ಬ್ರೇಕಿಂಗ್ ನ್ಯೂಸ್
20-06-24 06:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 20: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ಜೂನ್ 18ರ ಮಂಗಳವಾರ ಮಧ್ಯಾಹ್ನ 12.43ಕ್ಕೆ ವಿಮಾನ ನಿಲ್ದಾಣದ ಇಮೇಲ್ ಐಡಿಗಳಿಗೆ ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಫೋಟಗೊಳ್ಳಲಿದೆ ಎಂದು ಯಾರೋ ಕಿಡಿಗೇಡಿಗಳು ಸಂದೇಶ ಕಳಿಸಿದ್ದಾರೆ.
ಇದರ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್ ಜೂನ್ 19ರಂದು ಸಂಜೆ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ. ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ ಇಲ್ಲವೆಂದು ಖಚಿತಪಡಿಸಿದ ಬಳಿಕ ಬಜ್ಪೆ ಠಾಣೆಗೆ ದೂರಿತ್ತಿದ್ದಾರೆ.
ಅಪರಿಚಿತ ವ್ಯಕ್ತಿ ವಿಮಾನ ನಿಲ್ದಾಣದ ಎರಡು ಇಮೇಲ್ ಐಡಿಗಳಿಗೆ [email protected] ಎಂಬ ಇಮೇಲ್ ವಿಳಾಸದಿಂದ ಬೆದರಿಕೆ ಸಂದೇಶ ಕಳಿಸಿದ್ದಾನೆ. ಇಮೇಲ್ ನಲ್ಲಿ Hello there are exploses hidden in the airport. The bombs will soon explode. You will all die. The GROUP “KNR” his behind this messacre. “KNR” is also behind the may 1st Delhi School attack (ವಿಮಾನ ನಿಲ್ದಾಣದ ಒಳಗಡೆ ಸ್ಫೋಟಕ ಸಾಮಗ್ರಿ ಅಡಗಿಸಿಟ್ಟಿದ್ದು, ಕೆಲವೇ ಕ್ಷಣದಲ್ಲಿ ಸ್ಫೋಟ ಆಗಲಿದೆ. ನೀವೆಲ್ಲ ಸಾಯಲಿದ್ದೀರಿ. ಗ್ರೂಪ್ ಕೆಎನ್ಆರ್ ಇದರ ಹಿಂದಿದೆ. ಮೇ 1ರ ಡೆಲ್ಲಿ ಸ್ಕೂಲ್ ಅಟ್ಯಾಕ್ ಕೃತ್ಯದಲ್ಲೂ ಇದೇ ಗ್ರೂಪ್ ಇತ್ತು) ಎಂಬುದಾಗಿ ಬರೆದಿದ್ದಾನೆ. ಪೊಲೀಸರು ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಇದೇ ಮಾದರಿಯ ಇಮೇಲ್ ಸಂದೇಶವನ್ನು ಒಂದೇ ದಿನ ದೇಶದ ಇತರ 41 ವಿಮಾನ ನಿಲ್ದಾಣಗಳಿಗೆ ರವಾನಿಸಲಾಗಿದ್ದು, ಎಲ್ಲ ಕಡೆಯೂ ಒಂದೇ ಇಮೇಲ್ ಐಡಿಯಿಂದ ಸಂದೇಶ ಕಳಿಸಿದ್ದು ಸಿಐಎಸ್ಎಫ್ ತಪಾಸಣೆ ನಡೆಸಿ ಹುಸಿ ಬಾಂಬ್ ಕರೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಮೇ ತಿಂಗಳ ಮೊದಲ ವಾರದಲ್ಲಿ ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ದುಬೈನಿಂದ ಬರ್ತಿದ್ದ ವಿಮಾನದಲ್ಲಿ ಬಾಂಬ್ ಇಡಲಾಗಿದೆ, ಎಲ್ಲರೂ ಸಾಯಲಿದ್ದೀರಿ ಎಂದು ಇಮೇಲ್ ಸಂದೇಶ ಕಳುಹಿಸಲಾಗಿತ್ತು. ಆ ಸಂದರ್ಭದಲ್ಲಿಯೂ ದೇಶದ 22 ವಿಮಾನ ನಿಲ್ದಾಣದ ಕಚೇರಿಗಳಿಗೆ ಇದೇ ರೀತಿಯ ಸಂದೇಶ ಹೋಗಿತ್ತು.
Mangalore airport gets bomb threat on mail, says there are explosives kept inside the airport, case filed at Bajpe police station. Mail has been sent from two different email ids to airport. The bombs will soon explode. You will all die. The GROUP “KNR” his behind this messacre. “KNR” is also behind the may 1st Delhi School attack.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am