ಬ್ರೇಕಿಂಗ್ ನ್ಯೂಸ್
17-06-24 03:32 pm Mangalore Correspondent ಕರಾವಳಿ
ಮಂಗಳೂರು, ಜೂನ್.17: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮಂಗಳೂರಿನಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕಾರು ಮತ್ತು ದ್ವಿಚಕ್ರ ವಾಹನಗಳನ್ನು ಹಗ್ಗ ಕಟ್ಟಿ ಎಳೆದು ಪೆಟ್ರೋಲ್ ಪಂಪ್ ನತ್ತ ಒಯ್ದು ಪೆಟ್ರೋಲ್ ಹಾಕಿಸಿದ್ದಾರೆ.
ರಾಜ್ಯ ಸರಕಾರ ದಿಢೀರ್ ಎನ್ನುವಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸಿದ್ದು, ಇದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ರಸ್ತೆಗಿಳಿದಿದ್ದು ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಪಿವಿಎಸ್ ವೃತ್ತದ ಬಳಿಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸೇರಿದ ಕಾರ್ಯಕರ್ತರು ಹಾಗೂ ಮುಖಂಡರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ.
ಇದೇ ವೇಳೆ ಕಾರೊಂದಕ್ಕೆ ಹಗ್ಗ ಕಟ್ಟಿ ನವಭಾರತ ಸರ್ಕಲ್ ಬಳಿಯ ಪೆಟ್ರೋಲ್ ಬಂಕ್ ಗೆ ಎಳೆದುಕೊಂಡು ಹೋಗಿದ್ದಲ್ಲದೆ, ಅಲ್ಲಿ ಚೆಂಬು ಹಾಗೂ ಗೆರಟೆ ಹಿಡಿದು ಭಿಕ್ಷೆ ಬೇಡಿ ಪೆಟ್ರೋಲ್ ಖರೀದಿಸಿ ಕಾರಿಗೆ ಹಾಕುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಪಕ್ಷದ ಮಹಿಳಾ ಕಾರ್ಯಕರ್ತರು ಕೂಡ ದ್ವಿಚಕ್ರ ವಾಹನವನ್ನು ಪೆಟ್ರೋಲ್ ಬಂಕ್ ವರೆಗೆ ತಳ್ಳಿಕೊಂಡು ಹೋಗಿ ಪೆಟ್ರೋಲ್ ಹಾಕಿಸಿ, ರಾಜ್ಯ ಸರ್ಕಾರ ದರ ಹೆಚ್ಚಿಸಿ ಬರೆ ಹಾಕಿದೆ ಎನ್ನುವುದನ್ನು ತೋರಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ ಬ್ರಿಜೇಶ್ ಚೌಟ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲು ಹಣಕಾಸು ಹೊಂದಿಸಲಾಗದೆ ತೈಲ ಬೆಲೆಯನ್ನು ಹೆಚ್ಚಿಸಿದ್ದು ಆಮೂಲಕ ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಹೊರಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಸದೇ ಇದ್ದರೆ ನಿರಂತರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಶಾಸಕರಾದ ಹರೀಶ್ ಪೂಂಜ, ವೇದವ್ಯಾಸ ಕಾಮತ್, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ್, ಪಾಲಿಕೆ ಮೇಯರ್ ಸುಧಿರ್ ಶೆಟ್ಟಿ ಹಾಗು ಸದಸ್ಯರು, ಪಕ್ಷದ ಕಾರ್ಯಕರ್ತರು ಮುಖಂಡರು ಉಪಸ್ಥಿತರಿದ್ದರು.
The district BJP staged a protest at PVS Junction on Monday, June 17, against the Congress-led state government for increasing petrol and diesel prices by Rs 3 and Rs 3.50 per litre, respectively. BJP leaders raised slogans against the government and displayed empty pots as a symbol of protest. They also demonstrated by pushing some vehicles and pulling some using a rope.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm