ಬ್ರೇಕಿಂಗ್ ನ್ಯೂಸ್
27-06-24 07:36 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಎಚ್ಚರಿಕೆಯನ್ನು ಜೂನ್ 28ರ ವರೆಗೂ ವಿಸ್ತರಣೆ ಮಾಡಲಾಗಿದ್ದು, ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಸಿ ತರಗತಿಗಳಿಗೂ ರಜೆ ಘೋಷಣೆ ಮಾಡಲಾಗಿದೆ.
ಗುರುವಾರ ಸಂಜೆ ಮಂಗಳೂರಿನಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಮುಂದುವರಿಸಲಾಗಿದೆ. ಹೀಗಾಗಿ ಶುಕ್ರವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಮಂಗಳೂರಿನ ಉಳ್ಳಾಲ, ಬಂಟ್ವಾಳ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಕಂದಾಯ ಸಚಿವರ ಸೂಚನೆಯಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಗ್ರಾಮಾಂತರ ಪ್ರದೇಶದಲ್ಲಿ ಪ್ರತಿ ಪಂಚಾಯತ್ ಮತ್ತು ನಗರ ಪ್ರದೇಶದಲ್ಲಿ ವಾರ್ಡ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಮಾಡುತ್ತಿದ್ದೇವೆ. ಮಳೆಯಿಂದ ಅನಾಹುತ ಆಗಬಲ್ಲ ಮನೆ, ಕಟ್ಟಡಗಳನ್ನು ಗುರುತಿಸಲಾಗುತ್ತಿದ್ದು, ಅಂಥ ಜಾಗದಲ್ಲಿ ಪ್ರಾಣ ಹಾನಿಯಾಗದಂತೆ ನಿವಾಸಿಗಳನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಈ ಬಾರಿ ಹೆಚ್ಚಾಗಿ ಮನೆಗಳು ಕುಸಿದು ಬೀಳುವುದನ್ನು ಕಾಣುತ್ತಿದ್ದೇವೆ, ಇದಕ್ಕೆ ಅವೈಜ್ಞಾನಿಕ ಕಟ್ಟಡ ನಿರ್ಮಾಣ ಕಾರಣ ಇರಬಹುದು. ಜಾಗದ ಕೊರತೆಯಿಂದ ಈ ರೀತಿ ಮಾಡಿದ್ದು ಇರಬಹುದು. ಆದರೆ ಪ್ರಾಣ ಹಾನಿ ಆಗದ ರೀತಿ ನಾವು ನೋಡಿಕೊಳ್ಳಬೇಕಿದ್ದು, ಇದಕ್ಕಾಗಿ ಟಾಸ್ಕ್ ಫೋರ್ಸ್ ರಚನೆ ಮಾಡಿ, ಅದಕ್ಕೊಬ್ಬರು ಮುಖ್ಯಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಡಲ ತೀರ, ಕಾಲು ಸಂಕ, ತೋಡು, ಅಪಾಯದ ಸ್ಥಿತಿ ಇರುವಲ್ಲಿ ಮನೆಗಳನ್ನು ಮುಚ್ಚುವುದು ಮತ್ತು ಅಲ್ಲಿಗೆ ಹೋಗದಂತೆ ತಡೆ ಹಾಕುವ ಬಗ್ಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಹೇಳಿದ್ದಾರೆ.
ವಿದ್ಯುತ್ ಸಂಪರ್ಕ ಟ್ರಿಪ್ ಮಾಡಿಸಲು ಸೂಚನೆ
ಮಂಗಳೂರಿನ ಪಾಂಡೇಶ್ವರದಲ್ಲಿ ವಿದ್ಯುತ್ ಕಂಬ ಬಿದ್ದು ಇಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ, ನಗರ ಭಾಗದಲ್ಲಿ ವಿದ್ಯುತ್ ತಂತಿಗಳನ್ನು ಬಹುತೇಕ ನೆಲದಡಿಯಿಂದಲೇ ಮಾಡಲಾಗಿದೆ. ಬೀದಿ ದೀಪದ ಕಾರಣಕ್ಕೆ ಸಿಂಗಲ್ ಲೈನ್ ತಂತಿಯನ್ನು ಕಂಬದಲ್ಲಿ ನೀಡಲಾಗಿದೆ. ಎಚ್.ಟಿ ಲೈನ್ ಕಡಿದು ಬಿದ್ದರೆ ಕೂಡಲೇ ಟ್ರಿಪ್ ಆಗುವಂತೆ ವ್ಯವಸ್ಥೆ ಇದೆ. ಆದರೆ ಬೀದಿ ದೀಪದಲ್ಲಿ ಅಂತಹ ವ್ಯವಸ್ಥೆ ಇಲ್ಲದಿರುವುದರಿಂದ ತೊಂದರೆ ಆಗಿದೆ. ಇದಕ್ಕಾಗಿ ಕೂಡಲೇ ಟ್ರಿಪ್ ವ್ಯವಸ್ಥೆ ಮಾಡುವಂತೆ ಮೆಸ್ಕಾಂ ಇಲಾಖೆಗೆ ಸೂಚನೆ ನೀಡಿದ್ದು, ತಕ್ಷಣವೇ ಕಾರ್ಯ ಪ್ರವೃತ್ತವಾಗಲು ತಿಳಿಸಿದ್ದೇನೆ ಎಂದಿದ್ದಾರೆ.
DC declares holiday for schools and colleges in Dakshina Kannada Mangalore on June 28 after IMD declares rain alert. It is in view of the Karnataka State Natural Disaster Monitoring Centre (KSNDMC) and India Meteorological Department (IMD) declaring red alert for coastal Karnataka till 8.30 a.m. on Thursday, a release said.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 09:22 pm
Mangalore Correspondent
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm