ಬ್ರೇಕಿಂಗ್ ನ್ಯೂಸ್
28-06-24 04:22 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 28: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿದ ಪೊಲೀಸರ ಕ್ರಮವನ್ನು ವಿರೋಧಿಸಿ ಬೆಳ್ತಂಗಡಿ ಠಾಣೆ ಮತ್ತು ಆಡಳಿತ ಸೌಧದ ಮುಂಭಾಗದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಪ್ರತಿಭಟನೆ, ಪೊಲೀಸರಿಗೆ ಬೆದರಿಕೆ ಹಾಕಿದ ಕುರಿತು ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಒಟ್ಟು 65 ಮಂದಿಗೆ ಸಮನ್ಸ್ ಜಾರಿ ಮಾಡಿದೆ.
ಮೊದಲ ಪ್ರಕರಣದಲ್ಲಿ 28 ಮಂದಿ ಹಾಗೂ ಎರಡನೇ ಪ್ರಕರಣದಲ್ಲಿ 37 ಮಂದಿಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಆರೋಪಿಗಳು ಜುಲೈ 10ರಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಮೇ 18ರಂದು ನಡೆದ ಠಾಣೆಯ ಮುಂದೆ ಅಕ್ರಮ ಪ್ರತಿಭಟನೆ ಮತ್ತು ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ರಾಜೇಶ ಎಂಕೆ, ಜಗದೀಶ ಕನ್ನಾಜೆ, ಚಂದ್ರಹಾಸ ಬದ್ಯಾರು, ಪ್ರಕಾಶ್ ಆಚಾರಿ, ಸಂದೀಪ್ ರೈ, ನಿತೇಶ್ ಶೆಟ್ಟಿ, ಪವನ್ ಶೆಟ್ಟಿ, ಪ್ರದೀಪ್ ಶೆಟ್ಟಿ, ರಂಜಿತ್ ಶೆಟ್ಟಿ, ಅವಿನಾಶ್ ಕುವೆಟ್ಟು, ಚಂದನ್ ಕಾಮತ್, ಸಂತೋಷ್ ಜೈನ್ ಪಡಂಗಡಿ, ಪುಷ್ಪರಾಜ್ ಶೆಟ್ಟಿ, ಶ್ರೀನಿವಾಸ ರಾವ್, ರಾಜ್ ಪ್ರಕಾಶ್ ಶೆಟ್ಟಿ ಸೇರಿದಂತೆ 28 ಮಂದಿ ವಿರುದ್ಧ ಕೋರ್ಟಿಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.
ಮೇ 20ರಂದು ಆಡಳಿತ ಸೌಧ ಮುಂಭಾಗದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಶಾಸಕ ಹರೀಶ್ ಪೂಂಜ, ಜಯಾನಂದ ಗೌಡ ಕುತ್ಯಾರು, ನವೀನ ನೆರಿಯ, ಚಂದ್ರಹಾಸ ಕಾವು, ಜಗದೀಶ ಲಾಯ್ಲ, ಗಿರೀಶ್ ಡೋಂಗ್ರೆ, ಉಮೇಶ್ ಕುಲಾಲ್ ಕುವೆಟ್ಟು, ಯಶವಂತ ಗೌಡ ಬೆಳಾಲು, ದಿನೇಶ್ ಪೂಜಾರಿ ಚಾರ್ಮಾಡಿ, ಶಶಿಧರ್ ಕಲ್ಮಂಜ, ರವಿನಂದನ್ ನಟ್ಟಿಬೈಲು, ಶಂಕರ ಸಪಲ್ಯ ಸೇರಿ 37 ಮಂದಿ ವಿರುದ್ಧ ಸಮನ್ಸ್ ನೋಟಿಸ್ ಜಾರಿಯಾಗಿದೆ. ಬಹುತೇಕ ಹೆಚ್ಚಿನವರು ಎರಡೂ ಪ್ರಕರಣದಲ್ಲಿ ಆರೋಪಿಗಳಾಗಿ ಗುರುತಿಸಲ್ಪಟ್ಟಿದ್ದು, ನೋಟೀಸ್ ನೀಡಲಾಗಿದೆ. ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಮತ್ತು ಪುತ್ತೂರು ಡಿವೈಎಸ್ಪಿ ಅವರನ್ನು ಒಳಗೊಂಡ ತನಿಖಾ ತಂಡ ಕೇವಲ ಮೂರೇ ದಿನದಲ್ಲಿ ಚಾರ್ಜ್ ಶೀಟ್ ಹಾಕಿದೆ.
Threat to police, court issues summons to Belthangady MLA Harish poonja and 65 others. A case was registered against Mr. Poonja on May 19 after the MLA created a ruckus at Belthangady police station on the night of May 18 over the arrest of Shashiraj Shetty in connection with an illegal quarrying case.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:18 pm
Mangalore Correspondent
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm