮಿಕ ಕ್ಷೇತ್ರಗಳಲ್ಲೂ ಮಕ್ಕಳ ಶಿಕ್ಷಣಕ್ಕಾಗಿ ಸಹಕಾರ, ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.
ಈ ವೇಳೆ ಎಸ್ಸೆಸೆಲ್ಸಿಯಲ್ಲಿ ಗರಿಷ್ಠ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನ ಸನ್ಮಾನಿಸಲಾಯಿತು. ಆದಿಶಕ್ತಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ನೂತನ ಮಹಾದ್ವಾರ ನಿರ್ಮಿಸಿ ಕೊಟ್ಟ ಬೆಂಗಳೂರಿನ ಉದ್ಯಮಿ ಪ್ರಕಾಶ್ ಕುಂಪಲ ಮತ್ತು ಕುಟುಂಬಸ್ಥರನ್ನು ಯು.ಟಿ.ಖಾದರ್ ಸನ್ಮಾನಿಸಿದರು.
ಆದಿಶಕ್ತಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಚರಣ್ ಬೇಬಿ ನಾರಾಯಣ್ ಪಂಡಿತ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಆದಿಶಕ್ತಿ ಚಾಮುಂಡೇಶ್ವರಿ ಟ್ರಸ್ಟ್ ಅಧ್ಯಕ್ಷ ಶಿವಪ್ರಸಾದ್, ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಹೂಡೆ, ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ಅಧ್ಯಕ್ಷ ಭಗವಾನ್ ದಾಸ್ ಶೆಟ್ಟಿ, ಪ್ರಮುಖರಾದ ಶೇಖರ ಕುಂಪಲ, ಸುರೇಶ್ ಭಟ್ನಗರ, ಹರ್ಷರಾಜ್ ಮುದ್ಯ, ಗಣೇಶ್ ಕೆ.ಎನ್ ಮೊದಲಾದವರು ಉಪಸ್ಥಿತರಿದ್ದರು.
Mangalore Mahadwara constructed in front of Sri Adishakti Chamundeshwari Temple inaugurated by khader in ullal. On this occasion, talented students who scored maximum marks in Essex were felicitated. Bengaluru businessman Prakash Kumpala and his family members built a new Mahadwara for Adishakti Chamundeshwari Constituency.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm